Poco X5 Pro 5G : ಸ್ಟೈಲಿಶ್ ಲುಕ್‌ನಿಂದ ಗಮನಸೆಳೆದಿದ್ದ ಪೊಕೊ X5 ಪ್ರೊ 5G ಬಿಡುಗಡೆ! ಬೆಲೆ ಎಷ್ಟು?
ತನ್ನ ಸ್ಟೈಲಿಶ್ ಲುಕ್ ಮೂಲಕವೇ ಟೆಕ್ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಬಹು ನಿರೀಕ್ಷಿತ ಪೊಕೊ X5 ಪ್ರೊ 5G ಫೋನ್ ಭಾರತಕ್ಕೆ ಎಂಟ್ರಿ ನೀಡಿದೆ. ಆಕರ್ಷಕ ಡಿಸೈನ್ ಮೂಲಕವೇ ಗಮನ ಸೆಳೆದಿರುವ ಈ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಯಲ್ಲಿ ಇದೀಗ ಅನಾವರಣಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 108 ಮೆಗಾಪಿಕ್ಸೆಲ್ ಕ್ಯಾಮೆರಾ ಒಳಗೊಂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದು ಮಿಡ್ ರೇಂಜರ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಪೊಕೊ ಕಂಪೆನಿಯ ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಲಾಂಚ್ ಆಗಿದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಕ್ಸ್‌ಫಿನಿಟಿ ಅಮೋಲೆಡ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನ ವಿಶೇಷತೆ ಏನು? ಇದರಲ್ಲಿ ಯಾವೆಲ್ಲಾ ಫೀಚರ್ಸ್‌ಗಳನ್ನು ನೀಡಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.
ಪೊಕೊ X5 ಪ್ರೊ 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?
ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್ 6.67 ಇಂಚಿನ ಎಕ್ಸ್‌ಫಿನಿಟಿ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ. ಜೊತೆಗೆ ಡಿಸ್‌ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್, HDR10+ ಬೆಂಬಲ ಮತ್ತು ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಬೆಂಬಲಿಸಲಿದೆ.

ಪೊಕೊ X5 ಪ್ರೊ 5G ಪ್ರೊಸೆಸರ್ ಯಾವುದು?
ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ MIUI 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ 2 ವರ್ಷಗಳ ಆಂಡ್ರಾಯ್ಡ್ OS ಅಪ್ಡೇಟ್ ಮತ್ತು 3 ವರ್ಷಗಳ ಸೆಕ್ಯುರಿಟಿ ಪ್ಯಾಚ್‌ಗಳ ಭರವಸೆ ನೀಡಲಾಗಿದೆ. ಹಾಗೆಯೇ 8GB RAM ಮತ್ತು 256GB ಇನ್‌ಬಿಲ್ಟ್ ಸ್ಟೋರೇಜ್ ಅನ್ನು ಹೊಂದಿದೆ. ಇದರಲ್ಲಿ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಾಗಿಲ್ಲ.
ಪೊಕೊ X5 ಪ್ರೊ 5G ಕ್ಯಾಮೆರಾ ಸೆಟ್‌ಅಪ್ ಏನಿದೆ?
ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ISOCELL HM2 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇನ್ನು ಹಿಂಭಾಗದ ಕ್ಯಾಮೆರಾಗಳ ಮೂಲಕ 30fps ನಲ್ಲಿ 4K ವೀಡಿಯೊಗಳನ್ನು ರೆಕಾರ್ಡ್ ಮಾಡಬಹುದಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಪೊಕೊ X5 ಪ್ರೊ 5G ಬ್ಯಾಟರಿ ಬ್ಯಾಕ್‌ಅಪ್ ಏನಿದೆ?
ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಮತ್ತು 5W ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ಡ್ಯುಯಲ್-ಬ್ಯಾಂಡ್ Wi-Fi ಮತ್ತು ಬ್ಲೂಟೂತ್ 5.1 ವೈರ್‌ಲೆಸ್ ಸಂಪರ್ಕವನ್ನು ಬೆಂಬಲಿಸಲಿದೆ.
ಪೊಕೊ X5 ಪ್ರೊ 5G ಬೆಲೆ ಮತ್ತು ಲಭ್ಯತೆ
ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 22,999ರೂ.ಬೆಲೆ ಹೊಂದಿದೆ. ಇದರ 8GB RAM + 256GB ಸ್ಟೋರೇಜ್ ಮಾದರಿಯ ಆಯ್ಕೆಯ ಬೆಲೆ 24,999ರೂ. ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮೂಲಕ ಆಸ್ಟ್ರಲ್ ಬ್ಲಾಕ್, ಹಾರಿಜಾನ್ ಬ್ಲೂ ಮತ್ತು ಹಳದಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








