ಮಾರುಕಟ್ಟೆಗೆ ಬಂದೇ ಬಿಟ್ತು ಪೊಕೊ X6 ನಿಯೋ; ಇದರ ಡಿಸೈನ್‌ಗೆ ಗ್ರಾಹಕರು ಫಿದಾ!
ಪೊಕೊ ಮೊಬೈಲ್ ಸಂಸ್ಥೆಯ ಬಹುನಿರೀಕ್ಷಿತ ಪೊಕೊ X6 ನಿಯೋ ಸ್ಮಾರ್ಟ್‌ಫೊನ್ ಇಂದು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ನೂತನ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್ ಸೌಲಭ್ಯ ಒಳಗೊಂಡಿದ್ದು, ಇದರ ಡಿಸೈನ್ ಗ್ರಾಹಕರ ಗಮನ ಸೆಳೆದಿದೆ.
ಹೌದು, ಪೊಕೊ ಸಂಸ್ಥೆಯು ಇಂದು ಪೊಕೊ X6 ನಿಯೋ ಮೊಬೈಲ್ ಅನ್ನು ಇಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಇದು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಆಗಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್, 108 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ನಂತಹ ಫೀಚರ್ಸ್‌ಗಳಿಂದ ಗ್ರಾಹಕರು ಗಮನ ಸೆಳೆದಿದೆ.

ಅಲ್ಲದೇ ಈ ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದ್ದು, ಇದರ ಜೊತೆಗೆ ಇದು 8GB + 128GB ಸ್ಟೋರೇಜ್ ಹಾಗೂ 12GB + 256GB ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಪೊಕೊ X6 ನಿಯೋ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಪೊಕೊ X6 ನಿಯೋ ಫೀಚರ್ಸ್ ಹೀಗಿವೆ
ಪೊಕೊ X6 ನಿಯೋ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 120Hz, 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ಸಪೋರ್ಟ್ ಮಾಡುತ್ತದೆ. ಜೊತೆಗೆ ಇದರ ಡಿಸ್‌ಪ್ಲೇಯು 88.9% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿ ಇದ್ದು, 20:9 ರಚನೆಯ ಅನುಪಾತವನ್ನು ಪಡೆದಿದೆ.
ಹಾಗೆಯೇ ಪೊಕೊ X6 ನಿಯೋ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್ ಪವರ್ ಪಡೆದಿದ್ದು, ಪೂರಕವಾಗಿ ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು 8GB + 128GB ಸ್ಟೋರೇಜ್ ಹಾಗೂ 12GB + 256GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಪಡೆದಿದೆ.
ಪೊಕೊ X6 ನಿಯೋ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ಪೊಕೊ X6 ನಿಯೋ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಕಂಪಾಸ್ ನಂತಹ ಆಯ್ಕೆಗಳ ಇವೆ.
ಭಾರತದಲ್ಲಿ ಪೊಕೊ X6 ನಿಯೋ ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 15,999ರೂ. ಆಗಿದೆ. ಹಾಗೆಯೇ 12GB + 256GB ಸ್ಟೋರೇಜ್ ವೇರಿಯಂಟ್ ಬೆಲೆಯು 17,999ರೂ. ಆಗಿದೆ. ಇನ್ನು ಈ ಫೋನ್ ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇದೇ ಮಾರ್ಚ್ 18 ರಿಂದ ಫ್ಲಿಪ್‌ಕಾರ್ಟ್ ಮೂಲಕ ಸೇಲ್ ಪ್ರಾರಂಭಿಸಲಿದೆ.


Click it and Unblock the Notifications








