Home
ಸುದ್ದಿಜಾಲ

ಭಾರತದಲ್ಲಿ ಧೂಳೆಬ್ಬಿಸೋಕೆ ರೆಡಿಯಾಗಿದೆ ಪೊಕೊ X6 ಪ್ರೊ! ಫೀಚರ್ಸ್‌ ನಿರೀಕ್ಷೆ ಏನು?

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಬ್ರ್ಯಾಂಡ್‌ಗಳಲ್ಲಿ ಪೊಕೊ ಕೂಡ ಒಂದಾಗಿದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳಿಂದಾಗಿ ಪೊಕೊ ಕಂಪೆನಿ ಮೊಬೈಲ್‌ ಪ್ರಿಯರ ನೆಚ್ಚಿನ ಆಯ್ಕೆಗಳಲ್ಲಿ ಒಂದೆನಿಸಿಕೊಂಡಿದೆ. ಇದೀಗ ಪೊಕೊ ಕಂಪೆನಿ ಭಾರತದಲ್ಲಿ ಹೊಸ ಪೊಕೊ X6 ಸರಣಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಹೌದು, ಪೊಕೊ X6 ಸರಣಿ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಎಂದು ವರದಿಯಾಗಿದೆ. ಈ ಸರಣಿಯಲ್ಲಿ ಪೊಕೊ X6 ಮತ್ತು ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ಗಳು ಬರುವ ಸಾಧ್ಯತೆಯಿದೆ. ಸದ್ಯ ಈ ಫೋನ್‌ಗಳನ್ನು IMEI ವೆಬ್‌ಸೈಟ್‌ನಲ್ಲಿ ಗುರುತಿಸಲಾಗಿದೆ ಎಂದು ಹೇಳಲಾಗಿದೆ. ಇವುಗಳಲ್ಲಿ ಪೊಕೊ X6 ಪ್ರೊ ಅನ್ನು ಭಾರತದ ಪ್ರಮಾಣೀಕರಣ ಸೈಟ್‌ಗಳಲ್ಲಿ ಗುರುತಿಸಲಾಗಿದೆ ಎಂದು ವರದಿಯಾಗಿದೆ. ಹಾಗಾದ್ರೆ ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಧೂಳೆಬ್ಬಿಸೋಕೆ ರೆಡಿಯಾಗಿದೆ ಪೊಕೊ X6 ಪ್ರೊ! ಫೀಚರ್ಸ್‌ ನಿರೀಕ್ಷೆ ಏನು?

ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ ಫೀಚರ್ಸ್‌ ನಿರೀಕ್ಷೆ?
ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯೊಂದಿಗೆ ಬರಲಿದೆ. ಈ ಡಿಸ್‌ಪ್ಲೇ 1080 x 2404 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 395ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿರುವ ನಿರೀಕ್ಷೆಯಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ನೊಂದಿಗೆ ಬರುವ ಸಾಧ್ಯತೆಯಿದೆ.

ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?
ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 7 Gen 1 SoC ಪ್ರೊಸೆಸರ್‌ನೊಂದಿಗೆ ಬರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ನೊಂದಿಗೆ ಬರುವ ಸಾಧ್ಯತೆಯಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ ಎನ್ನಲಾಗಿದೆ.

ಭಾರತದಲ್ಲಿ ಧೂಳೆಬ್ಬಿಸೋಕೆ ರೆಡಿಯಾಗಿದೆ ಪೊಕೊ X6 ಪ್ರೊ! ಫೀಚರ್ಸ್‌ ನಿರೀಕ್ಷೆ ಏನು?

ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌ ಏನು?
ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ ಬ್ಯಾಟರಿ ಮತ್ತು ಇತರೆ
ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ 5100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, 67W ವೇಗದ ಚಾರ್ಜಿಂಗ್‌ನೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫಯ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಒಳಗೊಂಡಿರಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೊಮೀಟರ್‌ ಸೆನ್ಸಾರ್‌ ಅನ್ನು ಹೊಂದಿರುವ ನಿರೀಕ್ಷೆಯಿದೆ.

ಭಾರತದಲ್ಲಿ ಧೂಳೆಬ್ಬಿಸೋಕೆ ರೆಡಿಯಾಗಿದೆ ಪೊಕೊ X6 ಪ್ರೊ! ಫೀಚರ್ಸ್‌ ನಿರೀಕ್ಷೆ ಏನು?

ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ ನಿರೀಕ್ಷೆ?
ಪೊಕೊ X6 ಪ್ರೊ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 15,999ರೂ ಬೆಲೆಯಲ್ಲಿ ಬರುವ ಸಾಧ್ಯತೆಯಿದೆ. ಇದರ 8GB + 256GB ರೂಪಾಂತರದಲ್ಲಿ 24,999ರೂ ಬೆಲೆಯೊಂದಿಗೆ ಬರಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಹಳದಿ ಬಣ್ಣದ ಆಯ್ಕೆಗಳಲ್ಲಿ ಬರುವ ನಿರೀಕ್ಷೆಯನ್ನು ಇಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Poco X6 Pro Smartphone Could Launch Soon in India: Report
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+