ಸ್ಟೈಲಿಶ್ ವಿನ್ಯಾಸದ ಈ 5G ಫೋನಿನ ಬೆಲೆಯಲ್ಲಿ ಸಖತ್ ಇಳಿಕೆ!
ಟೆಕ್ನೋ ಮೊಬೈಲ್ ಕಂಪನಿಯು ಭಿನ್ನ ಬೆಲೆಯಲ್ಲಿ ಹಲವು ಮೊಬೈಲ್‌ಗಳನ್ನು ಪರಿಚಯಿಸಿದ್ದು, ಅವುಗಳಲ್ಲಿ ಕೆಲವು ಗ್ರಾಹಕರ ಗಮನ ಸೆಳೆಯುವಲ್ಲಿ ಸಫಲ ಆಗಿವೆ. ಅಂತಹ ಜನಪ್ರಿಯ ಫೋನ್‌ಗಳ ಲಿಸ್ಟ್‌ನಲ್ಲಿ ಸಂಸ್ಥೆಯ ಟೆಕ್ನೋ ಪೋವಾ 5 ಪ್ರೊ ಮೊಬೈಲ್ ಸಹ ಕಾಣಿಸಿಕೊಂಡಿದೆ. ಈ ಫೋನ್ ಇದೀಗ ಆಕರ್ಷಕ ಬೆಲೆ ಇಳಿಕೆ ಪಡೆದಿದ್ದು, ಮತ್ತಷ್ಟು ಆಕರ್ಷಕ ಎನಿಸಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಟೆಕ್ನೋ ಪೋವಾ 5 ಪ್ರೊ 5G ಮೊಬೈಲ್ ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ವೇರಿಯಂಟ್ 14,999 ರೂ. ಗಳ ಡಿಸ್ಕೌಂಟ್ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಲಭ್ಯ ಇರುವ ಇತರೆ ಡಿಸ್ಕೌಂಟ್ ಪಡೆದುಕೊಂಡರೆ, ಈ ಫೋನ್ ಅನ್ನು 12, 499ರೂ. ಗಳಿಗೆ ಖರೀದಿಸಬಹುದಾಗಿದೆ.

ಅಂದಹಾಗೆ ಟೆಕ್ನೋ ಪೋವಾ 5 ಪ್ರೊ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಅಲ್ಲದೇ ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಇನ್ನುಳಿದಂತೆ ಟೆಕ್ನೋ ಪೋವಾ 5 ಪ್ರೊ 5G ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್ ಮತ್ತು ವಿನ್ಯಾಸ
ಟೆಕ್ನೋ ಪೋವಾ 5 ಪ್ರೊ ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 84.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 396 ಪಿಪಿಐ ಸಾಂದ್ರತೆಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಸಪೋರ್ಟ್ ಮಾಡುತ್ತದೆ.

ಯಾವ ಪ್ರೊಸೆಸರ್ ಕಾರ್ಯವೈಖರಿ
ಟೆಕ್ನೋ ಕಂಪನಿಯ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಬಲ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ HiOS 13 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಕ್ಯಾಮೆರಾ ಸೆನ್ಸಾರ್ ಮಾಹಿತಿ
ಪೋವಾ 5 ಪ್ರೊ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ದ್ವಿತೀಯ ಕ್ಯಾಮೆರಾ AI ಸಪೋರ್ಟ್ ನಲ್ಲಿ ಇದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ನ ರಿಯರ್ ಪ್ಯಾನಲ್‌ನಲ್ಲಿ ನೋಟಿಫೀಕೇಶನ್‌ಗಾಗಿ RGB LED ಲೈಟ್ ಒಳಗೊಂಡಿರುವ ನೂತನ 'ಆರ್ಕ್ ಇಂಟರ್ಫೇಸ್' ಅನ್ನು ಪಡೆದಿದೆ.
ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ ಸೌಲಭ್ಯಗಳು
ಟೆಕ್ನೋ ಪೋವಾ 5 ಪ್ರೊ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದು 68W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi, ಬ್ಲೂಟೂತ್, NFC, GPS ಮತ್ತು A-GPS ಅನ್ನು ಒಳಗೊಂಡಿದೆ. ಇದಲ್ಲದೆ 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಸಹ ಹೊಂದಿದೆ.


Click it and Unblock the Notifications








