Poco: ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಪೊಕೊ X6 ನಿಯೋ ಸ್ಮಾರ್ಟ್‌ಫೋನ್!
ಪೊಕೊ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಭಾರಿ ಜನಪ್ರಿಯತೆ ಪಡೆದುಕೊಂಡಿದೆ. ಇದಕ್ಕೆ ಅನುಗುಣವಾಗಿ ಪೊಕೊ ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ಪೊಕೊ ಸಂಸ್ಥೆ ಹೊಸದಾಗಿ Poco X6 Neo ಸ್ಮಾರ್ಟ್‌ಫೋನ್ ಪರಿಚಯಿಸುವುದಕ್ಕೆ ಸಿದ್ಧತೆ ನಡೆಸಿದೆ.
ಹೌದು, Poco X6 Neo ಸ್ಮಾರ್ಟ್‌ಫೋನ್ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಇಲ್ಲಿಯವರೆಗೂ ಈ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ Poco X6 Neo ಸ್ಮಾರ್ಟ್‌ಫೋನಿನ ಫೀಚರ್ಸ್ ಆನ್‌ಲೈನ್ ಬಹಿರಂಗವಾಗಿದೆ. ಅದರಂತೆ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ನೊಂದಿಗೆ ಬರಲಿದೆ ಎನ್ನಲಾಗಿದೆ. ಹಾಗಾದ್ರೆ Poco X6 Neo ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Poco X6 Neo ಫೀಚರ್ಸ್ ಹೇಗಿದೆ?
Poco X6 Neo ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯೊಂದಿಗೆ ಬರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಡಿಸ್‌ಪ್ಲೇ 1920Hz PWM ಡಿಮ್ಮಿಂಗ್, 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ನೀಡಲಿದೆ ಎನ್ನಲಾಗಿದೆ. ಜೊತೆಗೆ ಡಿಸ್‌ಪ್ಲೇಯು 120 Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಪಡೆದಿರಲಿದೆ ಎನ್ನಲಾಗಿದೆ.
Poco X6 Neo ಪ್ರೊಸೆಸರ್ ಯಾವುದು?
Poco X6 Neo ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ವೇಗದೊಂದಿಗೆ ಬರಲಿದೆ. ಇದು ಆಂಡ್ರಾಯ್ಡ್ v13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM + 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿರಲಿದೆ ಎನ್ನಲಾಗಿದೆ. ಇದು ಮೆಮೊರಿ ಕಾರ್ಡ್ ಅನ್ನು ಸಹ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

Poco X6 Neo ಕ್ಯಾಮೆರಾ ಸೆಟಪ್ ಏನಿದೆ?
Poco X6 Neo ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದಲ್ಲದೆ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿರಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ನೊಂದಿಗೆ ಬರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾವನ್ನು ಒಳಗೊಂಡಿದೆ.
Poco X6 Neo ಬ್ಯಾಟರಿ ಮತ್ತು ಇತರೆ
Poco X6 Neo ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 33W ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಈ ಫೋನ್ IP54 ರೇಟೆಡ್ ಬಿಲ್ಡ್ ಅನ್ನು ಹೊಂದಿರಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್ ಸೆನ್ಸಾರ್, ಗೈರೊ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಕಂಪಾಸ್ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

Poco X6 Neo ಬೆಲೆ ಮತ್ತು ಲಭ್ಯತೆ
Poco X6 Neo ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ ವಿವರಗಳು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.
ಇನ್ನು ಪೊಕೊ ಕಂಪೆನಿ ತೀರಾ ಇತ್ತೀಚಿಗೆ ಪೊಕೊ M6 ಪ್ರೊ ಫೋನ್‌ನ 4G ರೂಪಾಂತರವನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ರಚನೆ ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯೊಂದಿಗೆ ಬರುತ್ತದೆ.


Click it and Unblock the Notifications








