Home
ಸುದ್ದಿಜಾಲ

ಇಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ ಪೊಕೊ X6 ಸರಣಿ!..ಅಚ್ಚರಿಯ ಫೀಚರ್ಸ್‌!

ಜನಪ್ರಿಯ ಪೊಕೊ ಮೊಬೈಲ್‌ ಕಂಪೆನಿಯು ತನ್ನ ಬಹುನಿರೀಕ್ಷಿತ ಹೊಸ ಪೊಕೊ X6 ಸರಣಿ ಅನ್ನು ಇಂದು (ಜನವರಿ 11, 2023) ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಈ ನೂತನ ಫೋನ್‌ ಸರಣಿ ಬಿಡುಗಡೆಯ ದಿನಾಂಕವನ್ನು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣವು ಬಹಿರಂಗಪಡಿಸಿದೆ.

ಹೌದು, ಪೊಕೊ X6 ಸರಣಿಯು ಇಂದು ಇಂದು (ಜನವರಿ 11, 2023) ಸಂಜೆ 5:30 ಗಂಟೆಗೆ ಅಧಿಕೃತವಾಗಿ ಲಾಂಚ್ ಆಗಲಿದೆ. ಈ ಸರಣಿಯಲ್ಲಿ ಪೊಕೊ X6 ಪ್ರೊ ಸ್ಮಾರ್ಟ್‌ಫೋನ್ ಸಾಕಷ್ಟು ನಿರೀಕ್ಷೆಗಳನ್ನು ಫೋನ್‌ ಪ್ರಿಯರಲ್ಲಿ ಹುಟ್ಟುಹಾಕಿದೆ.

ಇಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ ಪೊಕೊ X6 ಸರಣಿ!..ಅಚ್ಚರಿಯ ಫೀಚರ್ಸ್‌!

ಪೊಕೊ X6 ಪ್ರೊ ಮೀಡಿಯಾ ಟೆಕ್ ಡೈಮೆನ್ಸಿಟಿ 8300 ಅಲ್ಟ್ರಾ ಪ್ರೊಸೆಸರ್‌ ಹೊಂದಿರಲಿದ್ದು, ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಒಳಗೊಂಡಿರಲಿದೆ. ಗೇಮಿಂಗ್‌ ಅನುಭವಕ್ಕಾಗಿ ವೈಲ್ಡ್‌ಬೂಸ್ಟ್‌ 2.0 ಆಯ್ಕೆ ಪಡೆದಿರಲಿದೆ. ಹಾಗಾದರೇ ಪೊಕೊ X6 ಪ್ರೊ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಪೊಕೊ X6 ಪ್ರೊ - ಫೀಚರ್ಸ್‌ ಹೀಗಿವೆ

ಪೊಕೊ X6 ಪ್ರೊ ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1220 x 2712 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇರಲಿದೆ. ಇದರ ಸ್ಕ್ರಿನ್‌ ಟು ಬಾಡಿ ಅನುಪಾತ 90.1% ಇರಲಿದ್ದು, 20:9 ರಚನೆಯ ಅನುಪಾತದಲ್ಲಿ ಬರಲಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 1800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ನೀಡಲಿದೆ. ಜೊತೆಗೆ ಡಿಸ್‌ಪ್ಲೇಯ ಪಿಕ್ಸೆಲ್‌ ಸಾಂದ್ರತೆ 446 ppi ಸಾಧ್ಯತೆ.

ಇಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ ಪೊಕೊ X6 ಸರಣಿ!..ಅಚ್ಚರಿಯ ಫೀಚರ್ಸ್‌!

ಹಾಗೆಯೇ ಪೊಕೊ X6 ಪ್ರೊ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8300 ಅಲ್ಟ್ರಾ ಪ್ರೊಸೆಸರ್‌ ಪವರ್‌ ಅನ್ನು ಪಡೆದಿರಲಿದೆ ಎಂದು ಕಂಪನಿಯು ಈಗಾಗಲೇ ದೃಢಪಡಿಸಿದೆ. ಇದು ಆಂಡ್ರಾಯ್ಡ್‌ 14 HyperOS ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB, 12GB RAM 256GB ಹಾಗೂ 12GB RAM ಮತ್ತು 512GB ಆಂತರೀಕ ಸ್ಟೋರೇಜ್‌ನಲ್ಲಿ ಬರಲಿದೆ ಎಂದು ವರದಿಯಾಗಿದೆ.

ಪೊಕೊದ ಈ ನೂತನ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿರುವುದು ಬಹುತೇಕ ಖಚಿತ ಆಗಿದ್ದು, ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ನಲ್ಲಿ ಇರಲಿದೆ. ಅಲ್ಲದೇ ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್ ಲೆನ್ಸ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಶೂಟರ್ ಪಡೆದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗುತ್ತದೆ.

ಇಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ ಪೊಕೊ X6 ಸರಣಿ!..ಅಚ್ಚರಿಯ ಫೀಚರ್ಸ್‌!

ಪೊಕೊ X6 ಪ್ರೊ ಮೊಬೈಲ್‌ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 67W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಅನ್ನು ನಿರೀಕ್ಷೆ ಮಾಡಲಾಗಿದೆ.

ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್ 5.4, USB ಟೈಪ್-C, OTG ಅನ್ನು ಬೆಂಬಲಿಸಲಿದೆ. ಇದಲ್ಲದೆ ಇನ್‌ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸೆಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್‌ ಹಾಗೂ ಗೈರೊ ಸೆನ್ಸಾರ್‌ ಮತ್ತು ಕಂಪಾಸ್‌ ಅನ್ನು ಒಳಗೊಂಡಿಲಿದೆ.

ಪೊಕೊ X6 ಪ್ರೊ ಫೋನ್‌ ಇಂದು ಬಿಡುಗಡೆ ಆಗಲಿದೆ ಎಂದು ಫ್ಲಿಪ್‌ಕಾರ್ಟ್‌ ತಾಣ ತಿಳಿದಿದೆ. ಅಂದಹಾಗೆ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಫೋನ್‌ ಸರಣಿಯ ಬೆಲೆ ವಿವರಗಳು ಇನ್ನೂ ಬಹಿರಂಗವಾಗಿಲ್ಲ. ಅದಾಗ್ಯೂ ಈ ಫೋನ್‌ ಬೆಲೆ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ನಿರೀಕ್ಷಿಸಲಾಗಿದೆ.

Best Mobiles in India

English summary
Poco X6 Series Launch Today. Expected specifications, price and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+