Home
ಸುದ್ದಿಜಾಲ

ಇಂದು ರಿಯಲ್‌ಮಿ 10 ಪ್ರೊ+ 5G ಫಸ್ಟ್‌ ಸೇಲ್‌!..ಜಬರ್ದಸ್ತ್ ಆಫರ್‌ನಲ್ಲಿ ಲಭ್ಯ!

ರಿಯಲ್‌ಮಿ ಮೊಬೈಲ್ ಸಂಸ್ಥೆಯ ತನ್ನ ಬಹುನಿರೀಕ್ಷಿತ ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್ ಸರಣಿ ಅನ್ನು ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸರಣಿಯಲ್ಲಿನ ರಿಯಲ್‌ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು (ಡಿ 14) ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಮೂಲಕ ಆರಂಭಿಸಲಿದೆ. ಇನ್ನು ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ರಿಯಲ್‌ಮಿ 10 ಪ್ರೊ+ 5G

ಹೌದು, ರಿಯಲ್‌ ಮಿ ಕಂಪನಿಯ ರಿಯಲ್‌ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಪ್ರಮುಖ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇನ್ನುಳಿದಂತೆ ರಿಯಲ್‌ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ? ಆಫರ್‌ ಏನಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಬೆಲೆ ಮತ್ತು ಲಭ್ಯತೆ ಹಾಗೂ ಆಫರ್

ಬೆಲೆ ಮತ್ತು ಲಭ್ಯತೆ ಹಾಗೂ ಆಫರ್

ರಿಯಲ್‌ಮಿ 10ಪ್ರೊ + 5G ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್‌ ಆಯ್ಕೆಗಳನ್ನು ಹೊಂದಿದ್ದು, ಆ ಪೈಕಿ 6GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 24,999ರೂ.ಆಗಿದೆ. ಇದರ 8GB RAM + 128GB ಸ್ಟೋರೇಜ್ ಮಾದರಿಯ ಬೆಲೆ 25,999ರೂ. ಆಗಿದೆ. ಇನ್ನು ಈ ಫೋನ್ ಹೈಪರ್‌ಸ್ಪೇಸ್ ಗೋಲ್ಡ್, ಡಾರ್ಕ್ ಮ್ಯಾಟರ್ ಮತ್ತು ನೆಬ್ಯುಲಾ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ರಿಯಲ್‌ಮಿ 10 ಪ್ರೊ+ 5G ಫೋನ್‌ ಫೀಚರ್ಸ್‌

ರಿಯಲ್‌ಮಿ 10 ಪ್ರೊ+ 5G ಫೋನ್‌ ಫೀಚರ್ಸ್‌

ರಿಯಲ್‌ಮಿ 10ಪ್ರೊ + 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 2,160Hz PWM ಡಿಮ್ಮಿಂಗ್‌ ಹೊಂದಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೋರ್ಟ್‌ ಅನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 256GB ಇನ್‌ಬಿಲ್ಟ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಡೈನಾಮಿಕ್ RAM ವಿಸ್ತರಣೆ ಮೂಲಕ 16GB ವರೆಗೆ RAM ಅನ್ನು ವಿಸ್ತರಿಸಬಹುದಾಗಿದೆ.

ಸ್ಮಾರ್ಟ್‌ಫೋನ್‌

ಇನ್ನು ರಿಯಲ್‌ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ 47 ನಿಮಿಷಗಳಲ್ಲಿ 100% ಚಾರ್ಜ್‌ ಮಾಡಬಹುದಾಗಿದೆ. ಇನ್ನು ಈ ಫೋನ್‌ ಡ್ಯುಯಲ್-ಬ್ಯಾಂಡ್ Wi-Fi ಬೆಂಬಲಿಸಲಿದ್ದು, ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಪಡೆದಿದೆ.

ರಿಯಲ್‌ಮಿ 10 ಪ್ರೊ 5G ಫೋನ್‌ ಫೀಚರ್ಸ್‌

ರಿಯಲ್‌ಮಿ 10 ಪ್ರೊ 5G ಫೋನ್‌ ಫೀಚರ್ಸ್‌

ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x 2,400ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಪಡೆದಿದೆ. ಇದು ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಪಡೆದುಕೊಂಡಿದೆ. ಇದಲ್ಲದೆ RAM ಅನ್ನು 16GB ವರೆಗೆ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

Best Mobiles in India

English summary
Realme 10 Pro Plus first sale in India Today: Price, specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+