Home
ಸುದ್ದಿಜಾಲ

POCO X7 Pro ಬೆಲೆ ಲೀಕ್; 6550mAh ಬ್ಯಾಟರಿ.. 50MP ಕ್ಯಾಮೆರಾ.. ಲಾಂಚ್ ಯಾವಾಗ?

ಪೊಕೊ ಎರಡು ಹೊಸ ಮೊಬೈಲ್ ಬಿಡುಗಡೆಗೆ ಸಜ್ಜಾಗಿದೆ. ಶೀಘ್ರದಲ್ಲೇ ಪೊಕೊ X7 (POCO X7) ಸರಣಿಯು ಭಾರತದಲ್ಲಿ ಅನಾವರಣಗೊಳ್ಳಲಿದೆ. ಹೌದು, ಕಂಪನಿಯು ಈಗಾಗಲೇ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೊಷಿಸಿದೆ. ಈ ಸರಣಿಯಲ್ಲಿ ಪೊಕೊ X7 (Poco X7) ಮತ್ತು ಪೊಕೊ X7 ಪ್ರೊ (Poco X7 Pro) ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಲಗ್ಗೆ ಇಡಲಿವೆ. ಕಂಪನಿಯು ಬಿಡುಗಡೆ ದಿನಾಂಕದ ಜೊತೆಗೆ, ಪ್ರಮುಖ ವಿಶೇಷತೆಗಳನ್ನು ಬಹಿರಂಗಪಡಿಸಿದೆ. ಈ ಮಧ್ಯಯೇ, ಪೊಕೊ X7 ಪ್ರೊ ಫೋನಿನ ಬೆಲೆಯೂ ಸೋರಿಕೆಯಾಗಿದೆ.

ಹೊಸ ಪೊಕೊ X7 ಸರಣಿಯು ಭಾರತ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ನೀವು, ಹೊಸ ಫೋನ್‌ ಖರೀದಿಸಲು ಬಯಸಿದರೆ, ಪೊಕೊ X7 ಸರಣಿಯ ಉತ್ತಮ ಆಯ್ಕೆಯಾಗಿದೆ. ಈ ಮೊಬೈಲ್‌ಗಳನ್ನು ಜನವರಿ 9 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ಸಂಸ್ಥೆಯು ಹೊಸ ಪೊಕೊ X7 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ತನ್ನ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ಸ್ಟ್ರೀಮ್ ಮಾಡುತ್ತದೆ. ನೀವು, ಈ ಹೊಸ ಮೊಬೈಲ್‌ಗಳನ್ನು ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ ಮೂಲಕ ಖರೀದಿಸಬಹುದು.

POCO X7 Pro ಬೆಲೆ ಲೀಕ್; 6550mAh ಬ್ಯಾಟರಿ.. 50MP ಕ್ಯಾಮೆರಾ.. ಲಾಂಚ್ ಯಾವಾಗ?

ಪೊಕೊ X7 ಪ್ರೊ 5G ಬೆಲೆ (ನಿರೀಕ್ಷಿತ)

ಕಂಪನಿಯ ಟೀಸರ್ ಪೋಸ್ಟ್ ಪ್ರಕಾರ, ಪೊಕೊ X7 ಪ್ರೊ 5G ಫೋನನ್ನು ಭಾರತದಲ್ಲಿ 30,000 ರೂ.ಗಿಂತ ಕಡಿಮೆ ಬೆಲೆಗೆ ಬಿಡುಗಡೆ ಮಾಡಲಾಗುವುದು. ಪೊಕೊ X6 ಪ್ರೊ ಫೋನಿನ 8RAM + 256GB ಸ್ಟೋರೇಜ್‌ ರೂಪಾಂತವನ್ನು ಭಾರತದಲ್ಲಿ 26,999 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ಪೊಕೊ X6 ಫೋನಿನ 8RAM + 256GB ಸ್ಟೋರೇಜ್‌ ರೂಪಾಂತವನ್ನು 21,999 ರೂ. ಆರಂಭಿಕ ಬೆಲೆಗೆ ಪರಿಚಯಿಸಲಾಗಿದೆ. ನೀವು ಹಸಿರು, ಬೆಳ್ಳಿ ಮತ್ತು ಕಪ್ಪು-ಹಳದಿ ಮಿಶ್ರಿತ ಬಣ್ಣದಲ್ಲಿ ಖರೀದಿಸಬಹುದು.

