ರಿಯಲ್‌ಮಿ 10 ಫೋನ್‌ನ ಫೀಚರ್ಸ್‌ ಲೀಕ್‌... ಬೆಲೆ ಎಷ್ಟಿರಬಹುದು!?

|

ರಿಯಲ್‌ಮಿ ಕಂಪೆನಿ ಬಜೆಟ್‌ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಜನಪ್ರಿಯತೆ ಗಳಿಸುವಲ್ಲಿ ಖ್ಯಾತಿ ಪಡೆದಿದೆ. ಇದರ ಜೊತೆಗೆ ಸ್ಮಾರ್ಟ್‌ಟಿವಿ, ಇಯರ್‌ಬಡ್ಸ್‌, ಪವರ್‌ ಬ್ಯಾಂಕ್‌ ಸೇರಿದಂತೆ ಹಲವು ರೀತಿಯ ಗ್ಯಾಜೆಟ್‌ಗಳನ್ನು ಕೈಗೆಟಕುವ ಬೆಲೆಗೆ ಗ್ರಾಹಕರಿಗೆ ನೀಡುತ್ತಾ ಬರುತ್ತಿದ್ದು, ಈಗ ರಿಯಲ್‌ಮಿಯು ಹೊಸ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಿದ್ದು, ಈ ಬಗ್ಗೆ ನೆಟ್ಟಿಗರಲ್ಲಿ ಕುತೂಹಲ ಹೆಚ್ಚಾಗಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಕಂಪೆನಿಯು ನವೆಂಬರ್ 5 ರಂದು ಮಾರುಕಟ್ಟೆಗೆ ಪರಿಚಯಿಸಲಿದೆ ಎಂದು ತಿಳಿಸಿತ್ತು.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ವಿಭಾಗದಲ್ಲಿ ರಿಯಲ್‌ಮಿ ವಿಶೇಷ ಆಕರ್ಷಕ ಫೀಚರ್ಸ್‌ಗಳನ್ನು ನೀಡುವುದಲ್ಲದೇ ಕೈಕೆಟಕುವ ಬೆಲೆಯಲ್ಲಿ ಮಾರಾಟ ಮಾಡುವುದರಿಂದ ಬಹುಪಾಲು ಜನರು ರಿಯಲ್‌ಮಿ ಕಡೆ ಮುಖ ಮಾಡುತ್ತಾರೆ. ಅದರಂತೆ ಮುಂದಿನ ವರ್ಷ ರಿಯಲ್‌ಮಿ 10 ಸರಣಿಯನ್ನು ಪ್ರಾರಂಭಿಸುತ್ತೇವೆ ಎಂದು ಕಂಪೆನಿಯು ಈ ಹಿಂದೆಯೇ ದೃಢಪಡಿಸಿತ್ತು. ಇದರ ನಡುವೆ ಈಗ ರಿಯಲ್‌ಮಿಯ 10 ಸರಣಿ ಸ್ಮಾರ್ಟ್‌ಫೋನ್‌ ಬಗ್ಗೆ ಕೆಲವು ಮಾಹಿತಿ ಲೀಕ್‌ ಆಗಿವೆ. ಅದರಂತೆ 10 ಪ್ರೊ ಮತ್ತು 10 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್‌ಗಳಲ್ಲಿ 5G ಬೆಂಬಲ ಇರಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಲೀಕ್ ಆದ ಮಾಹಿತಿ ಪ್ರಕಾರ ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ವಿನ್ಯಾಸ, ಏನೆಲ್ಲಾ ಫೀಚರ್ಸ್‌ ಇದೆ ಎಂಬುದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ ಓದಿರಿ.

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ವಿನ್ಯಾಸ

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ವಿನ್ಯಾಸ

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ 6.4 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಯನ್ನು ಹೊಂದಿರಲಿದ್ದು, 1080 x 2400 ಪಿಕ್ಸೆಲ್‌ ರೆಸಲ್ಯೂಶನ್‌ ಜೊತೆಗೆ 90Hz ರಿಫ್ರೆಶ್ ರೇಟ್‌ ನೀಡಲಿದೆ ಎಂಬ ಮಾಹಿತಿ ದೃಢವಾಗಿದೆ. ಹಾಗೆಯೇ ಡಿಸ್‌ಪ್ಲೇನಲ್ಲಿ ಪಂಚ್ ಹೋಲ್ ರಚನೆ ಇರಲಿದೆ.

ಪ್ರೊಸೆಸರ್ ಬಲ ಯಾವುದು?

ಪ್ರೊಸೆಸರ್ ಬಲ ಯಾವುದು?

