Home
ಸುದ್ದಿಜಾಲ

Poco: ಹೊಸದಾಗಿ ಲಾಂಚ್‌ ಆದ ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್‌ಗೆ 17% ರಿಯಾಯಿತಿ!8 GB RAM

ಪೊಕೊ (Poco) ಸ್ಮಾರ್ಟ್‌ಫೋನ್‌ಗಳು ಇತ್ತೀಚೆಗೆ ಸುಧಾರಿತ ಫೀಚರ್ಸ್‌ ಆಯ್ಕೆ ಮೂಲಕ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಸೌಂಡ್‌ ಮಾಡುತ್ತಿವೆ. ಈ ನಡುವೆ ಹೊಸದಾಗಿ ಲಾಂಚ್‌ ಆದ ಪೊಕೊ X6 ಪ್ರೊ 5G (Poco X6 Pro 5G smartphone) ಸ್ಮಾರ್ಟ್‌ಫೋನ್‌ಗೆ ದೊಡ್ಡ ಆಫರ್ ನೀಡಲಾಗಿದೆ.

ಹೌದು, ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಇದೀಗ ಭಾರೀ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಈ ಸ್ಮಾರ್ಟ್‌ಫೋನ್ 8 GB RAM ಆಯ್ಕೆ ಪಡೆದಿದ್ದು, ಮೀಡಿಯಾಟೆಕ್‌ ಡೈಮೆನ್ಸಿಟಿ D8300 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಇದರ ಆಫರ್ ಬೆಲೆ ವಿವರ ಇಲ್ಲಿದೆ ನೋಡಿ.

ಹೊಸದಾಗಿ ಲಾಂಚ್‌ ಆದ ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್‌ಗೆ 17% ರಿಯಾಯಿತಿ!

ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್‌ ಆಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್‌ನ ಸಾಮಾನ್ಯ ಬೆಲೆ 30,999ರೂ.ಗಳಾಗಿದ್ದು, ನೀವೀಗ ಇದನ್ನು 25,499 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್‌ ಮೇಲೆ 17% ರಿಯಾಯಿತಿ ನೀಡಲಾಗಿದ್ದು, ಈ ಮೂಲಕ ಭಾರೀ ಹಣ ಉಳಿತಾಯ ಮಾಡಬಹುದಾಗಿದೆ. ಅದಾಗ್ಯೂ ನೀವು ಕೆಲವು ಬ್ಯಾಂಕ್‌ ಆಫರ್ ಬಳಕೆ ಮಾಡಿಕೊಂಡು ಇನ್ನೂ ಕಡಿಮೆ ದರದಲ್ಲಿ ಈ ಫೋನ್‌ ಅನ್ನು ಖರೀದಿ ಮಾಡಬಹುದು.

ಈ ಫೋನ್‌ ಖರೀದಿ ಮಾಡುವಾಗ ನೀವು ಫ್ಲಿಪ್‌ಕಾರ್ಟ್‌ ಆಕ್ಸಿಸ್ ಬ್ಯಾಂಕ್‌ ಕಾರ್ಡ್‌ ಬಳಕೆ ಮಾಡಿಕೊಂಡು ಖರೀದಿ ಮಾಡಿದ್ರೆ 5% ಕ್ಯಾಶ್‌ಬ್ಯಾಕ್, ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ವ್ಯವಹಾರದ ಮೇಲೆ 1000 ರೂ.ಗಳ ಆಫರ್, ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ವ್ಯವಹಾರದ ಮೇಲೆ 1000 ರೂ.ಗಳ ರಿಯಾಯಿತಿ ಸಿಗಲಿದ್ದು, ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ವ್ಯವಹಾರದ ಮೇಲೆ 1000 ರೂ.ಗಳ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಹಾಗಿದ್ರೆ ಈ ಸ್ಮಾರ್ಟ್‌ಫೋನ್‌ ಇಷ್ಟು ಬೆಲೆಗೆ ಯೋಗ್ಯವೇ ಅನ್ನೋ ಮಾಹಿತಿಗಾಗಿ ಇದರ ಫೀಚರ್ಸ್‌ ಕಡೆ ಕಣ್ಣಾಯಿಸಿ.

ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.67 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್‌ ರೇಟ್‌, HDR10+, ಡಾಲ್ಬಿ ವಿಷನ್, 1800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಜೊತೆಗೆ 1220 x 2712 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಇದರ ಜೊತೆಗೆ ಈ ಫೋನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದಿದೆ.

ಹೊಸದಾಗಿ ಲಾಂಚ್‌ ಆದ ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್‌ಗೆ 17% ರಿಯಾಯಿತಿ!

ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್‌ ಪ್ರೊಸೆಸರ್ ವಿವರ: ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14, ಹೈಪರ್ ಓಎಸ್ ಅನ್ನು ರನ್‌ ಮಾಡಲಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 8300 ಅಲ್ಟ್ರಾ (4 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಮಾಲಿ G615-MC6 ಜಿಪಿಯು ಬಲ ಪಡೆದಿದ್ದು, 256GB + 8GB RAM, 256GB + 12GB RAM, 512GB + 12GB RAM ಸ್ಟೋರೇಜ್‌ ಆಯ್ಕೆಯಲ್ಲಿ ಈ ಫೋನ್‌ ಲಭ್ಯ ಇದೆ.

ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಇನ್ನು ಈ ಫೋನ್‌ನ ಕ್ಯಾಮೆರಾ ವಿಚಾರಕ್ಕೆ ಬಂದರೆ ಇದು ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಅದರಲ್ಲಿ ಮುಖ್ಯವಾಗಿ 64 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್ ಸೆನ್ಸರ್‌, 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸರ್‌ ಆಯ್ಕೆಯನ್ನು ಈ ಫೋನ್‌ನಲ್ಲಿ ನೀಡಲಾಗಿದೆ. ಇದರ ಜೊತೆಗೆ ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್‌ ಅನ್ನು ಕಾಣಬಹುದು. ಇದರ ಜೊತೆಗೆ 16 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಕಾಣಬಹುದಾಗಿದೆ.

ಹೊಸದಾಗಿ ಲಾಂಚ್‌ ಆದ ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್‌ಗೆ 17% ರಿಯಾಯಿತಿ!

ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 67W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಈ ಮೂಲಕ 45 ನಿಮಿಷಗಳಲ್ಲಿ 100% ಚಾರ್ಜ್‌ ಆಗಲಿದೆ. ಇದರ ಜೊತೆಗೆ ಸೌಂಡ್ ಲೌಡ್‌ಸ್ಪೀಕರ್, ಡ್ಯುಯಲ್ ಸ್ಪೀಕರ್‌, 3.5 ಎಂಎಂ ಜ್ಯಾಕ್, ವೈ-ಫೈ 802.11 a/b/g/n/ac/6, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.4, A2DP, LE ಸೇರಿದಂತೆ ಅನೇಕ ಕನೆಕ್ಟಿವಿಟಿ ಫೀಚರ್ಸ್‌ ಪಡೆದಿದೆ.
Best Mobiles in India

English summary
Poco X6 Pro 5G smartphone can now be purchased at a huge offer price. The smartphone is powered by MediaTek Dimensity D8300 Ultra processor with 8 GB RAM option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+