Home
ಸುದ್ದಿಜಾಲ

ಇಂದು ಮಾರುಕಟ್ಟೆಗೆ ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ ಪೊಕೊ X6 ನಿಯೋ ಫೋನ್‌!

ಪೊಕೊ ಮೊಬೈಲ್‌ ಕಂಪನಿಯ ಪೊಕೊ X6 ನಿಯೋ ಮೊಬೈಲ್‌ ಇಂದು (ಮಾರ್ಚ್ 13 ರಂದು) ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಈಗಾಗಲೇ ಲೀಕ್‌ ಫೀಚರ್ಸ್‌ಗಳಿಂದ ಗಮನ ಸೆಳೆದಿರುವ ಈ ಫೋನ್‌ ಮಾದರಿಯಲ್ಲಿರುವ ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್‌ ಸೌಲಭ್ಯ ಪಡೆದುಕೊಂಡಿದೆ.

ಹೌದು, ಪೊಕೊ ಕಂಪನಿಯು ಪೊಕೊ X6 ನಿಯೋ ಮೊಬೈಲ್‌ ಅನ್ನು ಇಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಲಿದೆ. ಇದು ಬಜೆಟ್‌ ಲೆವೆಲ್‌ ಫೋನ್‌ ಎನಿಸಿದ್ದರೂ, ಇದು ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ.

ಇಂದು ಮಾರುಕಟ್ಟೆಗೆ ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ ಪೊಕೊ X6 ನಿಯೋ ಫೋನ್‌!

ಇದೇ ರೀತಿ ಪೊಕೊ X6 ನಿಯೋ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೌಲಭ್ಯ ಪಡೆದಿದ್ದು, 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದಿರಲಿದೆ. ಇದಲ್ಲದೇ ಈ ಫೋನಿನ ಇನ್ನೊಂದು ಪ್ರಮುಖ ಹೈಲೈಟ್‌ ಎಂದರೆ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಪೊಕೊ X6 ನಿಯೋ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಪೊಕೊ X6 ನಿಯೋ ನಿರೀಕ್ಷಿತ ಫೀಚರ್ಸ್‌

ಪೊಕೊ X6 ನಿಯೋ ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಜೊತೆಗೆ ಬರಲಿದೆ. ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ. ಇನ್ನು ಡಿಸ್‌ಪ್ಲೇ 120Hz, 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇಯು 88.9% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿ ಬರಲಿದ್ದು, 20:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಈ ಡಿಸ್‌ಪ್ಲೇಯು OLED ಸ್ಕ್ರೀನ್‌ ಪಡೆದಿರಲಿದೆ.

ಪೊಕೊ X6 ನಿಯೋ ಮೊಬೈಲ್‌ ಮೀಡಿಯಾಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್‌ ಪವರ್‌ ಅನ್ನು ಹೊಂದಿರಲಿದ್ದು, ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB, 8GB RAM ಮತ್ತು 256GB, 12GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಅಯ್ಕೆಯಲ್ಲಿ ಬರಲಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಪೊಕೊ X6 ನಿಯೋ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿರುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಇರಲಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಬಹುದು ಎಂದು ಅಂದಾಜಿಸಲಾಗಿದೆ.

ಪೊಕೊ X6 ನಿಯೋ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿರಲಿದ್ದು, ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿರಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಕಂಪಾಸ್‌ ನಂತಹ ಆಯ್ಕೆಗಳನ್ನು ಪಡೆದಿರುವ ಸಾಧ್ಯತೆಗಳು ಇವೆ.

ಭಾರತದಲ್ಲಿ ಪೊಕೊ X6 ನಿಯೋ ಫೋನ್‌ ಮಾರ್ಚ್ 13 ರಂದು ಬಿಡುಗಡೆ ಆಗಲಿದೆ ಎಂದು ಪೊಕೊ ದೃಢಪಡಿಸಿದೆ. ಫ್ಲಿಪ್‌ಕಾರ್ಟ್‌ ಇ-ಕಾಮರ್ಸ್ ವೆಬ್‌ಸೈಟ್‌ನಲ್ಲಿರುವ ಮೈಕ್ರೋಸೈಟ್ ಮುಂಬರುವ ಹ್ಯಾಂಡ್‌ಸೆಟ್ ಅನ್ನು ನೀಲಿ ಬಣ್ಣದ ಆಯ್ಕೆಯಲ್ಲಿ ಗುರುತಿಸಲಾಗಿದೆ.

Best Mobiles in India

English summary
Poco X6 Neo india launch today. check specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+