Home
ಸುದ್ದಿಜಾಲ

ಇಂದು ಪೊಕೊ X5 5G ಫೋನ್‌ ಫಸ್ಟ್‌ ಸೇಲ್‌!..ಆರಂಭದಲ್ಲೇ ಬಿಗ್‌ ಡಿಸ್ಕೌಂಟ್‌!

ಪೊಕೊ ಮೊಬೈಲ್ ಸಂಸ್ಥೆಯು ಇತ್ತೀಚಿಗಷ್ಟೆ ಹೊಸದಾಗಿ ಪರಿಚಯಿಸಿರುವ ಪೊಕೊ X5 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಮಾ. 21 ರಂದು) ಮಧ್ಯಾಹ್ನ 12 ರಿಂದ ಇ-ಕಾಮರ್ಸ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಫಸ್ಟ್‌ ಸೇಲ್ ಆರಂಭವಾಗಲಿದೆ. ಇನ್ನು ಇದೊಂದು ಬಜೆಟ್‌ ದರದ ಸ್ಮಾರ್ಟ್‌ಫೋನ್‌ ಆಗಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ.

ಹೌದು, ಪೊಕೊ X5 5G ಸ್ಮಾರ್ಟ್‌ಫೋನ್ ಇಂದು ಮೊದಲ ಮಾರಾಟ ನಡೆಯಲಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಸೆನ್ಸಾರ್ 48 ಮೆಗಾ ಪಿಕ್ಸಲ್‌ ಆಗಿದೆ. ಹಾಗೆಯೇ ಈ ಫೋನ್ 6GB + 128GB ಮತ್ತು 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಇದರೊಂದಿಗೆ 33W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ.

ಇಂದು ಪೊಕೊ X5 5G ಫೋನ್‌ ಫಸ್ಟ್‌ ಸೇಲ್‌!..ಆರಂಭದಲ್ಲೇ ಬಿಗ್‌ ಡಿಸ್ಕೌಂಟ್‌!

ಪೊಕೊ X5 5G ಸ್ಮಾರ್ಟ್‌ಫೋನ್ ಆರಂಭಿಕ ವೇರಿಯಂಟ್‌ ಬೆಲೆಯು 18,999ರೂ. ಆಗಿದ್ದು, ಆಫರ್‌ನಲ್ಲಿ 16,999ರೂ. ಗಳಿಗೆ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್‌ ಬ್ಲ್ಯಾಕ್, ಬ್ಲೂ ಹಾಗೂ ಗ್ರೀನ್‌ ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಇನ್ನುಳಿದಂತೆ ಪೊಕೊ X5 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ : ಪೊಕೊ X5 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್‌ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ರಕ್ಷಣೆ ಪಡೆದಿದೆ. ಹಾಗೆಯೇ 120hz ಸ್ಕ್ರೀನ್ ರಿಫ್ರೆಶ್ ರೇಟ್‌ ಹಾಗೂ 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲವನ್ನು ಪಡೆದುಕೊಂಡಿರುವ ಈ ಫೋನ್‌, 1200nits ಗರಿಷ್ಠ ಬ್ರೈಟ್‌ನೆಸ್‌ ನೀಡಲಿದೆ. ಈ ಮೂಲಕ ಎಂತಹ ಸೂರ್ಯನ ಬೆಳಕಿನ ಪ್ರಖರತೆಯಲ್ಲೂ ಸ್ಪಷ್ಟವಾಗಿ ಮೊಬೈಲ್‌ ಡಿಸ್‌ಪ್ಲೇ ವೀಕ್ಷಣೆ ಮಾಡಬಹುದು.

ಇಂದು ಪೊಕೊ X5 5G ಫೋನ್‌ ಫಸ್ಟ್‌ ಸೇಲ್‌!..ಆರಂಭದಲ್ಲೇ ಬಿಗ್‌ ಡಿಸ್ಕೌಂಟ್‌!

ಪ್ರೊಸೆಸರ್‌ ಬಲ : ಪೊಕೊ X5 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 695 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, 8GB RAM ಹಾಗೂ 256GB ಇಂಟರ್‌ ಸ್ಟೋರೇಜ್‌ ಸೇರಿದಂತೆ ಎರಡು ವೇರಿಯಂಟ್‌ನಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ 5GB ಯ ಹೆಚ್ಚುವರಿ ಟರ್ಬೊ RAM ವಿಸ್ತರಣೆ ಸೌಲಭ್ಯವನ್ನೂ ಒದಗಿಸಲಾಗಿದೆ.

ಕ್ಯಾಮೆರಾ ಆಯ್ಕೆ : ಪೊಕೊ X5 5G ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ 48 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹಾಗೂ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾದ ಆಯ್ಕೆ ನೀಡಲಾಗಿದೆ. ಇದರೊಂದಿಗೆ ಹೆಚ್‌ಡಿಆರ್‌ ಫೀಚರ್ಸ್‌, ನೈಟ್ ಮೋಡ್ ಮತ್ತು ಕ್ಯಾಪ್ಚರ್ ಮೋಡ್‌ಗಳನ್ನು ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾವನ್ನು ನೀಡಲಾಗಿದೆ.

ಇಂದು ಪೊಕೊ X5 5G ಫೋನ್‌ ಫಸ್ಟ್‌ ಸೇಲ್‌!..ಆರಂಭದಲ್ಲೇ ಬಿಗ್‌ ಡಿಸ್ಕೌಂಟ್‌!

ಬ್ಯಾಟರಿ ಬ್ಯಾಕ್‌ಅಪ್‌ : ಪೊಕೊ X5 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದ್ದು, ಇದು 33W ವೇಗದ ಚಾರ್ಜಿಂಗ್‌ಗೆ ಬೆಂಬಲ ನೀಡಲಿದೆ. ಈ ಮೂಲಕ 22 ನಿಮಿಷಗಳಲ್ಲಿ ಫೋನ್‌ ಅನ್ನು ಸಂಪೂರ್ಣವಾಗಿ ಚಾರ್ಜಿಂಗ್‌ ಮಾಡಿಕೊಳ್ಳಬಹುದಾಗಿದೆ. ಹಾಗೆಯೇ ಈ ಫೋನ್ ಸೂಪರ್ನೋವಾ ಗ್ರೀನ್, ವೈಲ್ಡ್ಕ್ಯಾಟ್ ಬ್ಲೂ ಮತ್ತು ಜಾಗ್ವಾರ್ ಬ್ಲಾಕ್‌ ಎಂಬ ಮೂರು ಬಣ್ಣದ ಆಯ್ಕೆಯಲ್ಲಿ ಲಭ್ಯ.

ಆಫರ್‌ : ಈ ಫೋನ್‌ ಆರಂಭಿಕ ಕೊಡುಗೆಯಾಗಿ ಫ್ಲಿಪ್‌ಕಾರ್ಟ್‌ ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳನ್ನು ಬಳಕೆ ಮಾಡಿಕೊಂಡು ಫೋನ್‌ ಖರೀದಿ ಮಾಡುವ ಗ್ರಾಹಕರು 2,000ರೂ. ಗಳ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ.

Best Mobiles in India

English summary
POCO X5 5G will be available at a starting price of Rs 16,999. check specifications and more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+