ರಿಯಲ್‌ಮಿ 10 ಪ್ರೊ ಮತ್ತು ರಿಯಲ್‌ಮಿ ಪ್ರೊ ಪ್ಲಸ್ 5G ಬಿಡುಗಡೆ!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ರಿಯಲ್‌ಮಿ 10 Pro ಸರಣಿ ಬಿಡುಗಡೆಯಾಗಿದೆ. ಈ ಸರಣಿಯಲ್ಲಿ ಎರಡು ಹೊಸ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇವುಗಳನ್ನು ರಿಯಲ್‌ಮಿ 10 ಪ್ರೊ 5G ಮತ್ತು ರಿಯಲ್‌ಮಿ 10 ಪ್ರೊ + 5G ಎಂದು ಹೆಸರಿಸಲಾಗಿದೆ. ಇದರಲ್ಲಿ ರಿಯಲ್‌ಮಿ 10 ಪ್ರೊ 5G ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಆದರೆ ರಿಯಲ್‌ಮಿ 10 ಪ್ರೊ ಪ್ಲಸ್ 5G ಮೀಡಿಯಾಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್ ಬಲವನ್ನು ಹೊಂದಿದೆ.

ಹೌದು, ರಿಯಲ್‌ಮಿ ಕಂಪೆನಿ ರಿಯಲ್‌ಮಿ 10 ಪ್ರೊ 5G ಮತ್ತು ರಿಯಲ್‌ಮಿ 10 ಪ್ರೊ + 5G ಫೋನ್ ಲಾಂಚ್ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿವೆ. ಇದರಲ್ಲಿ ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಆದರೆ ರಿಯಲ್‌ಮಿ 10 ಪ್ರೊ + 5G ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು? ಫೀಚರ್ಸ್ ಹೇಗಿದೆ? ಇದೆಲ್ಲದರ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್
ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2MP ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 33W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 5G, 4G LTE, Wi-Fi 6, ಬ್ಲೂಟೂತ್ 5.2 ಮತ್ತು NFC ಬೆಂಬಲವನ್ನು ಹೊಂದಿದೆ.

ರಿಯಲ್‌ಮಿ 10 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್
ರಿಯಲ್‌ಮಿ 10 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ 6.7 ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 2160Hz PWM ಬ್ಲರ್ ಮತ್ತು 100% DCI-P3 ಕಲರ್ ಗ್ಯಾಮಟ್ ಅನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್, ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದು 5G, 4G LTE, Wi-Fi 6, ಬ್ಲೂಟೂತ್ 5.2 ಮತ್ತು NFC ಬೆಂಬಲವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಆಯ್ಕೆಗೆ CNY 1599 (ಅಂದಾಜು 18,300ರೂ)ಬೆಲೆ ಹೊಂದಿದೆ. ಇದರ 12GB + 256GB ಸ್ಟೋರೇಜ್ ಆಯ್ಕೆಯ ಬೆಲೆ CNY 1899 (ಸುಮಾರು 21,700 ರೂ.)ಆಗಿದೆ.
ಇನ್ನು ರಿಯಲ್‌ಮಿ 10 Pro+ 5G ಬೇಸ್ ಮಾಡೆಲ್ 8GB + 128GB ಸ್ಟೋರೇಜ್ ಆಯ್ಕೆಗೆ CNY 1699 (ಸುಮಾರು 19,400ರೂ) ಆರಂಭಿಕ ಬೆಲೆಯನ್ನು ಹೊಂದಿದೆ. 8GB + 256GB ಸ್ಟೋರೇಜ್ ಆಯ್ಕೆಯು CNY 1999 (ಸುಮಾರು 22,900ರೂ) ಬೆಲೆ ಪಡೆದಿದೆ. ಹಾಗೆಯೇ 12GB + 256GB ಸ್ಟೋರೇಜ್ ಆಯ್ಕೆಯ ಬೆಲೆ CNY 2299 (ಸುಮಾರು 26,300ರೂ)ಆಗಿದೆ. ಈ ಸ್ಮಾರ್ಟ್‌ಫೋನ್‌ಗಳು ಸ್ಟಾರ್‌ಲೈಟ್ ಗೋಲ್ಡ್, ನೈಟ್ ಬ್ಲ್ಯಾಕ್ ಮತ್ತು ಸೀ ಬ್ಲೂ ಬಣ್ಣಗಳಲ್ಲಿ ಲಭ್ಯವಿದೆ.


Click it and Unblock the Notifications








