Realme 10 Pro 5G Coca-Cola Edition : ಇಂದು ಕೋಕಾ-ಕೋಲಾ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ!..ಬೆಲೆ ಎಷ್ಟು?.ಫೀಚರ್ಸ್ ಏನು?
ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಆಗಿರುವ ರಿಯಲ್‌ಮಿ 10 ಪ್ರೊ 5G ಕೋಕಾ-ಕೋಲಾ ಎಡಿಷನ್ ಫೋನ್ (Realme 10 Pro 5G Coca-Cola Edition) ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಭಾರೀ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಫೆಬ್ರವರಿ 14) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮಧ್ಯಾಹ್ನ 12 ಗಂಟೆಯಿಂದ ಫಸ್ಟ್ ಸೇಲ್ ಶುರು ಮಾಡಲಿದೆ. ಈ ಸ್ಮಾರ್ಟ್‌ಫೋನ್ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ 108 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದ್ದು, ಕೋಕಾ ಕೋಲಾ ಹೆಸರಿನ ಲುಕ್ ಪಡೆದಿದೆ.

ಹೌದು, ರಿಯಲ್‌ಮಿ 10 ಪ್ರೊ 5G ಕೋಕಾ-ಕೋಲಾ ಎಡಿಷನ್ ಫೋನ್ ಸ್ಮಾರ್ಟ್‌ಫೋನ್ ಮಾರಾಟ ಇಂದು ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ನಡೆಯಲಿದೆ. ಈ ಫೋನ್ ಸ್ನ್ಯಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಹೊಂದಿದ್ದು, ಹಾಗೆಯೇ 33W SuperVOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿರುವುದು ಪ್ರಮುಖ ಆಕರ್ಷಣೆ ಎನಿಸಿದೆ. ಈ ಫೋನಿನ ಆರಂಭಿಕ ಬೆಲೆಯು 20,999ರೂ. ಆಗಿದೆ. ಹಾಗಾದರೆ ರಿಯಲ್‌ಮಿ 10 ಪ್ರೊ 5G ಕೋಕಾ-ಕೋಲಾ ಎಡಿಷನ್ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಕೋಕಾ-ಕೋಲಾ ಎಡಿಷನ್ ಫೋನ್ : ಡಿಸ್‌ಪ್ಲೇ ವಿನ್ಯಾಸ
ರಿಯಲ್‌ಮಿ 10 ಪ್ರೊ 5G ಕೋಕಾ-ಕೋಲಾ ಎಡಿಷನ್ ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 93.76 ಪ್ರತಿಶತ ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.
ಕೋಕಾ-ಕೋಲಾ ಎಡಿಷನ್ ಫೋನ್ : ಪ್ರೊಸೆಸರ್ ಪವರ್
ರಿಯಲ್‌ಮಿ 10 ಪ್ರೊ 5G ಕೋಕಾ-ಕೋಲಾ ಎಡಿಷನ್ ಫೋನ್ 6nm ಸ್ನ್ಯಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಬಲವನ್ನು ಪಡೆದಿದೆ. ಹಾಗೆಯೇ 8 GB RAM ಮತ್ತು 128 GB ಇನ್‌ಬಿಲ್ಟ್ ಸ್ಟೋರೇಜ್ ಪಡೆದುಕೊಂಡಿದೆ. ಇದಲ್ಲದೆ RAM ಅನ್ನು 16GB ವರೆಗೆ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕೋಕಾ-ಕೋಲಾ ಎಡಿಷನ್ ಫೋನ್ : ಕ್ಯಾಮೆರಾ ರಚನೆ ಮಾಹಿತಿ
ರಿಯಲ್‌ಮಿ 10 ಪ್ರೊ 5G ಕೋಕಾ-ಕೋಲಾ ಎಡಿಷನ್ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಕೋಕಾ-ಕೋಲಾ ಎಡಿಷನ್ ಫೋನ್ : ಬ್ಯಾಟರಿ ಬ್ಯಾಕ್‌ಅಪ್
ರಿಯಲ್‌ಮಿ 10 ಪ್ರೊ 5G ಕೋಕಾ-ಕೋಲಾ ಎಡಿಷನ್ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದ್ದು, 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ ಕೇವಲ 20 ನಿಮಿಷಗಳಲ್ಲಿ 50% ಚಾರ್ಜ್ ಮಾಡಬಹುದಾಗಿದೆ.

ಕೋಕಾ-ಕೋಲಾ ಎಡಿಷನ್ ಫೋನ್ : ಬೆಲೆ ಮತ್ತು ಲಭ್ಯತೆ ಮಾಹಿತಿ
ಭಾರತದಲ್ಲಿ ರಿಯಲ್‌ಮಿ 10 ಪ್ರೊ 5G ಕೋಕಾ-ಕೋಲಾ ಎಡಿಷನ್ ಫೋನ್ 8GB RAM + 128 GB ಸ್ಟೋರೇಜ್ ರೂಪಾಂತರದ ಬೆಲೆ 20,999 ರೂ. ಆಗಿದೆ. ಅಂದಹಾಗೆ ರಿಯಲ್‌ಮಿ ಸಂಸ್ಥೆಯು 1000 ಯೂನಿಟ್‌ಗಳನ್ನು ಮಾತ್ರ ಮಾರಾಟ ಮಾಡುವುದಾಗಿ ತಿಳಿಸಿದೆ.


Click it and Unblock the Notifications








