Home
ಸುದ್ದಿಜಾಲ

ಶೀಘ್ರದಲ್ಲೇ ಬರಲಿದೆ ಪೊಕೊ X6 ನಿಯೋ ಫೋನ್‌: ಏನೆಲ್ಲಾ ನಿರೀಕ್ಷೆ

ಪೊಕೊ ಕಂಪೆನಿ ಭಾರತದಲ್ಲಿ ಸದ್ಯದಲ್ಲೇ ಹೊಸ Poco X6 Neo ಫೋನ್‌ ಬಿಡುಗಡೆ ಮಾಡುವುದಕ್ಕೆ ತಯಾರಿ ನಡೆಸಿಎ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಎನ್ನಾಗಿದ್ದು, ಇದೀಗ ಫೋನ್‌ನ ಫೀಚರ್ಸ್‌ ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಎಲ್ಇಡಿ ಫ್ಲ್ಯಾಷ್ ಯೂನಿಟ್‌ ಜೊತೆಗೆ ಡ್ಯುಯಲ್‌ ಕ್ಯಾಮೆರಾ ಹೊಂದಿರಲಿದೆ.

ಹೌದು, Poco X6 Neo ಸ್ಮಾರ್ಟ್‌ಪೋನ್‌ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಸ್ಮಾರ್ಟ್‌ಫೋನ್‌ನ ಲಾಂಚ್ ದಿನಾಂಕದ ಜೊತೆಗೆ ಫೋನ್‌ನ ವಿನ್ಯಾಸ ಕೂಡ ಇದೀಗ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್‌ ಬೆಜೆಲ್-ಲೆಸ್ ಡಿಸೈನ್ ಹೊಂದಿರಲಿದೆ ಎಂದು ವರದಿಯಾಗಿದೆ. ಹಾಗಾದರೆ Poco X6 Neo ಸ್ಮಾರ್ಟ್‌ಫೋನಿನ ಫೀಚರ್ಸ್‌ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶೀಘ್ರದಲ್ಲೇ ಬರಲಿದೆ ಪೊಕೊ X6 ನಿಯೋ ಫೋನ್‌: ಏನೆಲ್ಲಾ ನಿರೀಕ್ಷೆ

ಪೊಕೊ X6 ನಿಯೋ ಫೋನಿನ ಫೀಚರ್ಸ್‌ ನಿರೀಕ್ಷೆ?
ಪೊಕೊ X6 ನಿಯೋ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯೊಂದಿಗೆ ಬರಲಿದೆ. ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 120Hz, 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇದಲ್ಲದೆ ಡಿಸ್‌ಪ್ಲೇಯು 88.9% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿ ಬರಲಿದ್ದು, 20:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಈ ಡಿಸ್‌ಪ್ಲೇಯು OLED ಸ್ಕ್ರೀನ್‌ ಹೊಂದಿರಲಿದೆ ಎಂದು ಸಹ ಸುದ್ದಿಯಾಗಿದೆ.

ಪೊಕೊ X6 ನಿಯೋ ಪ್ರೊಸೆಸರ್‌ ಯಾವುದು?
ಪೊಕೊ X6 ನಿಯೋ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್‌ ವೇಗವನ್ನು ಹೊಂದಿರಲಿದ್ದು, ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB, 8GB RAM ಮತ್ತು 256GB, 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅಯ್ಕೆಯಲ್ಲಿ ಬರಲಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಪೊಕೊ X6 ನಿಯೋ ಕ್ಯಾಮೆರಾ ಸೆಟಪ್‌ ಏನಿರಬಹುದು?
ಪೊಕೊ X6 ನಿಯೋ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾದೊಂದಿಗೆ ಬರುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108-ಮೆಗಾಪಿಕ್ಸೆಲ್ ಸೆನ್ಸಾರ್‌ ಇರಲಿದೆ. ಎರಡನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಪೊಕೊ X6 ನಿಯೋ ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಪೊಕೊ X6 ನಿಯೋ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿರಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಕಂಪಾಸ್‌ ನಂತಹ ಆಯ್ಕೆಗಳನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಪೊಕೊ X6 ನಿಯೋ ಲಭ್ಯತೆ ಯಾವಾಗ
ಭಾರತದಲ್ಲಿ ಪೊಕೊ X6 ನಿಯೋ ಫೋನ್‌ ಮಾರ್ಚ್ 13 ರಂದು ಬಿಡುಗಡೆ ಆಗಲಿದೆ ಎಂದು Poco India X (ಹಿಂದೆ Twitter) ನಲ್ಲಿ ಪೋಸ್ಟ್ ಮೂಲಕ ದೃಢಪಡಿಸಿದೆ. ಈ ಫೋನ್ ಫ್ಲಿಪ್‌ಕಾರ್ಟ್ ಮೂಲಕ ಲಭ್ಯವಿರುತ್ತದೆ ಎಂದು ಖಚಿತಪಡಿಸಲಾಗಿದೆ. ಇ-ಕಾಮರ್ಸ್ ವೆಬ್‌ಸೈಟ್‌ನಲ್ಲಿರುವ ಮೈಕ್ರೋಸೈಟ್ ಮುಂಬರುವ ಹ್ಯಾಂಡ್‌ಸೆಟ್ ಅನ್ನು ನೀಲಿ ಬಣ್ಣದ ಆಯ್ಕೆಯಲ್ಲಿ ಗುರುತಿಸಲಾಗಿದೆ. ಈ ಫೋನ್‌ ಭಾರತದಲ್ಲಿ 18,000ರೂ ಬೆಲೆಯಲ್ಲಿ ಬರಲಿದೆ ಎನ್ನಲಾಗಿದೆ.

Best Mobiles in India

English summary
Poco X6 Neo Smartphone launch soon in India: Expected Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+