ರಿಯಲ್‌ಮಿ 10 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ! ಪ್ರೊಸೆಸರ್‌ ಯಾವುದು?

|

ಇತ್ತೀಚಿನ ದಿನಗಳಲ್ಲಿ ರಿಯಲ್‌ಮಿ ಕಂಪೆನಿ ಕೂಡ ಪ್ರಮುಖ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳ ಸಾಲಿನಲ್ಲಿ ಸೇರಿಕೊಂಡಿದೆ. ಬಳಕೆದಾರರ ನೆಚ್ಚಿನ ಆಯ್ಕೆಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುತ್ತಿರುವ ರಿಯಲ್‌ಮಿ ಕಂಪೆನಿ ತನ್ನ ಪ್ರತಿ ಸ್ಮಾರ್ಟ್‌ಫೋನ್‌ನಲ್ಲಿಯೂ ಹೊಸತನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಸದ್ಯ ಇದೀಗ ಹೊಸ ರಿಯಲ್‌ಮಿ 10 ಸರಣಿ ಪರಿಚಯಿಸಲು ತಯಾರಿ ನಡೆಸಿದೆ. ಈ ಸರಣಿಯ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಈಗಾಗಲೇ ಆನ್‌ಲೈನ್‌ನಲ್ಲಿ ಸೋರಿಕಯಾಗಿದ್ದು, ಇದೀಗ ರಿಯಲ್‌ 10 ಪ್ರೊ ಪ್ಲಸ್‌ ಫೋನ್‌ನ ಫೀಚರ್ಸ್‌ ಲೀಕ್‌ ಆಗಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿಯ ಹೊಸ ರಿಯಲ್‌ಮಿ 10 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ 10 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 2412 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಈ ಡಿಸ್‌ಪ್ಲೇ LCD ಅಥವಾ AMOLED ಪ್ಯಾನೆಲ್ ಆಗಿರುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ ಎನ್ನಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ 10 ಪ್ರೊ+ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 ಪ್ರೊಸೆಸರ್‌ ವೇಗವನ್ನು ಪಡೆದಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ Realme UI ಅನ್ನು ಬಾಕ್ಸ್‌ನಿಂದ ಬೂಟ್ ಮಾಡುತ್ತದೆ. ಹಾಗೆಯೇ 8GB RAM + 128GB, 8GB RAM + 256GB, ಮತ್ತು 12GB RAM + 256GB ಇಂಟರ್‌ ಸ್ಟೋರೇಜ್‌ ಆಯ್ಕೆಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ

ಟ್ರಿಪಲ್‌ ರಿಯರ್‌ ಕ್ಯಾಮೆರಾ

ರಿಯಲ್‌ಮಿ 10 ಪ್ರೊ + 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಏನು?

ಬ್ಯಾಟರಿ ಬ್ಯಾಕ್‌ಅಪ್‌ ಏನು?

ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂರ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಜೊತೆಗೆ ಇನ್‌ ಡಿಸ್‌ಪ್ಲೇ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ 10 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಮೊದಲಿಗೆ ನವೆಂಬರ್ 17 ರಂದು ಚೀನಾದಲ್ಲಿ ಬಿಡುಗಡೆಯಾಗಲಿದೆ. ಇದಾದ ನಂತರ ಭಾರತದಲ್ಲಿ ಕೂಡ ಲಾಂಚ್‌ ಆಗಲಿದೆ. ಇನ್ನು ಚೀನಾದಲ್ಲಿ ಈ ಸ್ಮಾರ್ಟ್‌ಫೋನ್‌ CNY 1,999 (ಅಂದಾಜು 22,808ರೂ) ಬೆಲೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ.

Best Mobiles in India

English summary
Realme 10 Pro+ 5G with Dimensity 1080 SoC Teased Ahead of Launch

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X