ಪೊಕೊ X7 ಪ್ರೊ ಫೀಚರ್ಸ್‌

ಪೊಕೊ X7 ಪ್ರೊ ಮೊಬೈಲ್ 6,550mAh ಬ್ಯಾಟರಿಯನ್ನು ಹೊಂದಿರುತ್ತದೆ. ಆದರೆ, ಜಾಗತಿಕ ಮಾರುಕಟ್ಟೆಯಲ್ಲಿ ಈ ಫೋನನ್ನು 6,000mAh ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಲಾಗುವುದು. ಇಷ್ಟು ದೊಡ್ಡ ಬ್ಯಾಟರಿ ಹೊಂದಿರುವ ಮೊದಲ ಫೋನ್ ಇದಾಗಿದೆ. ಇದು ಕಾರ್ಬನ್ ಸಿಲಿಕಾನ್ ತಂತ್ರಜ್ಞಾನ ಹೊಂದಿದೆ. ಈ ಬ್ಯಾಟರಿಯು ಉತ್ತಮ ದಕ್ಷತೆ, ದೀರ್ಘ ಬ್ಯಾಟರಿ ಬಾಳಿಕೆ ಮತ್ತು ವೇಗದ ಚಾರ್ಜಿಂಗ್ ನೀಡುತ್ತದೆ. ಇದು 90W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಪೊಕೊ X7 ಸರಣಿಯ ವೈಶಿಷ್ಟ್ಯಗಳು

ಪೊಕೊ X7 ಮತ್ತು ಪೊಕೊ X7 ಪ್ರೊ ಸ್ಮಾರ್ಟ್‌ಫೋನ್‌ಗಳು 6.67 ಇಂಚಿನ ಓಎಲ್‌ಇಡಿ ಡಿಸ್ಪ್ಲೇ ಹೊಂದಿರುತ್ತವೆ. ಇದು 1.5K ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿರುತ್ತದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಹೊಂದಿರುತ್ತದೆ.

ಪೊಕೊ X7 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಅಲ್ಟ್ರಾ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಲಿದೆ. ಪೊಕೊ X7 ಪ್ರೊ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8400 ಅಲ್ಟ್ರಾ ಪ್ರೊಸೆಸರ್‌ ಹೊಂದಿರುತ್ತದೆ. ಈ ಸ್ಮಾರ್ಟ್‌ಫೋನ್ 12GB RAM ಮತ್ತು 512GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿರಲಿದೆ. ಈ ಸ್ಮಾರ್ಟ್‌ಫೋನ್‌ಗಳು ಇತ್ತೀಚಿನಆಂಡ್ರಾಯ್ಡ್‌ 15 ಓಎಸ್‌ನಲ್ಲಿ ಕೆಲಸ ಮಾಡುತ್ತವೆ.

ಡ್ಯುಯಲ್ ಕ್ಯಾಮೆರಾ ಸೆಟಪ್

ಪೊಕೊ X7 ಸರಣಿಯು ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿರುತ್ತದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇರುತ್ತದೆ. ವರದಿಯ ಪ್ರಕಾರ, ಪೊಕೊ X7 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿರುತ್ತದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿರುತ್ತದೆ.

ಪೊಕೊ X7 5G ಮೊಬೈಲ್ 5110mAh ಸಾಮರ್ಥ್ಯ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ. ಪೊಕೊ X7 5G ಸ್ಮಾರ್ಟ್‌ಫೋನ್ ಹಲವು ಎಐ (AI) ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಈ ಫೋನಿನಲ್ಲಿ ಎಐ ಇಮೇಜ್ ವಿಸ್ತರಣೆ, ಎಐ ಫಿಲ್ಮ್, ಎಐ ಎರೇಸ್ ಪ್ರೊ ಮತ್ತು ಇನ್ನಿತರ ಎಐ ಕ್ಯಾಮೆರಾ ವೈಶಿಷ್ಟ್ಯಗಳು ಲಭ್ಯವಿರುತ್ತವೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್, ವೈ-ಫೈ ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಆಯ್ಕೆಗಳನ್ನು ಒಳಗೊಂಡಿರುತ್ತದೆ.

Best Mobiles in India

English summary
POCO X7 Pro india price range and Battery Size leaked before launch: know details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+