ಇಂದು ಪೊಕೊ X4 ಪ್ರೊ 5G ಫೋನ್ ಮೊದಲ ಮಾರಾಟ; ಆಫರ್ ಏನಿದೆ?
ಪೊಕೊ ಕಂಪೆನಿ ಭಾರತದಲ್ಲಿ ಕೆಲ ದಿನಗಳ ಹಿಂದೆ ಪರಿಚಯಿಸಿದ್ದ ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ ತನ್ನ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಮಾ. 05) ಫ್ಲಿಪ್‌ಕಾರ್ಟ್ ತಾಣದಲ್ಲಿ ಮೊಲದ ಮಾರಾಟ ಆರಂಭಿಸಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಹೊಂದಿದೆ. ಈ ಫೋನ್ 120Hz ರಿಪ್ರೆಶ್ ರೇಟ್ ಬೆಂಬಲಿಸುವ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್ ಬೆಂಬಲವನ್ನು ಸಹ ನೀಡುತ್ತದೆ.

ಹೌದು, ಭಾರತದಲ್ಲಿ ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ ಇಂದು ಫಸ್ಟ್ ಸೇಲ್ ನಡೆಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 6GB RAM + 64GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 18,999 ರೂ.ಆಗಿದ್ದು, ಬ್ಲೂ, ಬ್ಲ್ಯಾಕ್ ಹಾಗೂ ಯೆಲ್ಲೋ ಬಣ್ಣಗಳ ಆಯ್ಕೆ ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಮಡಿದೆ ಎಂಬುದನ್ನು ಮಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದ್ದು, 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಒಳಗೊಂಡಿದೆ.
ಪ್ರೊಸೆಸರ್ ಪವರ್ ಯಾವುದು?
ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್
ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯ
ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, ಬ್ಲೂಟೂತ್ 5.1, ವೈಫೈ
ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ 6GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 18,999ರೂ. ಬೆಲೆ ಹೊಂದಿದೆ. ಇನ್ನು ಈ ಫೋನ್‌ನ 6GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 19,999ರೂ.ಆಗಿದೆ. ಹಾಗೆಯೇ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವು 21,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಫೋನ್ ಕಪ್ಪು, ನೀಲಿ ಮತ್ತು ಹಳದಿ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ.


Click it and Unblock the Notifications