ಕಡಿಮೆ ಬೆಲೆಗೆ ಸ್ಯಾಮ್‌ಸಂಗ್ ಫೋನ್ ಬೇಕಿದ್ರೆ, ಈ ಆಫರ್ ಬೆಸ್ಟ್!
ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯು ಹಲವು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಗಳ ಲಿಸ್ಟ್ ಹೊಂದಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಕೆಲವು ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಆದರೆ ಇದೀಗ ಸ್ಯಾಮ್‌ಸಂಗ್ ಈ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ ಮಾಡಿದ್ದು, ಗ್ರಾಹಕರು ಫೋನಿನತ್ತ ಹಿಂತಿರುಗಿ ನೋಡುವಂತೆ ಮಾಡಿದೆ.
ಹೌದು, ಅಮೆಜಾನ್ ಹಾಗೂ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಎರಡು ಪ್ಲಾಟ್‌ಫಾರ್ಮ್ ಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಬೆಲೆಯಲ್ಲಿ ಆಕರ್ಷಕ ರಿಯಾಯಿತಿ ಲಭ್ಯ ಆಗಿದೆ. 4GB + 64GB ಸ್ಟೋರೇಜ್ ವೇರಿಯಂಟ್ ಬೆಲೆಯು 11,999ರೂ. ಆಗಿದ್ದು, ಈಗ ಕೊಡುಗೆಯಲ್ಲಿ 9,199ರೂ. ಗಳಿಗೆ ಖರೀದಿಗೆ ಲಭ್ಯ ಇದೆ.

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಫೋನ್ 4GB + 64GB ವೇರಿಯಂಟ್ ಹಾಗೂ 4GB + 128GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಅಂದಹಾಗೆ ಈ ಸ್ಮಾರ್ಟ್‌ಫೊನ್ ನೈಟ್‌ಸ್ಕಿ ಗ್ರೀನ್, ವಾಟರ್‌ಫಾಲ್ ಬ್ಲೂ ಮತ್ತು ಸನ್‌ರೈಸ್ ಕಾಪರ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಈ ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಡಿಸ್‌ಪ್ಲೇ ವಿನ್ಯಾಸ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಮೊಬೈಲ್ 6.6 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಡಿಸೈನ್ ಪಡೆದಿದ್ದು, ಇದು ಸ್ಲಿಮ್ ಬೆಜೆಲ್ ಹೊಂದಿದೆ ಹಾಗೂ 60hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಪ್ರೊಸೆಸರ್ ಪವರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಮೊಬೈಲ್ ಎಕ್ಸಿನೋಸ್ 850 ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 12 ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 4GB RAM ಮತ್ತು 128 GB ಆಂತರೀಕ ಸ್ಟೋರೇಜ್ ಆಯ್ಕೆ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಕ್ಯಾಮೆರಾ ಸೆನ್ಸಾರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಸೆಕೆಂಡರಿ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡಾ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲುಟೂತ್ v5.0, ವೈಫೈ, ಯುಎಸ್‌ಬಿ ಪೋರ್ಟ್, 3.5ಮಿ.ಮೀ ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಮೆಮೊರಿ ಆಯ್ಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಮೊಬೈಲ್ ಭಾರತದಲ್ಲಿ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಅವುಗಳು ಕ್ರಮವಾಗಿ 4GB RAM ಮತ್ತು 64GB ಸ್ಟೋರೇಜ್ ಆಯ್ಕೆ ಹಾಗೂ 4GB RAM ಮತ್ತು 128 GB ಸ್ಟೋರೇಜ್ ಆಯ್ಕೆ ಹೊಂದಿದೆ. ಈ ಫೋನ್ ನೈಟ್‌ಸ್ಕಿ ಗ್ರೀನ್, ವಾಟರ್‌ಫಾಲ್ ಬ್ಲೂ ಮತ್ತು ಸನ್‌ರೈಸ್ ಕಾಪರ್ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications








