ಭಾರತದಲ್ಲಿ ರಿಯಲ್‌ಮಿ 10 4G ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಎಷ್ಟು?
ಬಹು ನಿರೀಕ್ಷಿತ ರಿಯಲ್‌ಮಿ 10 4G ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G99SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು 6.4-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ 10 4G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಫ್ಲಾಟ್-ಸ್ಕ್ರೀನ್ ವಿನ್ಯಾಸವನ್ನು ಹೊಂದಿದ್ದು, ಪಂಚ್-ಹೋಲ್ ಅಮೋಲೆಡ್ ಡಿಸ್‌ಪ್ಲೇ ಒಳಗೊಂಡಿದೆ. ಇದರ ಹಿಂಭಾಗದ ಕ್ಯಾಮೆರಾ ಬಳಸಿಕೊಂಡು 1080p ವೀಡಿಯೊಗಳನ್ನು ಶೂಟ್ ಮಾಡಬಹುದು ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನಿನ ವಿಶೇಷತೆ ಏನು? ಇದರ ಬೆಲೆ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ 10 4G ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಫ್ಲಾಟ್-ಸ್ಕ್ರೀನ್ ವಿನ್ಯಾಸವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಇದಲ್ಲದೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದಿದೆ.

ಪ್ರೊಸೆಸರ್ ಯಾವುದು?
ರಿಯಲ್‌ಮಿ 10 4G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G99SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 8GB ವರೆಗಿನ ವರ್ಚುವಲ್ RAM ನೊಂದಿಗೆ ಬರುತ್ತದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ರಿಯಲ್‌ಮಿ 10 4G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ B&W ಲೆನ್ಸ್ ಅನ್ನು ಪಡೆದುಕೊಂಡಿದೆ. ಈ ಫೋನ್‌ನ ಹಿಂಭಾಗದ ಕ್ಯಾಮೆರಾ ಮೂಲಕ 1080p ವೀಡಿಯೊಗಳನ್ನು ಶೂಟ್ ಮಾಡಬಹುದು. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ 10 4G ಸ್ಮಾರ್ಟ್‌ಫೋನ್ 33W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಫೋನ್ ಚಾರ್ಜ್ ಮಾಡಲು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಡಿಯೊಗಾಗಿ 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi 5 ಮತ್ತು ಬ್ಲೂಟೂತ್ 5.3 ಬೆಂಬಲವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ 10 4G ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 13,999ರೂ. ಬೆಲೆಯನ್ನು ಹೊಂದಿದೆ. ಇನ್ನು 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಯು 16,999ರೂ. ಬೆಲೆಯಿಂದ ಪ್ರಾರಂಭವಾಗಲಿದೆ. ಆದರೆ ಲಾಂಚ್ ಆಫರ್‌ನಲ್ಲಿ ಬೇಸ್ ಮಾಡೆಲ್ ಖರೀದಿಸಿದರೆ 1,000ರೂ. ವರೆಗಿನ ರಿಯಾಯಿತಿ ದೊರೆಯಲಿದೆ. ಈ ಫೋನ್ ರಶ್ ಬ್ಲಾಕ್ ಮತ್ತು ಕ್ಲಾಷ್ ವೈಟ್ ಕಲರ್ ಆಯ್ಕೆಗಳಲ್ಲಿ ಬರಲಿದೆ. ಇದು ಫ್ಲಿಪ್‌ಕಾರ್ಟ್, ರಿಯಲ್‌ಮಿ ಇಂಡಿಯಾ ಸ್ಟೋರ್ ಮತ್ತು ದೇಶದ ಇತರ ಅಧಿಕೃತ ಆಫ್‌ಲೈನ್ ಸ್ಟೋರ್‌ಗಳಲ್ಲಿ ಜನವರಿ 15 ರಂದು ಮಧ್ಯಾಹ್ನ 12 ಗಂಟೆಗೆ ಸೇಲ್ ಆಗಲಿದೆ.


Click it and Unblock the Notifications








