ಜ.9ಕ್ಕೆ POCO F7 ಲಾಂಚ್; ಕ್ಯಾಮೆರಾ, ಪ್ರೊಸೆಸರ್, ಬ್ಯಾಟರಿ ಎಲ್ಲಾ ಸೂಪರ್.. ಬೆಲೆಯೂ ಕಡಿಮೆ!
ಪೊಕೊ ತನ್ನ ಹೊಸ ಸರಣಿ ಬಿಡುಗಡೆಗೆ ಸಜ್ಜಾಗಿದೆ. ಇದರಲ್ಲಿ ಎರಡು ಹೊಸ ಮೊಬೈಲ್‌ಗಳು ಮಾರುಕಟ್ಟೆಗೆ ಎಂಟ್ರಿ ಕೊಡಲಿವೆ. ಹೌದು, ಇದೇ ಜನವರಿ 9 ರಂದು ಪೊಕೊ X7 (Poco X7) ಸರಣಿಯು ಭಾರತದಲ್ಲಿ ಅನಾವರಣಗೊಳ್ಳಲಿದೆ. ಈ ಮೂಲಕ ಪೊಕೊ X7 (Poco X7) ಮತ್ತು ಪೊಕೊ X7 ಪ್ರೊ (Poco X7 Pro) ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗುತ್ತದೆ. ಇವೆರಡೂ ಮಧ್ಯಮ ಬಜೆಟ್ ಸ್ಮಾರ್ಟ್‌ಫೋನ್‌ಗಳಾಗಿವೆ. ಇವು ಸೊಗಸಾದ ವಿನ್ಯಾಸ ಜೊತೆಗೆ ಉತ್ತಮ ಗುಣಮಟ್ಟದ ವೈಶಿಷ್ಟ್ಯಗಳನ್ನು ಹೊಂದಿವೆ. ಈ ಪೈಕಿ ಪೊಕೊ X7 ಫೋನಿನ ವೈಶಿಷ್ಟ್ಯಗಳನ್ನು ಬಹಿರಂಗಪಡಿಸಲಾಗಿದೆ.
ಪೊಕೊ X7 5G ಫೋನ್ Redmi Note 14 Pro 5G ನಂತೆಯೇ ಡಿಸೈನ್ ಹೊಂದಿದೆ. ಈ ಫೋನ್ 6.67 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 7300 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. 5110mAh ಬ್ಯಾಟರಿ ಮತ್ತು 45W ಟರ್ಬೊ ಚಾರ್ಜಿಂಗ್ ಒಳಗೊಂಡಿದೆ. ಈ ಫೋನ್ ಮೂರು ಬಣ್ಣಗಳಲ್ಲಿ ಬಿಡುಗಡೆಯಾಗಲಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಪೊಕೊ X7 5G ಫೋನಿನ ವೈಶಿಷ್ಟ್ಯಗಳು
ಪೊಕೊ X7 5G ಫೋನಿನ ವಿನ್ಯಾಸ ಮತ್ತು ಬಣ್ಣಗಳ ಆಯ್ಕೆಯ ಈಗಾಗಲೇ ಬಹಿರಂಗವಾಗಿದೆ. ಇದೀಗ ಪೊಕೊ X7 5G ಫೋನಿನ್ ಪ್ರಮುಖ ವೈಶಿಷ್ಟ್ಯಗಳನ್ನು ಸಹ ಬಹಿರಂಗಪಡಿಸಲಾಗಿದೆ. ಅವುಗಳು ಈ ಕೆಳಗಿನಂತಿವೆ.
