Home
ಸುದ್ದಿಜಾಲ

ಪೊಕೊ X5 ಪ್ರೊ ಲಾಂಚ್‌ಗೆ ಡೇಸ್‌ ಫಿಕ್ಸ್‌; ಭಾರೀ ಕುತೂಹಲ ಮೂಡಿಸಿದ ಫೀಚರ್ಸ್‌!

ಮಾರುಕಟ್ಟೆಯಲ್ಲಿ ಬಜೆಟ್‌ ಬೆಲೆಯ ಫೋನ್‌ಗಳಲ್ಲಿ ಸದ್ದು ಮಾಡಿತ್ತಿರುವ ಪ್ರಮುಖ ಬ್ರ್ಯಾಂಡ್‌ಗಳಲ್ಲಿ ಪೊಕೊ ಸಹ ಒಂದಾಗಿದೆ. ಪೊಕೊ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೊಕೊ X5 ಪ್ರೊ (Poco X5 Pro) ಅನ್ನು ಅಧಿಕೃತವಾಗಿ ಲಾಂಚ್ ಮಾಡಲು ಮುಹೂರ್ತ ನಿಗದಿ ಮಾಡಿಕೊಂಡಿದೆ.

ಪೊಕೊ X5 ಪ್ರೊ ಲಾಂಚ್‌ಗೆ ಡೇಸ್‌ ಫಿಕ್ಸ್‌; ಭಾರೀ ಕುತೂಹಲ ಮೂಡಿಸಿದ ಫೀಚರ್ಸ್‌!

ಹೌದು, ಪೊಕೊ ತನ್ನ ನೂತನ ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಇದೇ ಫೆಬ್ರವರಿ 6 ರಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡುವುದಾಗಿ ಅಧಿಕೃತವಾಗಿ ಘೋಷಿಸಲಾಗಿದೆ. ಈ ಬಗ್ಗೆ ಪೊಕೊ ಇಂಡಿಯಾ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸೂಷಿಸಿದೆ. ಅಂದಹಾಗೆ ಈ ಫೋನಿನ ಫೀಚರ್ಸ್‌ಗಳ ಬಗ್ಗೆ ಈಗಾಗಲೇ ಆನ್‌ಲೈನ್‌ನಲ್ಲಿ ಮಾಹಿತಿ ಲೀಕ್ ಆಗಿದ್ದು, ಫೋಟೊಗಳು ಸಹ ಸೋರಿಕೆ ಆಗಿವೆ. ಇದು ಗ್ರಾಹಕರ ಕುತೂಹಲ ಹೆಚ್ಚಿಸಿದೆ.

ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್‌ 778G SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ 12GB RAM ಮತ್ತು 512GB ಇನ್‌ಬಿಲ್ಟ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ. ಪೊಕೊ X5 ಫ್ಲಾಟ್ ಫ್ರೇಮ್ ರಚನೆ ಪಡೆದಿದ್ದು, ಹಿಂಭಾಗದಲ್ಲಿ ಕರ್ವ ಪ್ಯಾನೆಲ್ ಅನ್ನು ಪಡೆದಿದೆ. ಗ್ರೇ ಬಣ್ಣಗಳಲ್ಲಿ ಗ್ರೇಡಿಯಂಟ್ ಟಚ್ ಅನ್ನು ಹೊಂದಿದೆ. ಇದು 120 Hz ಡಿಸ್‌ಪ್ಲೇ ಅನ್ನು ಪಡೆದಿದ್ದು, OLED ಮಾದರಿಯ ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗಾದರೆ ಪೊಕೊ X5 ಪ್ರೊ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಪೊಕೊ X5 ಪ್ರೊ ಲಾಂಚ್‌ಗೆ ಡೇಸ್‌ ಫಿಕ್ಸ್‌; ಭಾರೀ ಕುತೂಹಲ ಮೂಡಿಸಿದ ಫೀಚರ್ಸ್‌!

ಪೊಕೊ X5 ಪ್ರೊ: ಡಿಸ್‌ಪ್ಲೇ ಹೇಗಿರಬಹುದು?
ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂಬ ವರದಿಯಿದೆ. ಈ ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಬೆಂಬಲಿಸಲಿದೆ. ಅಲ್ಲದೆ 120Hz ಅಡಾಪ್ಟಿವ್ ರಿಫ್ರೆಶ್ ರೇಟ್‌, HDR10+ ಬೆಂಬಲವನ್ನು ನೀಡಬಹುದು.

ಪೊಕೊ X5 ಪ್ರೊ: ಪ್ರೊಸೆಸರ್‌ ಯಾವುದು?
ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13ನಲ್ಲಿ ರನ್‌ ಆಗಲಿದೆ ಎಂದು ಹೇಳಲಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 512GB ವರೆಗಿನ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಪೊಕೊ X5 ಪ್ರೊ: ಕ್ಯಾಮೆರಾ ಸೆಟ್‌ಅಪ್‌ ಎಷ್ಟಿರಬಹುದು?
ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ ಅನ್ನೊದು ಪಕ್ಕಾ ಆಗಿದೆ. ಇದರ ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌, ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಪೊಕೊ X5 ಪ್ರೊ: ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಬಹುದು ಎಂದು ಅಂದಾಜಿಸಲಾಗಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿರಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ. ಈ ಸ್ಮಾರ್ಟ್‌ಫೋನ್ ಅನ್ನು ಫೆಬ್ರವರಿ 6 ರಂದು ಅನಾವರಣಗೊಳಿಸಲಾಗುವುದು ಎಂದು ಕಂಪೆನಿ ತಿಳಿಸಿದೆ.

Best Mobiles in India

English summary
Poco X5 Pro will be officially announced on February 6. check expected price and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+