128GB ಸ್ಟೋರೇಜ್ ಆಯ್ಕೆಯ ಈ ಫೋನ್ ಮೇಲೆ 34% ಡಿಸ್ಕೌಂಟ್! ಖರೀದಿಗೆ ಮುಗಿಬಿದ್ದ ಗ್ರಾಹಕರು!
ಪೊಕೊ X5 ಪ್ರೊ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಫ್ಲಿಪ್‌ಕಾರ್ಟ್ ಸಿಹಿಸುದ್ದಿಯನ್ನು ನೀಡಿದೆ. ಸಾಕಷ್ಟು ಜನಪ್ರಿಯತೆ ಉಳಿಸಿಕೊಂಡಿರುವ ಈ ಸ್ಮಾರ್ಟ್‌ಫೋನ್ ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ವಿಶೇಷ ರಿಯಾಯಿತಿ ಪಡೆದುಕೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 778G ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ಪೊಕೊ X5 ಪ್ರೊ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ತಾಣದಲ್ಲಿ 34% ಡಿಸ್ಕೌಂಟ್ ಪಡೆದುಕೊಂಡಿದೆ. ಇದರಿಂದ ಇದರ ಮೂಲಬೆಲೆಯಲ್ಲಿ ಭಾರಿ ಬದಲಾವಣೆ ಆಗಿದೆ. ಈ ಸ್ಮಾರ್ಟ್‌ಫೋನ್‌ನ 6 GB RAM ಮತ್ತು 128 GB ಸ್ಟೋರೇಜ್ ಆಯ್ಕೆಗೆ ಈ ಡಿಸ್ಕೌಂಟ್ ಅನ್ವಯವಾಗಲಿದೆ. ಹಾಗಾದ್ರೆ ಪೊಕೊ X5 ಪ್ರೊ ಸ್ಮಾರ್ಟ್‌ಫೋನ್ ಬೆಲೆ ಎಷ್ಟಿದೆ? ಡಿಸ್ಕೌಂಟ್ ನಂತರದ ಬೆಲೆ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ X5 ಪ್ರೊ ಡಿಸ್ಕೌಂಟ್ ಎಷ್ಟಿದೆ?
ಪೊಕೊ X5 ಪ್ರೊ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 25,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಸ್ಮಾರ್ಟ್‌ಫೋನ್ ಮೇಲೆ 34% ಡಿಸ್ಕೌಂಟ್ ನೀಡಲಾಗುತ್ತಿರುವುದರಿಂದ ಫೋನ್ ನಿಮಗೆ ಕೇವಲ 16,999ರೂ ಬೆಲೆಯಲ್ಲಿ ಲಭ್ಯವಾಗಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಅನ್ನು ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್ ಮೂಲಕ EMI ನಲ್ಲಿ ಖರೀದಿಸಿದರೆ ಹೆಚ್ಚುವರಿಯಾಗಿ 10% ರಿಯಾಯಿತಿ ಸಿಗಲಿದೆ. ಜೊತೆಗೆ IDFC ಮೊದಲ ಬ್ಯಾಂಕ್ ಕ್ರೆಡಿಟ್ ಕಾರ್ಡ್ EMI ವಹಿವಾಟುಗಳ ಮೇಲೆ ಬ್ಯಾಂಕ್ ಆಫರ್ 10% ರಿಯಾಯಿತಿ ದೊರೆಯಲಿದೆ.
ಪೊಕೊ X5 ಪ್ರೊ ಫೀಚರ್ಸ್ ಹೇಗಿದೆ?
ಪೊಕೊ X5 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರ ರಕ್ಷಣೆ ಪಡೆದಿದ್ದು, ಡೈನಾಮಿಕ್ 120 Hz ರಿಫ್ರೆಶ್ ರೇಟ್ ಮತ್ತು ಡಾಲ್ಬಿ ವಿಷನ್‌ಗೆ ಸಪೋರ್ಟ್ ಸಹ ಒಳಗೊಂಡಿದೆ.
ಪೊಕೊ X5 ಪ್ರೊ ಪ್ರೊಸೆಸರ್ ಯಾವುದು?
ಇನ್ನು ಪೊಕೊ X5 ಪ್ರೊ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 778G ಪ್ರೊಸೆಸರ್ ಸಾಮರ್ಥ್ಯ ವನ್ನು ಪಡೆದಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಹಾಗೆಯೇ ಇದರಲ್ಲಿ ಅತ್ಯುತ್ತಮ ಗೇಮಿಂಗ್ ಅನುಭವ ಕೂಡಾ ಲಭ್ಯವಾಗಲಿದ್ದು, 6GB RAM + 128GB ಇಂಟರ್ ಸ್ಟೋರೇಜ್ ಆಯ್ಕೆ ಅನ್ನು ಪಡೆದುಕೊಂಡಿದೆ.

ಪೊಕೊ X5 ಪ್ರೊ ಕ್ಯಾಮೆರಾ ರಚನೆ
ಪೊಕೊ X5 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಒಳಗೊಂಡಿದ್ದು, ಈ ಫೋನ್ 108 ಮೆಗಾ ಪಿಕ್ಸೆಲ್ ಪ್ರಾಥಮಿಕ ಸೆನ್ಸರ್, ಇದು 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸರ್ ಮತ್ತು 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಆಯ್ಕೆ ಪಡೆದುಕೊಂಡಿದೆ. ಈ ಮೂಲಕ ಬಳಕೆದಾರರು 4K ವಿಡಿಯೋಗಳನ್ನು ಸಹ ಶೂಟ್ ಮಾಡಬಹುದು. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸೌಲಭ್ಯವನ್ನು ಕೂಡಾ ಪಡೆದುಕೊಂಡಿದೆ.
ಪೊಕೊ X5 ಪ್ರೊ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಪೊಕೊ X5 ಪ್ರೊ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಉತ್ತಮ ಬ್ಯಾಟರಿ ಬ್ಯಾಕಪ್ ಪಡೆದುಕೊಳ್ಳಬಹುದಾಗಿದೆ. ಇದಕ್ಕೆ ಅನುಗುಣವಾಗಿ 67W ಸಾಮರ್ಥ್ಯದ ಫಾಸ್ಟ್ ಚಾರ್ಜರ್ ಸೌಲಭ್ಯ ಪಡೆದಿದ್ದು, ಇದು ಸುಮಾರು 15 ನಿಮಿಷದಲ್ಲಿ ಸ್ಮಾರ್ಟ್‌ಫೋನ್ ಅನ್ನು ಸುಮಾರು 50 ಪ್ರತಿಶತ ಚಾರ್ಜ್ ಮಾಡುತ್ತದೆ.

ಪೊಕೊ X5 ಪ್ರೊ ಕಲರ್ ಮತ್ತು ಲಭ್ಯತೆ
ಪೊಕೊ X5 ಪ್ರೊ ಫೋನ್ 6 GB RAM + 128 GB ಹಾಗೂ 8GB + 256GB ಸ್ಟೋರೇಜ್ ಆಯ್ಕೆಯ ವೇರಿಯಂಟ್‌ಗಳನ್ನು ಪಡೆದಿದೆ. ಹಾಗೆಯೇ ಗ್ರಾಹಕರು ಈ ಫೋನ್ ಅನ್ನು ಯೆಲ್ಲೋ, ಬ್ಲೂ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ.


Click it and Unblock the Notifications