ಡಿಸ್ಪ್ಲೇ ವಿವರ
ಪೊಕೊ X7 5G ಸ್ಮಾರ್ಟ್‌ಫೋನ್ 6.67 ಇಂಚಿನ 1.5K ಅಮೋಲೆಡ್ ಡಿಸ್ಪ್ಲೇ ಹೊಂದಿರುತ್ತದೆ. ಇದು 2712 × 1220 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 2560Hz ಟಚ್ ಸ್ಯಾಂಪ್ಲಿಂಗ್ ದರ ಹೊಂದಿರುತ್ತದೆ. ಈ ಮೊಬೈಲ್‌ನಲ್ಲಿ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಹಾಗೆಯೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಪೊಕೊ X7 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಅಲ್ಟ್ರಾ ಪ್ರೊಸೆಸರ್ ಆಕ್ಟಾಕೋರ್ ಜೊತೆಗೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದು 700,000 ಅಂಕಗಳನ್ನು ಮೀರಿದ AnTuTu ಸ್ಕೋರ್ ಹೊಂದಿರುತ್ತದೆ. ಈ ಫೋನ್ ಆಂಡ್ರಾಯ್ಡ್ ಆಧಾರಿತ ಶಿಯೋಮಿ ಹೈಪರ್ ಓಎಸ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ 12GB RAM ಮತ್ತು 512GB ಸ್ಟೋರೇಜ್ ಆಯ್ಕೆ ಒಳಗೊಂಡಿರಲಿದೆ.
ಕ್ಯಾಮೆರಾ ಸೆಟಪ್
ಹೊಸ ಪೊಕೊ X7 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿರುತ್ತದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇರಲಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರುತ್ತದೆ.

ಬ್ಯಾಟರಿ ಮತ್ತು ಚಾರ್ಜಿಂಗ್
ಪೊಕೊ X7 5G ಮೊಬೈಲ್ 5,110mAh ಸಾಮರ್ಥ್ಯ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ಟರ್ಬೊ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ.
ಇತರೆ ವೈಶಿಷ್ಟ್ಯಗಳು
ಪೊಕೊ X7 5G ಫೋನ್ ಹಲವು ಎಐ (AI) ವೈಶಿಷ್ಟ್ಯಗಳನ್ನು ಹೊಂದಿರುತ್ತದೆ. ಇದರಲ್ಲಿ ಎಐ ಇಮೇಜ್ ವಿಸ್ತರಣೆ, ಎಐ ಫಿಲ್ಮ್, ಎಐ ಎರೇಸ್ ಪ್ರೊ ಮತ್ತು ಇನ್ನಿತರ ಎಐ ಕ್ಯಾಮೆರಾ ವೈಶಿಷ್ಟ್ಯಗಳನ್ನು ಸಹ ಒಳಗೊಂಡಿರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್, ವೈ-ಫೈ ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಆಯ್ಕೆಗಳನ್ನು ಹೊಂದಿರಲಿದೆ.
ಪೊಕೊ X7 5G ಬೆಲೆ (ನಿರೀಕ್ಷಿತ)
ಪೊಕೊ X7 F6 ಫೋನಿನ ಉತ್ತರಾಧಿಕಾರಿಯಾಗಿ ಪೊಕೊ X7 5G ಅನ್ನು ಬಿಡುಗಡೆ ಮಾಡಲಾಗುತ್ತದೆ. ಪೊಕೊ X7 F6 ಮೊಬೈಲ್ ಈ ವರ್ಷದ ಮೇ ತಿಂಗಳಲ್ಲಿ ಲಾಂಚ್ ಆಗಿತ್ತು. ಇದರ ಬೆಲೆ 29,999 ರೂ. ಆಗಿದೆ. ಪೊಕೊ X7 5G ಅನ್ನು ಸಹ ಇದೇ ಬಜೆಟ್‌ನಲ್ಲಿ ಬರಲಿದೆ. ಇದು ಹಸಿರು, ಬೆಳ್ಳಿ ಮತ್ತು ಕಪ್ಪು-ಹಳದಿ ಮಿಶ್ರಿತ ಬಣ್ಣದಲ್ಲಿ ಮಾರಾಟವಾಗಲಿದೆ.


Click it and Unblock the Notifications








