ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ಕೊಡಲಿದೆ ರಿಯಲ್‌ಮಿ 10 ಫೋನ್‌!..ಬೆಲೆ ಎಷ್ಟು?

|

ರಿಯಲ್‌ಮಿ ಸಂಸ್ಥೆಯು ಇತ್ತೀಚಿಗೆ ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಡಿಸೈನ್‌ ಹಾಗೂ ಬಜೆಟ್‌ನಿಂದ ಗ್ರಾಹಕರನ್ನು ಸೆಳೆದಿದೆ. ಈ ಫೋನ್ ಇದೀಗ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಇದೇ ಜನವರಿ 9 ರಂದು ಅಧಿಕೃತವಾಗಿ ಬಿಡುಗಡೆ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G99 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ.

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌

ಹೌದು, ರಿಯಲ್‌ಮಿ ಕಂಪನಿಯು ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಮೂಲಕ ತನ್ನ ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಅನ್ನು ಜ.9 ರಂದು ಬಿಡುಗಡೆ ಮಾಡಲಿದೆ. ಈ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ? ನಿರೀಕ್ಷಿತ ಬೆಲೆ ಎಷ್ಟು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದಿದ್ದು, ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಒಳಗೊಂಡಿದೆ.

ಪ್ರೊಸೆಸರ್‌ ಹೇಗಿದೆ?

ಪ್ರೊಸೆಸರ್‌ ಹೇಗಿದೆ?

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G99 ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ವರ್ಚುವಲ್ RAM ಅನ್ನು 8GB ವರೆಗೆ ಬೆಂಬಲಿಸುತ್ತದೆ. 8GB RAM + 256GB, ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಡ್ಯುಯಲ್‌ ಕ್ಯಾಮೆರಾ

ಡ್ಯುಯಲ್‌ ಕ್ಯಾಮೆರಾ

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸ್ಟ್ರೀಟ್ ಫೋಟೋಗ್ರಫಿ 2.0, ಡಿಐಎಸ್ ಸ್ನ್ಯಾಪ್‌ಶಾಟ್, ಇನ್‌ಸ್ಟಂಟ್ ಫೋಕಸ್ ಮತ್ತು ಕ್ವಿಕ್ ಜೂಮ್ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33 W ವರೆಗೆ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು 28 ನಿಮಿಷಗಳಲ್ಲಿ 0 ರಿಂದ 50% ವರೆಗೆ ಚಾರ್ಜ್ ಮಾಡಬಹುದು ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌,ಯುಎಸ್‌ಬಿ ಸಿ ಪೋರ್ಟ್‌ ಅನ್ನು ಒಳಗೊಂಡಿದೆ.

ನಿರೀಕ್ಷಿತ ಬೆಲೆ ಎಷ್ಟು? ಮತ್ತು ಲಭ್ಯತೆ

ನಿರೀಕ್ಷಿತ ಬೆಲೆ ಎಷ್ಟು? ಮತ್ತು ಲಭ್ಯತೆ

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಭಾರತದಲ್ಲಿ ಜ.9 ರಂದು ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ. ಇನ್ನು ಭಾರತದಲ್ಲಿ ಈ ಫೋನಿನ ಆರಂಭಿಕ ಬೆಲೆಯು ಸುಮಾರು 13,000 ರೂ - 15,000ರೂ. ಗಳ ಆಸುಪಾಸಿನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ಫೋನ್‌ ಕ್ಲಾಷ್ ವೈಟ್ ಮತ್ತು ರಶ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Realme 10 India Launch Officially Set for January 9; Expected Price?.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X