ಜಿಯೋ, ಏರ್‌ಟೆಲ್ ಗ್ರಾಹಕರೇ ದಿನವು 2GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳು ಇಲ್ಲಿವೆ!
ದೇಶದ ಟೆಲಿಕಾಂ ವಲಯದಲ್ಲಿ ಜಿಯೋ ಮತ್ತು ಏರ್‌ಟೆಲ್ ಪೈಪೋಟಿಯಲ್ಲಿ ಮುನ್ನುಗುತ್ತಿರುವ ಸಂಸ್ಥೆಗಳಾಗಿ ಗುರುತಿಸಿಕೊಂಡಿವೆ. ಈ ಎರಡು ಟೆಲಿಕಾಂಗಳು ಈಗಾಗಲೇ ಅಧಿಕ ಡೇಟಾ ಪ್ರಯೋಜನದ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಹಾಗೆಯೇ ಆಯ್ದ ಪ್ಲ್ಯಾನಿನಲ್ಲಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ವಿಐಪಿ ಸದಸ್ಯತ್ವದ ಕೊಡುಗೆಯನ್ನು ನೀಡಿವೆ. ಆದ್ರೆ ಅವುಗಳ ನಡುವೆ ಪ್ರತಿದಿನ 2GB ಡೇಟಾ ಯೋಜನೆಗಳು ಹೆಚ್ಚು ಆಕರ್ಷಕ ಅನಿಸಿವೆ.

ಹೌದು, ಜಿಯೊ ಮತ್ತು ಏರ್‌ಟೆಲ್ ಟೆಲಿಕಾಂಗಳು ಪ್ರತಿದಿನ 2GB ಡೇಟಾ ಪ್ರಯೋಜನ ಒದಗಿಸುವ ಕೆಲವು ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿವೆ. ಈ ಯೋಜನೆಗಳಲ್ಲಿ ಬಳಕೆದಾರರಿಗೆ ಪ್ರತಿದಿನ ಡೇಟಾ ಸೌಲಭ್ಯದ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ, ಎಸ್‌ಎಮ್‌ಎಸ್ ಪ್ರಯೋಜನ ಹಾಗೂ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಹ ಲಭ್ಯವಾಗಲಿವೆ. ಹೀಗಾಗಿ ಜಿಯೋ ಮತ್ತು ಏರ್‌ಟೆಲ್‌ನ 2GB ಡೇಟಾ ಯೋಜನೆಗಳು ಬಳಕೆದಾರರ ಮೊದಲ ಆಯ್ಕೆ ಆಗಿದೆ. ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳ 2GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಏರ್‌ಟೆಲ್ 2498ರೂ.ಪ್ಲ್ಯಾನ್
ಏರ್‌ಟೆಲ್‌ನ ಈ ಯೋಜನೆಯು 2GB ದೈನಂದಿನ ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೂ 365 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ / ದಿನ ಪ್ರಯೋಜನವಿದೆ.

ಏರ್‌ಟೆಲ್ 698ರೂ.ಪ್ಲ್ಯಾನ್
ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ ಸೌಲಭ್ಯ ಸಹ ಹೊಂದಿದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಪ್ರಯೋಜನವಿದೆ.

ಏರ್‌ಟೆಲ್ 449ರೂ.ಪ್ಲ್ಯಾನ್
ಏರ್‌ಟೆಲ್ 449ರೂ.ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಒಳಗೊಂಡಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹೊಂದಿದೆ. ಇದರೊಂದಿಗೆ ಪ್ರತಿದಿನ 2GB ಡೇಟಾವನ್ನು ಪಡೆದಿದೆ.

ಏರ್‌ಟೆಲ್ 349ರೂ.ಪ್ಲ್ಯಾನ್
ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 2GB ಡೇಟಾವನ್ನು ಪಡೆದಿದ್ದು, ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಪಡೆದಿದೆ. ಮತ್ತು ಪ್ರತಿದಿನ 100 ಎಸ್‌ಎಂಎಸ್ ಜೊತೆ ಅಮೆಜಾನ್ ಪ್ರೈಮ್ ವೀಡಿಯೊದ ವರ್ಷಪೂರ್ತಿ ಚಂದಾದಾರಿಕೆ ಲಭ್ಯ.

ಏರ್‌ಟೆಲ್ 298ರೂ.ಪ್ಲ್ಯಾನ್
ಏರ್‌ಟೆಲ್‌ನ ಈ ಯೋಜನೆಯು ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಪಡೆದಿದೆ. ಹಾಗೆಯೇ ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಜೊತೆಗೆ ಅನಿಯಮಿತ ಕರೆ ಮಾಡುವ ಪ್ರಯೋಜನವಿದೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ಸೇರಿಸಲಾಗಿದೆ.

ಜಿಯೋ 2399ರೂ ಪ್ಲಾನ್
ಜಿಯೋ ಹೊಸ 2,399ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಟು ಜಿಯೋ ಅನಿಯಮಿತ ವಾಯಿಸ್ ಕರೆಗಳು ಸೇರಿದಂತೆ ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಇತರೆ ಟೆಲಿಕಾಂ ಕರೆಗಳಿಗೆ 12000 ನಿಮಿಷಗಳ ಉಚಿತ ವಾಯಿಸ್ ಕರೆ ಸೌಲಭ್ಯ ಪಡೆದಿದೆ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 599ರೂ. ಪ್ಲ್ಯಾನ್
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಜಿಯೋ 444ರೂ. ಪ್ಲ್ಯಾನ್
ಜಿಯೋದ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 2000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋ 249ರೂ. ಪ್ಲ್ಯಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 1,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ.


Click it and Unblock the Notifications








