ಇಂದು ನಡೆಯಲಿದೆ ರಿಯಲ್‌ಮಿ 10 ಪ್ರೊ ಫಸ್ಟ್‌ ಸೇಲ್‌! ಆಫರ್‌ ಏನು? ಇಂದೇ ಖರೀದಿಸಿ!

|

ರಿಯಲ್‌ಮಿ ಕಂಪೆನಿಯ ಬಹು ನಿರೀಕ್ಷಿತ ಸ್ಮಾರ್ಟ್‌ಫೋನ್‌ ರಿಯಲ್‌ಮಿ 10 ಪ್ರೊ ಕಳೆದ ವಾರ ಭಾರತದಲ್ಲಿ ಬಿಡುಗಡೆಯಾಗಿತ್ತು. ತನ್ನ ಸ್ಟೈಲಿಶ್‌ ಲುಕ್‌ ಹಾಗೂ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿರುವ ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್‌ ಇಂದು (16) ತನ್ನ ಫಸ್ಟ್‌ ಸೇಲ್‌ ಆರಂಭಿಸಲಿದೆ. ಇದು ಫ್ಲಿಪ್‌ಕಾರ್ಟ್‌ ಮೂಲಕ ಇಂದು ಮಧ್ಯಾಹ್ನ 12ಗಂಟೆಯಿಂದ ಖರೀದಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಹೈಪರ್‌ಸ್ಪೇಸ್ ಗೋಲ್ಡ್, ಡಾರ್ಕ್ ಮ್ಯಾಟರ್ ಮತ್ತು ನೆಬ್ಯುಲಾ ಬ್ಲೂ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್‌ನ ಫಸ್ಟ್‌ ಸೇಲ್‌ ಇಂದು ನಡೆಯಲಿದೆ. ಅಲ್ಲದೆ ಫಸ್ಟ್‌ ಸೇಲ್‌ ಪ್ರಯುಕ್ತ ವಿಶೇಷ ಆಫರ್‌ ಕೂಡ ಪಡೆದುಕೊಳ್ಳಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 5G ಫೋನ್‌ ಆಗಿದ್ದು, ಸ್ಲಿಮ್‌ ವಿನ್ಯಾಸ ಹಾಗೂ ಲೆಸ್‌ ಬೆಜೆಲ್‌ಗಳನ್ನು ಹೊಂದಿದೆ. ಹಾಗಾದ್ರೆ ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಪ್ರಯುಕ್ತ ಏನೆಲ್ಲಾ ಆಫರ್‌ ಲಭ್ಯವಾಗಲಿದೆ? ಫೋನ್‌ನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫಸ್ಟ್‌ ಸೇಲ್‌ ಆಫರ್‌ ಏನಿದೆ?

ಫಸ್ಟ್‌ ಸೇಲ್‌ ಆಫರ್‌ ಏನಿದೆ?

ರಿಯಲ್‌ಮಿ 10ಪ್ರೊ ಸ್ಮಾರ್ಟ್‌ಫೋನ್‌ನ ಬೇಸ್‌ ಮಾಡೆಲ್‌ 6GB RAM + 128GB ಆಯ್ಕೆಯ ಬೆಲೆ 18,999 ರೂ. ಆಗಿದೆ. ಹಾಗೆಯೇ 8GB RAM + 128GB ಆಯ್ಕೆಯ ಬೆಲೆ 19,999ರೂ. ಆಗಿದೆ. ಇದನ್ನು ಫಸ್ಟ್‌ ಸೇಲ್‌ ಆಫರ್‌ ಪ್ರಯುಕ್ತ SBI ಮತ್ತು HDFC ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ 1,000 ರೂ. ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಲ್ಲದೆ EMI ವಹಿವಾಟು ಹಾಗೂ SBI ಕ್ರೆಡಿಟ್ ಕಾರ್ಡ್ ಹೊಂದಿರುವವರು 750 ರೂಪಾಯಿಗಳವರೆಗೆ ಡಿಸ್ಕೌಂಟ್‌ ಪಡೆದುಕೊಳ್ಳಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ ನಿಮಗೆ ಹೈಪರ್‌ಸ್ಪೇಸ್ ಗೋಲ್ಡ್, ಡಾರ್ಕ್ ಮ್ಯಾಟರ್ ಮತ್ತು ನೆಬ್ಯುಲಾ ಬ್ಲೂ ಕಲರ್‌ ಆಯ್ಕೆಗಳಲ್ಲಿ ಸಿಗಲಿದೆ.

ಇದರ ಡಿಸ್‌ಪ್ಲೇ ವಿನ್ಯಾಸ ಹೇಗಿದೆ?

ಇದರ ಡಿಸ್‌ಪ್ಲೇ ವಿನ್ಯಾಸ ಹೇಗಿದೆ?

ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x 2,400ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 93.76 ಪ್ರತಿಶತ ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್‌ 6nm ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಪಡೆದುಕೊಂಡಿದೆ. ಇದಲ್ಲದೆ RAM ಅನ್ನು 16GB ವರೆಗೆ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ ಕೇವಲ 20 ನಿಮಿಷಗಳಲ್ಲಿ 50% ಚಾರ್ಜ್‌ ಮಾಡಬಹುದಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್ 5G ಬೆಂಬಲ, Wi-Fi ಮತ್ತು ಬ್ಲೂಟೂತ್ 5.1, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ.

Best Mobiles in India

English summary
Realme 10 Pro goes on sale in India today: Check offers

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X