Just In
- 8 min ago
ಡಿಜೋ ಸಂಸ್ಥೆಯಿಂದ ಮತ್ತೊಂದು ಆಕರ್ಷಕ ಸ್ಮಾರ್ಟ್ವಾಚ್ ಬಿಡುಗಡೆ! ವಿಶೇಷತೆ ಏನು?
- 34 min ago
ಅಗ್ಗದ ಬೆಲೆಗೆ ಬ್ರಾಡ್ಬ್ಯಾಂಡ್ ಕನೆಕ್ಷನ್ ಬೇಕೆ?..ಇದು ಬೆಸ್ಟ್ ಪ್ಲ್ಯಾನ್ ನೋಡಿ!
- 1 hr ago
ಭಾರತದಲ್ಲಿ ನಾಯ್ಸ್ಬಡ್ಸ್ ಕನೆಕ್ಟ್ ಲಾಂಚ್; ಅಗ್ಗದ ಬೆಲೆಯಲ್ಲಿ ಲಭ್ಯ!
- 2 hrs ago
ಭಾರತದಲ್ಲಿ ಸ್ಯಾಮ್ಸಂಗ್ನಿಂದ ಹೊಸ ಲ್ಯಾಪ್ಟಾಪ್ ಸರಣಿ ಬಿಡುಗಡೆ! ಬೆಲೆ ಎಷ್ಟು?
Don't Miss
- News
ಇಸ್ಲಾಂ, ಕ್ರಿಶ್ಚಿಯನ್ ಮತಾಂತರ: ಬಾಬಾ ರಾಮದೇವ್ ಗಂಭೀರ ಹೇಳಿಕೆ!
- Sports
ICC Women's T20 World Cup: ಭಾರತ vs ಪಾಕಿಸ್ತಾನ ಪಂದ್ಯ, ಪೂರ್ಣ ತಂಡಗಳು, ಲೈವ್ ಸ್ಟ್ರೀಮಿಂಗ್
- Finance
ಅಮುಲ್ ಹಾಲಿನ ದರ ಮತ್ತೆ 3 ರೂ ಏರಿಕೆ, ನೂತನ ದರ ಪರಿಶೀಲಿಸಿ
- Automobiles
ಭಾರತದಲ್ಲಿ ಬಿಡುಗಡೆಯಾಗಲಿವೆ ಹೋಂಡಾದ 3 ಕಾರುಗಳು: ಇವು ಬಂದ್ರೆ...!
- Movies
ಕೆಜಿಎಫ್ 2 ಕಲೆಕ್ಷನ್ನಲ್ಲಿ 400 ಕೋಟಿ ಏರಿಕೆ; 200 ಕೋಟಿ ಕ್ಲಬ್ ಸೇರಿದ ಜೇಮ್ಸ್, ವಿಕ್ರಾಂತ್ ರೋಣ! ಹೇಗೆ ಸಾಧ್ಯ?
- Lifestyle
Maha Shivratri 2023 : ಮಹಾಶಿವರಾತ್ರಿ ದಿನಾಂಕ, ಪೂಜಾ ಮುಹೂರ್ತ, ಮಹತ್ವ, ಆಚರಣೆ ಹಿನ್ನೆಲೆ ಏನು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ರಿಯಲ್‌ಮಿ 10 ಪ್ರೊ ಫೋನ್ ಪ್ರಿ-ಬುಕಿಂಗ್ ಮಾಡಿದ್ರೆ, ಈ ಮೊತ್ತದ ಡಿಸ್ಕೌಂಟ್ ಲಭ್ಯ!
ರಿಯಲ್‌ಮಿ ಸಂಸ್ಥೆಯ ನೂತನವಾಗಿ ಬಿಡುಗಡೆ ಮಾಡಿರುವ ರಿಯಲ್‌ಮಿ 10 ಪ್ರೊ (Realme 10 Pro Series) ಸ್ಮಾರ್ಟ್‌ಫೋನ್ ಸರಣಿಯು ರಿಯಲ್‌ಮಿ 10 ಪ್ರೊ ಮತ್ತು ರಿಯಲ್‌ಮಿ 10 ಪ್ರೊ ಪ್ಲಸ್ ಮಾದರಿಗಳನ್ನು ಒಳಗೊಂಡಿದೆ. ಇನ್ನು ರಿಯಲ್‌ಮಿ 10 ಪ್ರೊ ಅಥವಾ ರಿಯಲ್‌ಮಿ 10 ಪ್ರೊ ಪ್ಲಸ್ ಖರೀದಿಸುವ ಗ್ರಾಹಕರು ಫೋನ್‌ಗಾಗಿ ಪ್ರಿ-ಬುಕಿಂಗ್ ಮಾಡಿದರೆ, ಭರ್ಜರಿ ರಿಯಾಯಿತಿ ದೊರೆಯುತ್ತದೆ.

