ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಪೊಕೊ X5 ಸ್ಮಾರ್ಟ್‌ಫೋನ್! ಏನೆಲ್ಲಾ ನಿರೀಕ್ಷೆ?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಕಂಪೆನಿಗಳಲ್ಲಿ ಪೊಕೊ ಕೂಡ ಒಂದಾಗಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸದ್ಯ ಇದೀಗ ಭಾರಿ ನಿರೀಕ್ಷೆ ಹುಟ್ಟುಹಾಕಿರುವ ಪೊಕೊ X5 ಕೆಲವೇ ದಿನಗಳಲ್ಲಿ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ವರದಿಯಾಗಿದೆ.
ಹೌದು, ಈಗಾಗಲೇ ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡಿರುವ ಪೊಕೊ X5 ಸ್ಮಾರ್ಟ್‌ಫೋನ್ ಸದ್ಯದಲ್ಲೇ ಭಾರತದಲ್ಲಿಯೂ ತನ್ನ ಎಂಟ್ರಿ ನೀಡಲಿದೆ. ಇದನ್ನು ಭಾರತ ದೇಶದಲ್ಲಿ ಪೊಕೊ ಮುಖ್ಯಸ್ಥರಾಗಿರುವ ಹಿಮಾಂಶು ಟಂಡನ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್ ಮೂಲಕ ಖಚಿತಪಡಿಸಿದ್ದಾರೆ. ಹಾಗಾದ್ರೆ ಈ ಹೊಸ ಪೊಕೊ X5 ಸ್ಮಾರ್ಟ್‌ಫೋನ್ ಏನೆಲ್ಲಾ ಫೀಚರ್ಸ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ X5 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ನಿರೀಕ್ಷೆ ಏನು?
ಭಾರತದಲ್ಲಿ ಪೊಕೊ X5 ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಜೊತೆಗೆ ಡಿಸ್‌ಪ್ಲೇ 1200ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ.
ಪೊಕೊ X5 ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ಪೊಕೊ X5 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ಪೊಕೊ X5 ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್ ಏನು?
ಪೊಕೊ X5 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಪಡೆದುಕೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.
ಪೊಕೊ X5 ಸ್ಮಾರ್ಟ್‌ಫೋನ್ ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ಪೊಕೊ X5 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜರ್ ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಬ್ಯಾಂಡ್ ವೈಫೈ, ಬ್ಲೂಟೂತ್ 5.1, USB ಟೈಪ್-C 2.0, OTGಯನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸಾರ್, ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಪೊಕೊ X5 ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ?
ಪೊಕೊ X5 ಸ್ಮಾರ್ಟ್‌ಫೋನ್ ಭಾರತದಲ್ಲಿ 22,999ರೂ.ಗಿಂತ ಕಡಿಮೆ ಬೆಲೆಯಲ್ಲಿ ಬರುವ ಸಾಧ್ಯತೆಯಿದೆ. ಆದರೆ ಈ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಹತ್ತಿರವಾದಾಗ ಈ ಫೋನ್‌ನ ನಿಖರ ಬೆಲೆ ಹಾಗೂ ಲಭ್ಯತೆ ವಿವರ ತಿಳಿಯಲಿದೆ.
ಇನ್ನು ಪೊಕೊ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಕ್ಸ್‌ಫಿನಿಟಿ ಅಮೋಲೆಡ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 108 ಮೆಗಾಪಿಕ್ಸೆಲ್ ಕ್ಯಾಮೆರಾ ಒಳಗೊಂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದು ಮಿಡ್ ರೇಂಜರ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








