4000 ಡಿಸ್ಕೌಂಟ್! ಕ್ಯಾಮೆರಾ, ಬ್ಯಾಟರಿ ಸೂಪರ್.. ಕಡಿಮೆ ಬೆಲೆ.. ಇಂದು POCO X7 5G ಫಸ್ಟ್ ಸೇಲ್
ಪೊಕೊ ಇತ್ತೀಚೆಗೆ ಹೊಸ ಪೊಕೊ X7 5G (POCO X7 5G) ಸರಣಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪೊಕೊ X7 5G (Poco X7 5G) ಮತ್ತು ಪೊಕೊ X7 ಪ್ರೊ 5G (Poco X7 Pro 5G) ಸ್ಮಾರ್ಟ್‌ಫೋನ್‌ಗಳು ದೇಶೀಯ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಈ ಪೈಕಿ, ಪೊಕೊ X7 5G (Poco X7 5G) ಮೊಬೈಲ್ ಇಂದು (ಜನವರಿ 17) ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಪೊಕೊ X7 5G ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್‌ನ ಡೈಮೆನ್ಸಿಟಿ 7300 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 12GB RAM, 5110mAh ಬ್ಯಾಟರಿ ಮತ್ತು 45W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ. ಈ ಮೊಬೈಲ್ ಈಗಾಗಲೇ ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನಿಗೆ ಯಾವೆಲ್ಲಾ ಆಫರ್ ಲಭ್ಯವಿದೆ ನೀವೆ ನೋಡಿ.

ಪೊಕೊ X7 5G ವೈಶಿಷ್ಟ್ಯಗಳು
ಡಿಸ್ಪ್ಲೇ ಮತ್ತು ಪ್ರೊಸೆಸರ್
ಪೊಕೊ X7 5G ಫೋನ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2712 × 1220 ಪಿಕ್ಸೆಲ್ ರೆಸಲ್ಯೂಶನ್, 3000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 120Hz ರಿಫ್ರೆಶ್ ದರ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಹೊಂದಿದೆ. ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಅಲ್ಟ್ರಾ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಕೆಲಸ ಮಾಡುತ್ತವೆ. ಇದು ಗ್ರಾಫಿಕ್ಸ್‌ಗಾಗಿ ಮಾಲಿ G615 MC2 ಜಿಪಿಯು ಹೊಂದಿದೆ.
ಕ್ಯಾಮೆರಾ ಸೆಟಪ್ ಮತ್ತು ಸ್ಟೋರೇಜ್
ಪೊಕೊ X7 5G ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಇದೆ. ಈ ಫೋನ್ 8GB RAM ಹೊಂದಿದೆ. ಜೊತೆಗೆ 128GB ಮತ್ತು 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ವೈಶಿಷ್ಟ್ಯಗಳು
ಪೊಕೊ X7 5G ಸ್ಮಾರ್ಟ್‌ಫೋನ್ 5500mAh ಸಾಮರ್ಥ್ಯ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP66 + IP68 + IP69 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಮತ್ತು ಇನ್ಫ್ರಾರೆಡ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, ಯುಎಸ್‌ಬಿ ಟೈಪ್ ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, ಬ್ಲೂಟೂತ್ 5.4, ವೈ-ಫೈ 6 ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ಪೊಕೊ X7 5G ಬೆಲೆ ಮತ್ತು ಆಫರ್
ಪೊಕೊ X7 5G ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ಬೆಲೆ 19,999 ರೂ.ಗೆ ಮಾರಾಟವಾಗಲಿದೆ. ಮತ್ತು 8GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ 21,999 ರೂ. ಆಗಿದೆ. ನೀವು ಹಳದಿ, ಕಾಸ್ಮಿಕ್ ಸಿಲ್ವರ್ ಮತ್ತು ಗ್ಲೇಸಿಯರ್ ಗ್ರೀನ್ ಬಣ್ಣಗಳಲ್ಲಿ ಈ ಮೊಬೈಲ್ ಖರೀದಿಸಬಹುದು.
ನೀವು ಮೊದಲ ದಿನವೇ ಈ ಮೊಬೈಲ್ ಕೊಂಡರೆ ಹಲವು ಆಫರ್‌ಗಳ ಲಾಭ ಪಡೆಯಬಹುದು. ಐಸಿಐಸಿಐ ಬ್ಯಾಂಕ್ ಕಾರ್ಡ್ ಪಾವತಿ ಮೇಲೆ 2,000 ರೂ. ತ್ವರಿತ ರಿಯಾಯಿತಿ ಲಭ್ಯವಿದೆ. ಜೊತೆಗೆ ಎಕ್ಸ್‌ಚೇಂಜ್ ಆಫರ್ ಮೇಲೆ 2,000 ಡಿಸ್ಕೌಂಟ್ ಮತ್ತು 9 ತಿಂಗಳ ನೋ ಕಾಸ್ಟ್ ಇಎಂಐ ಸೌಲಭ್ಯ ನೀಡಲಾಗುತ್ತೆ. ಈ ಮೊಬೈಲ್ ಇಂದು (ಜನವರಿ 17) ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಿದೆ.


Click it and Unblock the Notifications








