ಈ ಟೆಕ್ನೋ ಫೋನಿಗೆ ಜಬರ್ದಸ್ತ್ ಆಫರ್!..ಬೆಲೆ ತಿಳಿದ್ರೆ ನೀವು ಅಚ್ಚರಿಪಡ್ತೀರಾ!
ಅಗ್ಗದ ಪ್ರೈಸ್‌ಟ್ಯಾಗ್‌ನ ಸ್ಮಾರ್ಟ್‌ಫೊನ್‌ಗಳ ಮೂಲಕ ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿರುವ ಟೆಕ್ನೊ ಮೊಬೈಲ್ ಸಂಸ್ಥೆಯು ಹಲವು ಮೊಬೈಲ್ ಪರಿಚಯಿಸಿದೆ. ಸಂಸ್ಥೆಯ ಟೆಕ್ನೋ ಸ್ಪಾರ್ಕ್ 10 ಮೊಬೈಲ್ ಇದೀಗ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಗ್ರಾಹಕರು ಹುಬ್ಬೇರಿಸುವಂತಹ ರಿಯಾಯಿತಿ ಪಡೆದುಕೊಂಡಿದೆ.
ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ತಾಣದಲ್ಲಿ ಟೆಕ್ನೋ ಸ್ಪಾರ್ಕ್ 10 ಫೋನ್ ಶೇ. 26% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 13,499ರೂ. ಗಳ ದರದವನ್ನು ಪಡೆದುಕೊಂಡಿದ್ದು, ಆದರೆ ರಿಯಾಯಿತಿ ಈ ಮೊಬೈಲ್ ಅನ್ನು ಗ್ರಾಹಕರು 9,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಇತರೆ ಕೆಲವು ಆಫರ್‌ಗಳು ಕೂಡಾ ಲಭ್ಯ ಆಗುತ್ತವೆ.

ಅಂದಹಾಗೆ ಟೆಕ್ನೋ ಸ್ಪಾರ್ಕ್ 10 ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ G37 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇದೆ. ಇನ್ನುಳಿದಂತೆ ಟೆಕ್ನೋ ಸ್ಪಾರ್ಕ್ 10 ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಫೋನಿನ ಡಿಸೈನ್ ಮತ್ತು ಡಿಸ್‌ಪ್ಲೇ ರಚನೆ ಹೀಗಿದೆ
ಟೆಕ್ನೋ ಸ್ಪಾರ್ಕ್ 10 ಮೊಬೈಲ್ 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಇದರ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಆಗಿದ್ದು, 120Hz ಟಚ್ ಸ್ಯಾಪ್ಲಿಂಗ್ ರೇಟ್, 480 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್‌ಗೆ ಸಪೋರ್ಟ್ ಮಾಡುತ್ತದೆ. ಜೊತೆಗೆ 20:15 ರಚನೆಯ ಅನುಪಾತವನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ ಹೇಗಿದೆ
ಟೆಕ್ನೋ ಸ್ಪಾರ್ಕ್ 10 4G ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ G37 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM + 64GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದ್ದು, ವರ್ಚುವಲ್ RAM ಅನ್ನು 8GB ವರೆಗೆ ವಿಸ್ತರಿಸುವ ಆಯ್ಕೆ ಇದೆ.

ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ
ಟೆಕ್ನೋ ಸಂಸ್ಥೆಯು ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಎರಡನೇ ಕ್ಯಾಮೆರಾ AI ಸೆನ್ಸಾರ್ ಪಡೆದಿದೆ. ಇದರ ಜೊತೆಗೆ 8 ಮೆಗಾ ಪಿಕ್ಸೆಲ್ AI ಬೆಂಬಲಿತ ಸೆಲ್ಫಿ ಕ್ಯಾಮೆರಾ ಸಹ ನೀಡಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಎಷ್ಟಿದೆ
ಟೆಕ್ನೋ ಸ್ಪಾರ್ಕ್ 10 4G ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 18W ಫ್ಲಾಶ್ ಚಾರ್ಜ್ ಸೌಲಭ್ಯ ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಆಯ್ಕೆಗಳನ್ನು ಒಳಗೊಂಡಿದೆ.
ಮೆಮೊರಿ ಹಾಗೂ ಕಲರ್ ಆಯ್ಕೆ
ಟೆಕ್ನೋ ಸ್ಪಾರ್ಕ್ 10 ಫೋನ್ 4GB RAM + 64GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಈ ಫೋನ್ ಆರೆಂಜ್ ಕಲರ್ ಆಯ್ಕೆಯನ್ನು ಪಡೆದಿದ್ದು, ಗ್ರಾಹಕರು ಅಮೆಜಾನ್ ಇ ಕಾಮರ್ಸ್ ತಾಣದ ಮೂಲಕ ಖರೀದಿಗೆ ಲಭ್ಯ.


Click it and Unblock the Notifications








