ಪೊಕೊ ಬ್ರಹ್ಮಾಸ್ತ್ರ: ಇಂದು ಹೊಸ POCO ಫೋನ್ ಸೇಲ್; ಬಂಪರ್ ರಿಯಾಯಿತಿ.. ಬೆಲೆ, ಆಫರ್ ಏನಿದೆ?
ಬಹುನಿರೀಕ್ಷಿತ ಪೊಕೊ X7 ಪ್ರೊ 5G (Poco X7 Pro 5G) ಈಗಾಗಲೇ ಭಾರತಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದೆ. ಇದನ್ನು ಪೊಕೊ X7 5G (POCO X7 5G) ಸರಣಿಯ ಅಡಿಯಲ್ಲಿ ಬಿಡುಗಡೆ ಮಾಡಲಾಗಿದೆ. ಅಂದಹಾಗೆ, ಪೊಕೊ X7 ಪ್ರೊ 5G ಇಂದು (ಜನವರಿ 14) ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಶುರು ಮಾಡಲಿದೆ. ಕಂಪನಿಯು ಮೊದಲ ದಿನವೇ ಬಂಪರ್ ಆಫರ್ ನೀಡುತ್ತಿದೆ. ನೀವು ಈ ಮೊಬೈಲ್ ಖರೀದಿಸಿದರೆ, 3000 ರೂ. ಉಳಿತಾಯ ಮಾಡಬಹುದು. ಬನ್ನಿ, ಈ ಫೋನಿನ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಪೊಕೊ X7 ಪ್ರೊ 5G ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 8400 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 12GB RAM + 256GB ಸ್ಟೋರೇಜ್, 6550mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಲಭ್ಯವಿದೆ. ಈ ಫೋನಿನ ಬೆಲೆಯನ್ನು ತಿಳಿಯಲು ಮುಂದೆ ಓದಿ.

ಪೊಕೊ X7 ಪ್ರೊ 5G ಆಫರ್
ಪೊಕೊ X7 ಪ್ರೊ 5G ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರವನ್ನು 27,999 ರೂ.ಗೆ ಮಾರಾಟ ಮಾಡಲಾಗುತ್ತದೆ. ಮತ್ತು 12GB RAM + 512GB ಸ್ಟೋರೇಜ್ ಆಯ್ಕೆಯನ್ನು 29,999 ರೂ.ಗೆ ಪರಿಚಯಿಸಲಾಗಿದೆ. ಮೊದಲ ಮಾರಾಟದ ಪ್ರಯುಕ್ತ ಹಲವು ಆಫರ್‌ಗಳು ಲಭ್ಯವಿದೆ. ಐಸಿಐಸಿಐ ಬ್ಯಾಂಕ್ ಕಾರ್ಡ್ ಪಾವತಿ ಮೇಲೆ 2,000 ರೂ. ರಿಯಾಯಿತಿ ಸಿಗುತ್ತದೆ. ಜೊತೆಗೆ 2,000 ಎಕ್ಸ್‌ಚೇಂಜ್ ಬೋನಸ್ ಪಡೆಯಬಹುದು. ನೀವು 12 ತಿಂಗಳ ನೋ ಕಾಸ್ಟ್ ಇಎಂಐ ಸೌಲಭ್ಯದ ಲಾಭ ಪಡೆಯಬಹುದು.
ಮೊದಲ ದಿನ ಹೆಚ್ಚುವರಿಯಾಗಿ 1,000 ರೂ. ಕೂಪನ್ ರಿಯಾಯಿತಿ ನೀಡಲಾಗುತ್ತದೆ. ರಿಯಾಯಿತಿ ಬಳಿಕ ಈ ಫೋನನ್ನು ಕ್ರಮವಾಗಿ 24,999 ರೂ. ಮತ್ತು 26,999 ರೂ.ಗೆ ಖರೀದಿಸಬಹುದು. ಈ ಫೋನ್ ಇಂದು (ಜನವರಿ 14) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಇದು ಅಬ್ಸಿಡಿಯನ್ ಕಪ್ಪು, ನೆಬ್ಯುಲಾ ಗ್ರೀನ್ ಮತ್ತು ಹಳದಿ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ಪೊಕೊ X7 ಪ್ರೊ 5G ಫೀಚರ್ಸ್
ಡಿಸ್ಪ್ಲೇ ಮತ್ತು ಪ್ರೊಸೆಸರ್
ಪೊಕೊ X7 ಪ್ರೊ 5G ಫೋನ್ 120Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2712 × 1220 ಪಿಕ್ಸೆಲ್ ರೆಸಲ್ಯೂಶನ್ ಮತ್ತು 3200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8400 ಅಲ್ಟ್ರಾ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ಹೈಪರ್ ಓಎಸ್ 2 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ 8GB ಮತ್ತು 12GB RAM ಹೊಂದಿದೆ. ಜೊತೆಗೆ 256GB ಮತ್ತು 512GB ಸ್ಟೋರೇಜ್ ಆಯ್ಕೆ ಲಭ್ಯವಿದೆ.

ಕ್ಯಾಮೆರಾ ಮತ್ತು ಬ್ಯಾಟರಿ
ಪೊಕೊ X7 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಇದೆ. ಹಾಗೆಯೇ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 20 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಈ ಫೋನ್ 6,550mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 90W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಪೊಕೊ X7 ಪ್ರೊ 5G ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಮತ್ತು ಇನ್ಫ್ರಾರೆಡ್ ಸಂವೇದಕ ಹೊಂದಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP66 + IP68 + IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಡ್ಯುಯಲ್ 4G VoLTE, ಯುಎಸ್‌ಬಿ ಟೈಪ್ ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಬ್ಲೂಟೂತ್ 6.0, ವೈ-ಫೈ 6 ಮತ್ತು ಜಿಪಿಎಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








