Home
ಸುದ್ದಿಜಾಲ

ಬಿಡುಗಡೆ ಆಯ್ತು 'ರಿಯಲ್‌ಮಿ 10 5G' ಫೋನ್‌!..ಜಬರ್ದಸ್ತ್ ಪ್ರೊಸೆಸರ್‌ ಹೈಲೈಟ್‌!

ರಿಯಲ್‌ಮಿ ಸಂಸ್ಥೆಯು ಇತ್ತೀಚಿಗಷ್ಟೆ ರಿಯಲ್‌ಮಿ 10 4G ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿ ಗಮನ ಸೆಳೆದಿತ್ತು. ಇದೀಗ ಸಂಸ್ಥೆಯು ಹೊಸದಾಗಿ ರಿಯಲ್‌ಮಿ 10 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ನೂತನ ಫೋನ್ ಬಹುತೇಕ ರಿಯಲ್‌ಮಿ 10 4G ರಚನೆಯನ್ನೇ ಹೊಂದಿದ್ದು, ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ.

ರಿಯಲ್‌ಮಿ 10 5G

ಹೌದು, ರಿಯಲ್‌ಮಿ ಕಂಪನಿಯು ರಿಯಲ್‌ಮಿ 10 5G ಸ್ಮಾರ್ಟ್‌ಫೋನ್‌ ಅನ್ನು ಚೀನಾ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ರಿಯಲ್‌ಮಿ 10 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದಿದ್ದು, ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಒಳಗೊಂಡಿದೆ.

ಪ್ರೊಸೆಸರ್‌ ಬಲ ಯಾವುದು?

ಪ್ರೊಸೆಸರ್‌ ಬಲ ಯಾವುದು?

ರಿಯಲ್‌ಮಿ 10 5G ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ವರ್ಚುವಲ್ RAM ಅನ್ನು 8GB ವರೆಗೆ ಬೆಂಬಲಿಸುತ್ತದೆ. ಇದು 8GB RAM + 128GB ಮತ್ತು 8GB RAM + 256GB, ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ರಿಯಲ್‌ಮಿ 10 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸ್ಟ್ರೀಟ್ ಫೋಟೋಗ್ರಫಿ 2.0, ಡಿಐಎಸ್ ಸ್ನ್ಯಾಪ್‌ಶಾಟ್, ಇನ್‌ಸ್ಟಂಟ್ ಫೋಕಸ್ ಮತ್ತು ಕ್ವಿಕ್ ಜೂಮ್ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ 10 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವರೆಗೆ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು 28 ನಿಮಿಷಗಳಲ್ಲಿ 0 ರಿಂದ 50%ವರೆಗೆ ಚಾರ್ಜ್ ಮಾಡಬಹುದು ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌,ಯುಎಸ್‌ಬಿ ಸಿ ಪೋರ್ಟ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ 10 5G ಫೋನ್ 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್‌ ಬೆಲೆ ಚೀನಾದಲ್ಲಿ CNY 1,299 (ಭಾರತದಲ್ಲಿ ಅಂದಾಜು 15,000 ರೂ.) ಬೆಲೆಯನ್ನು ಹೊಂದಿದೆ. ಅದೇ ರೀತಿ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್‌ ದರದವು CNY 1,599 (ಭಾರತದಲ್ಲಿ ಅಂದಾಜು 18,000ರೂ.) ಆಗಿದೆ. ಇನ್ನು ಈ ಫೋನ್ ಗೋಲ್ಡ್ ಮತ್ತು ಸ್ಟೋನ್ ಕ್ರಿಸ್ಟಲ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಅಂದಹಾಗೆ ಭಾರತೀಯ ಮಾರುಕಟ್ಟೆಯಲ್ಲಿ ಈ ಫೋನ್ ಯಾವಾಗ ಲಭ್ಯ ಎನ್ನುವ ಬಗ್ಗೆ ಮಾಹಿತಿ ಇಲ್ಲ.

Best Mobiles in India

English summary
Realme 10 5G with MediaTek Dimensity 700 SoC launched: price, specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+