ಹೌದು, ಗ್ರಾಹಕರು ರಿಯಲ್‌ಮಿ 10 ಪ್ರೊ (Realme 10 Pro Series) ಸರಣಿ ಫೋನ್‌ಗಳಿಗೆ ಪ್ರಿ-ಬುಕಿಂಗ್ ಮಾಡಬಹುದಾಗಿದೆ. ಪ್ರಿ-ಬುಕಿಂಗ್ ಮಾಡುವ ಗ್ರಾಹಕರಿಗೆ 500ರೂ. ಗಳ ಡಿಸ್ಕೌಂಟ್ ಲಭ್ಯವಾಗಲಿದೆ. ಇದೇ 16, 2022 ರಂದು ರಿಯಲ್‌ಮಿ 10 ಪ್ರೊ 5G ಫೋನ್ ಫಸ್ಟ್ ಸೇಲ್ ಪ್ರಾರಂಭವಾಗಲಿದ್ದು, ರಿಯಲ್‌ಮಿ 10 ಪ್ರೊ+ 5G ಫೋನ್ ಇದೇ 14, 2022 ರಂದು ಶುರುವಾಗಲಿದೆ. ಹಾಗಾದರೆ ಈ ಎರಡು ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್
ರಿಯಲ್‌ಮಿ 10ಪ್ರೊ + 5G ಸ್ಮಾರ್ಟ್‌ಫೋನ್ 6.7 ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 2,160Hz PWM ಡಿಮ್ಮಿಂಗ್ ಹೊಂದಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೋರ್ಟ್ ಅನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 256GB ಇನ್‌ಬಿಲ್ಟ್ ಸ್ಟೋರೇಜ್ ಹೊಂದಿದೆ. ಇದಲ್ಲದೆ ಡೈನಾಮಿಕ್ RAM ವಿಸ್ತರಣೆ ಮೂಲಕ 16GB ವರೆಗೆ RAM ಅನ್ನು ವಿಸ್ತರಿಸಬಹುದಾಗಿದೆ.

ಇನ್ನು ರಿಯಲ್‌ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ 47 ನಿಮಿಷಗಳಲ್ಲಿ 100% ಚಾರ್ಜ್ ಮಾಡಬಹುದಾಗಿದೆ. ಇನ್ನು ಈ ಫೋನ್ ಡ್ಯುಯಲ್-ಬ್ಯಾಂಡ್ Wi-Fi ಬೆಂಬಲಿಸಲಿದ್ದು, ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಪಡೆದಿದೆ.

ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್
ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x 2,400ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 93.76 ಪ್ರತಿಶತ ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಈ ಫೋನ್ 6nm ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 128GB ಇನ್‌ಬಿಲ್ಟ್ ಸ್ಟೋರೇಜ್ ಪಡೆದುಕೊಂಡಿದೆ. ಇದಲ್ಲದೆ RAM ಅನ್ನು 16GB ವರೆಗೆ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ ಕೇವಲ 20 ನಿಮಿಷಗಳಲ್ಲಿ 50% ಚಾರ್ಜ್ ಮಾಡಬಹುದಾಗಿದೆ.

ಬೆಲೆ ಎಷ್ಟಿದೆ?
ರಿಯಲ್‌ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 24,999ರೂ.ಆಗಿದೆ. ಇದರ 8GB RAM + 128GB ಸ್ಟೋರೇಜ್ ಮಾದರಿಯ ಬೆಲೆ 25,999ರೂ. ಆಗಿದೆ. ಇನ್ನು 8GB RAM + 256GB ಸ್ಟೋರೇಜ್ ಮಾಡೆಲ್ ಆಯ್ಕೆಯ ಬೆಲೆ 27,999ರೂ. ಹೊಂದಿದೆ. ಇನ್ನು ರಿಯಲ್‌ಮಿ 10ಪ್ರೊ 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 6GB RAM + 128GB ಸ್ಟೋರೇಜ್ ಮಾದರಿಯ ಬೆಲೆ 18,999ರೂ.ಆಗಿದೆ. ಇದರ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 19,999ರೂ. ಆಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470