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಮೀಡಿಯ ಟೆಕ್‌ ಹಿಲಿಯೋ G99 SoC ನಲ್ಲಿ ಕಾರ್ಯನಿರ್ವಹಿಸಲಿದ್ದು, 8GB RAM ಹಾಗೂ 128GB ಇಂಟರ್ನಲ್ ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಜೊತೆಗೆ ಈ ಇಂಟರ್ನಲ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಮೈಕ್ರೊ SD ಕಾರ್ಡ್ ಮೂಲಕ ಮತ್ತಷ್ಟು ಹೆಚ್ಚಿಗೆ ಮಾಡಿಕೊಳ್ಳಬಹುದಾಗಿದೆಯಂತೆ. ಜೊತೆಗೆ ಇದು 4G ಬೆಂಬಲದ ಸ್ಮಾರ್ಟ್‌ಫೋನ್‌ ಆಗಿರಲಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ಈ ಸ್ಮಾರ್ಟ್‌ಫೋನ್‌ ರಿಯರ್‌ ಪ್ಯಾನಲ್‌ನಲ್ಲಿ 50 ಮೆಗಾಪಿಕ್ಸೆಲ್‌ ಪ್ರಮುಖ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನುವ ಮಾಹಿತಿಯಷ್ಟೇ ತಿಳಿದುಬಂದಿದ್ದು, ದ್ವಿತೀಯ ಕ್ಯಾಮೆರಾ ಎಷ್ಟು ಮೆಗಾಪಿಕ್ಸೆಲ್‌ ಸಾಮರ್ಥ್ಯ ಹೊಂದಿದೆ ಎನ್ನುವ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಇನ್ನು ಈ ಡ್ಯುಯಲ್ ಕ್ಯಾಮೆರಾ ರಚನೆ ಉದ್ದೇಶಕ್ಕಾಗಿ ಆಕರ್ಷಕವಾದ ಎರಡು ದೊಡ್ಡ ವೃತ್ತಾಕಾರದ ಕಟೌಟ್‌ ರಚನೆ ಇದರಲ್ಲಿದೆ ಎಂಬ ಮಾಹಿತಿ ದೃಢವಾಗಿದೆ. ಹಾಗೆಯೇ ಈ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲಾಶ್ ಲೈಟ್‌ ಸಹ ಇದೆ ಎಂದು ವರದಿಯಾಗಿದೆ.

ಬ್ಯಾಟರಿ ಹಾಗೂ ಇತರೆ

ಬ್ಯಾಟರಿ ಹಾಗೂ ಇತರೆ

ಬಿಡುಗಡೆ ಆಗಬೇಕಿರುವ ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಡ್ಯುಯಲ್ ಬ್ಯಾಂಡ್ ವೈ-ಫೈ, ಬ್ಲೂಟೂತ್ ಆವೃತ್ತಿ 5.0, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್‌ನಂತಹ ಕನೆ್ಟಿವಿಟಿ ಆಯ್ಕೆಗಳನ್ನು ಇದು ಪಡೆದಿದೆ ಎಂದು ತಿಳಿದುಬಂದಿದೆ.

ಬೆಲೆ ಹಾಗೂ ಲಭ್ಯತೆ

ಬೆಲೆ ಹಾಗೂ ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಬಗ್ಗೆ 91 ಮೊಬೈಲ್ಸ್ ರಿಪೋರ್ಟ್‌, ಟಿಪ್‌ಸ್ಟರ್ ಆನ್‌ಲೀಕ್ಸ್ ವರದಿ ಮಾಡಿದ್ದು, ಇವುಗಳ ಪ್ರಕಾರ ಈ ಫೋನ್‌ ಭಾರತದಲ್ಲಿ 15,000 ರೂ.ಗಿಂತ ಕಡಿಮೆಗೆ ಈ ಫೋನ್ ಲಭ್ಯವಿರಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ರೆಡ್ಮಿ ನೋಟ್ 11 4G, ಮೊಟೊ G52 ಸ್ಮಾರ್ಟ್‌ಫೋನ್‌ಗಳಿಗೆ ಪ್ರತಿಸ್ಪರ್ಧಿಯಾಗಿ ನಿಲ್ಲುತ್ತದೆ ಎನ್ನುವ ಮಾತು ಸಹ ಕೇಳಿಬರುತ್ತಿದೆ. ಆದರೆ, ನಿಖರವಾಗಿ ಈ ಸ್ಮಾರ್ಟ್‌ಫೋನ್‌ ಯಾವಾಗ ಲಾಂಚ್‌ ಆಗುತ್ತದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈ ಫೋನ್ ಪಿಂಕ್ ಮತ್ತು ಗ್ರೇ ಬಣ್ಣ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಬಹಿರಂಗವಾಗಿದೆ.

Best Mobiles in India

English summary
Realme company is famous for introducing smartphones at budget prices and gaining popularity. Now before the release, the information about the features of the Realme 10 phone has been leaked.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X