ಹೊಸ ವರ್ಷಕ್ಕೆ ಬರಲಿದೆ ಬಹು ನಿರೀಕ್ಷಿತ ಸ್ಮಾರ್ಟ್‌ಫೋನ್! ಡಿಸೈನ್‌ಗೆ ಬೆರಗಾಗೋದು ಪಕ್ಕಾ!
ಮೊಬೈಲ್ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಫೋನ್‌ಗಳಲ್ಲಿ ಪೊಕೊ X6 ಪ್ರೊ 5G ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್ ಮುಂದಿನ ವರ್ಷ ಬಿಡುಗಡೆ ಆಗಲಿರುವ ಪ್ರಮುಖ ಫೋನ್ ಆಗಿ ಈಗಾಗಲೇ ಗುರುತಿಸಿಕೊಂಡಿದೆ. ಇದೀಗ ಈ ಸ್ಮಾರ್ಟ್‌ಫೋನ್ ಬಿಡುಗಡೆಯ ಬಗ್ಗೆ ಹೊಸ ಸುದ್ದಿ ರಿವೀಲ್ ಆಗಿದೆ. ಅದರಂತೆ ಪೊಕೊ X6 ಪ್ರೊ 5G ಜಾಗತಿಕವಾಗಿ ಜನವರಿ 2024 ರಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಹೌದು, ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್ ಹೊಸ ವರ್ಷದ ಆರಂಭದಲ್ಲಿ ಅನಾವರಣಗೊಳ್ಳಲಿದೆ ಎನ್ನಲಾಗಿದೆ. ಇದರ ಬಗ್ಗೆ ಪೊಕೊ ಕಂಪೆನಿ ಇನ್ನೂ ಯಾವುದೇ ಅಧಿಕೃತ ಪ್ರಕಟಣೆಯನ್ನು ಮಾಡಿಲ್ಲವಾದರೂ, ಆನ್‌ಲೈನ್‌ನಲ್ಲಿ ಈ ಕುರಿತು ವರದಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹೈಪರ್ಓಎಸ್ನಲ್ಲಿ ರನ್ ಅಗಲಿರುವ Xiaomi ಯ ಆಂತರಿಕ ಪರೀಕ್ಷಾ ಸರ್ವರ್‌ಗಳಲ್ಲಿ ಫೋನ್ ಪಾಪ್ ಅಪ್ ಆಗಿದೆ. ಹಾಗಾದ್ರೆ ಪೊಕೊ X6 ಪ್ರೊ 5Gನಲ್ಲಿ ಏನೆಲ್ಲಾ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ X6 ಪ್ರೊ 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1220 x 2712 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 20:9 ರಚನೆಯ ಅನುಪಾತದಲ್ಲಿ ಬರಲಿದೆ ಎನ್ನಲಾಗಿದೆ. ಜೊತೆಗೆ ಡಿಸ್‌ಪ್ಲೇಯು 90.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಈ ಡಿಸ್‌ಪ್ಲೇಯು HDR10+, 1800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ನೊಂದಿಗೆ ಬರುವ ಸಾಧ್ಯೆತಯನ್ನು ಇಡಲಾಗಿದೆ.
ಪೊಕೊ X6 ಪ್ರೊ 5G ಪ್ರೊಸೆಸರ್ ಯಾವುದು?
ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8300 ಅಲ್ಟ್ರಾ SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಮಾಲಿ G615-MC6 ಸಪೋರ್ಟ್ ಅನ್ನು ಪಡೆದಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೆ 8GB RAM ಮತ್ತು 256GB, 12GB RAM ಮತ್ತು 256GB ಹಾಗೂ 12GB RAM ಮತ್ತು 512GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ.

ಪೊಕೊ X6 ಪ್ರೊ 5G ಕ್ಯಾಮೆರಾ ಸೆಟಪ್ ಏನಿದೆ?
ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿರುವ ಸಾದ್ಯತೆಯಿದೆ.
ಪೊಕೊ X6 ಪ್ರೊ 5G ಬ್ಯಾಟರಿ ಮತ್ತು ಇತರೆ
ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್ 5500 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇದು 90W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್, ಬ್ಲೂಟೂತ್ 5.4, 3.5ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿರುವ ನಿರೀಕ್ಷೆಯನ್ನು ಇಡಲಾಗಿದೆ. ಇದಲ್ಲದೆ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸಿಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ದಿಕ್ಸೂಚಿಯನ್ನು ಹೊಂದಿರಲಿದೆ.

ಪೊಕೊ X6 ಪ್ರೊ 5G ಬೆಲೆ ಮತ್ತು ಲಭ್ಯತೆ
ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡುವ ಸಾದ್ಯತೆಯನ್ನು ಇಡಲಾಗಿದೆ. ಆದರೆ ಇದರ ಅಧಿಕೃತ ಬಿಡುಗಡೆ ದಿನಾಂಕ ಬಹಿರಂಗವಾಗಿಲ್ಲ. ಈ ಸ್ಮಾರ್ಟ್‌ಫೋನ್ ಬೆಲೆ ವಿವರಗಳು ತಿಳಿದುಬಂದಿಲ್ಲ. ಆದರೂ ಈ ಫೋನ್ ಫೀಚರ್ಸ್ ನಿರೀಕ್ಷೆಯನ್ನು ಗಮನಿಸಿದರೆ ಸ್ಮಾರ್ಟ್‌ಫೋನ್ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ಸಾಧ್ಯತೆಯಿದೆ.


Click it and Unblock the Notifications








