Home
ಸುದ್ದಿಜಾಲ

ಜಿಯೋ, ಏರ್‌ಟೆಲ್‌ ಗ್ರಾಹಕರೇ, ಈ ಪ್ಲ್ಯಾನ್‌ ರೀಚಾರ್ಜ್ ಮಾಡ್ಸಿದ್ರೆ, ಡೈಲಿ 3GB ಡೇಟಾ!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಮತ್ತು ಏರ್‌ಟೆಲ್‌ ಮೂಂಚೂಣಿಯಲ್ಲಿ ಗುರುತಿಸಿಕೊಂಡಿವೆ. ಈ ಎರಡು ಟೆಲಿಕಾಂಗಳು ಈಗಾಗಲೇ ಅಧಿಕ ಡೇಟಾ ಪ್ರಯೋಜನದ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಆಕರ್ಷಿಸಿವೆ. ಈ ಟೆಲಿಕಾಂಗಳು ಪ್ರತಿದಿನ 2GB ಹಾಗೂ 3GB ಡೇಟಾ ಪ್ರಯೋಜನಗಳ ಪ್ರೀಪೇಯ್ಡ್‌ ಯೋಜನೆಗಳು ಹೆಚ್ಚು ಆಕರ್ಷಕ ಅನಿಸಿವೆ.

ಟೆಲಿಕಾಂಗಳು

ಹೌದು, ಜಿಯೊ ಮತ್ತು ಏರ್‌ಟೆಲ್‌ ಟೆಲಿಕಾಂಗಳು ಪ್ರತಿದಿನ 3GB ಡೇಟಾ ಪ್ರಯೋಜನ ಒದಗಿಸುವ ಕೆಲವು ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿವೆ. ಈ ಯೋಜನೆಗಳಲ್ಲಿ ಬಳಕೆದಾರರಿಗೆ ಪ್ರತಿದಿನ ಡೇಟಾ ಸೌಲಭ್ಯದ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ, ಎಸ್‌ಎಮ್‌ಎಸ್‌ ಪ್ರಯೋಜನ ಹಾಗೂ ಉಚಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ಲಭ್ಯವಾಗಲಿವೆ. ಹೀಗಾಗಿ ಜಿಯೋ ಮತ್ತು ಏರ್‌ಟೆಲ್‌ನ 3GB ಡೇಟಾ ಯೋಜನೆಗಳು ಬಳಕೆದಾರರ ಮೊದಲ ಆಯ್ಕೆ ಆಗಿದೆ. ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳ 3GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಏರ್‌ಟೆಲ್‌ 558ರೂ. ಪ್ರೀಪೇಯ್ಡ್ ಪ್ಲ್ಯಾನ್

ಏರ್‌ಟೆಲ್‌ 558ರೂ. ಪ್ರೀಪೇಯ್ಡ್ ಪ್ಲ್ಯಾನ್

ಏರ್‌ಟೆಲ್‌ನ ಈ ಯೋಜನೆಯು 3GB ದೈನಂದಿನ ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೂ 365 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ / ದಿನ ಪ್ರಯೋಜನವಿದೆ.

ಏರ್‌ಟೆಲ್‌ 398ರೂ. ಪ್ರೀಪೇಯ್ಡ್ ಪ್ಲ್ಯಾನ್

ಏರ್‌ಟೆಲ್‌ 398ರೂ. ಪ್ರೀಪೇಯ್ಡ್ ಪ್ಲ್ಯಾನ್

ಏರ್‌ಟೆಲ್‌ನ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ ಸೌಲಭ್ಯ ಸಹ ಹೊಂದಿದೆ. ಇದರೊಂದಿಗೆ ಪ್ರತಿದಿನ 3GB ಡೇಟಾ ಪ್ರಯೋಜನವಿದೆ.

ಜಿಯೋ 349ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 349ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಿದ್ದು, ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ದೊರೆಯುತ್ತದೆ. ಇದರೊಂದಿದೆ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಆಪ್ಸ್‌ ಸೇವೆ ಲಭ್ಯ

ಜಿಯೋ 999ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 999ರೂ. ಪ್ರೀಪೇಯ್ಡ್‌ ಪ್ಲಾನ್

ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಉಚಿತ ಎಸ್‌ಎಮ್‌ಎಸ್‌ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

Best Mobiles in India

English summary
Prepaid Plans From Airtel And Jio Offering 3GB Data Per Day.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+