ಪೊಕೊ X4 ಪ್ರೊ 5G ಮತ್ತು ಪೊಕೊ M4 ಪ್ರೊ 4G ಅನಾವರಣ! ವಿಶೇಷತೆ ಏನು?

|

ಟೆಕ್‌ ವಲಯದಲ್ಲಿ ಪೊಕೊ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಪೊಕೊ X4 ಪ್ರೊ 5G ಮತ್ತು ಪೊಕೊ M4 ಪ್ರೊ 4G ಸ್ಮಾರ್ಟ್‌ಫೋನ್‌ಗಳನ್ನು ಜಾಗತಿಕವಾಗಿ MWC 2022ಯಲ್ಲಿ ಅನಾವರಣಗೊಳಿಸಿದೆ. ಇದರಲ್ಲಿ ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

ಪೊಕೊ X4 ಪ್ರೊ 5G

ಹೌದು, ಪೊಕೊ ಕಂಪೆನಿ ಹೊಸ ಪೊಕೊ X4 ಪ್ರೊ 5G ಮತ್ತು ಪೊಕೊ M4 ಪ್ರೊ 4G ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಆದರೆ ಪೊಕೊ M4 ಪ್ರೊ 4G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G96 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್‌

ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್‌

ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಒಳಗೊಂಡಿದೆ. ಇದು ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಹೊಂದಿದ್ದು MIUI 13 ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಡೈನಾಮಿಕ್ RAM ವಿಸ್ತರಣೆಯನ್ನು 11GB ವರೆಗೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದ್ದು, 67W ನಲ್ಲಿ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಪೊಕೊ M4 ಪ್ರೊ 4G ಸ್ಮಾರ್ಟ್‌ಫೋನ್‌

ಪೊಕೊ M4 ಪ್ರೊ 4G ಸ್ಮಾರ್ಟ್‌ಫೋನ್‌

ಪೊಕೊ M4 ಪ್ರೊ 4G ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದು 11GB ವರೆಗೆ RAM ಅನ್ನು ಹೆಚ್ಚಿಸಲು ಡೈನಾಮಿಕ್ RAM ವಿಸ್ತರಣೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 61 ನಿಮಿಷಗಳಲ್ಲಿ ಫೋನ್ ಅನ್ನು 0 ರಿಂದ 100 ವರೆಗೆ ಚಾರ್ಜ್ ಮಾಡುತ್ತದೆ ಎಂದು ಕಂಪನಿಯು ತಿಳಿಸಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆ 6GB + 128GB RAM ಮಾದರಿಗೆ EUR 299 (ಸುಮಾರು 25,300ರೂ) ಆಗಿದೆ. ಹಾಗೆಯೇ 8GB + 256GB ರೂಪಾಂತರಕ್ಕಾಗಿ EUR 349 ​​(ಅಂದಾಜು 29,500ರೂ) ನಿಗದಿಪಡಿಸಲಾಗಿದೆ. ಇದು ಲೇಸರ್ ಬ್ಲ್ಯಾಕ್, ಲೇಸರ್ ಬ್ಲೂ ಮತ್ತು ಹೊಸ ಪೊಕೊ ಹಳದಿ ಬಣ್ಣದ ಆಯ್ಕೆಯಲ್ಲಿ ಲಭ್ಯವಿರುತ್ತದೆ.
ಇನ್ನು ಪೊಕೊ M4 ಪ್ರೊ 4G ಸ್ಮಾರ್ಟ್‌ಫೋನ್‌ ಬೆಲೆ 6GB + 128GB RAM ಸ್ಟೋರೇಜ್ ಮಾದರಿಗೆ EUR 219 (ಸುಮಾರು 18,500ರೂ) ಮತ್ತು 8GB + 256GB ರೂಪಾಂತರಕ್ಕಾಗಿ EUR 269 (ಸರಿಸುಮಾರು 22,700ರೂ) ನಿಗದಿಪಡಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಲೇಸರ್ ಬ್ಲಾಕ್, ಲೇಸರ್ ಬ್ಲೂ ಮತ್ತು ಹೊಸ ಪೊಕೊ ಹಳದಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.
ಇದರಲ್ಲಿ ಪೊಕೊ X4 ಪ್ರೊ 5G ಮಾರ್ಚ್ 2 ರಿಂದ ಆನ್‌ಲೈನ್ ಮತ್ತು ಆಫ್‌ಲೈನ್ ರಿಟೇಲ್‌ ಸ್ಟೋರ್‌ಗಳಲ್ಲಿ ಖರೀದಿಸಲು ಲಭ್ಯವಿರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಬಿಡುಗಡೆಯಾಗುತ್ತದೆ ಎಂಬ ವಿವರಗಳನ್ನು ಪೊಕೊ ಕಂಪೆನಿ ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.

Best Mobiles in India

English summary
Poco X4 Pro 5G, Poco M4 Pro 4G Launched Globally at MWC 2022

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X