Home
ಸುದ್ದಿಜಾಲ

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಬಿಡುಗಡೆ! ಪ್ರೊಸೆಸರ್‌ ಯಾವುದು?

ಬಹುನಿರೀಕ್ಷಿತ ರಿಯಲ್‌ಮಿ 10 ಸರಣಿಯ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ರಿಯಲ್‌ಮಿ 10 ಸರಣಿಯಲ್ಲಿ ಇದೀಗ ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G99 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ ಒಟ್ಟು ಐದು ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಲಾಂಚ್‌ ಆಗಿದೆ. ಇದು 6.4 ಇಂಚಿನ ಸೂಪರ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದಿದ್ದು, ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಒಳಗೊಂಡಿದೆ.

ಪ್ರೊಸೆಸರ್‌ ಹೇಗಿದೆ?

ಪ್ರೊಸೆಸರ್‌ ಹೇಗಿದೆ?

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G99 ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ವರ್ಚುವಲ್ RAM ಅನ್ನು 8GB ವರೆಗೆ ಬೆಂಬಲಿಸುತ್ತದೆ. ಇದು 4GB RAM + 64GB, 4GB RAM + 128GB, 6GB RAM + 128GB, 8GB RAM + 128GB, 8GB RAM + 256GB, ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಡ್ಯುಯಲ್‌ ಕ್ಯಾಮೆರಾ

ಡ್ಯುಯಲ್‌ ಕ್ಯಾಮೆರಾ

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸ್ಟ್ರೀಟ್ ಫೋಟೋಗ್ರಫಿ 2.0, ಡಿಐಎಸ್ ಸ್ನ್ಯಾಪ್‌ಶಾಟ್, ಇನ್‌ಸ್ಟಂಟ್ ಫೋಕಸ್ ಮತ್ತು ಕ್ವಿಕ್ ಜೂಮ್ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವರೆಗೆ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು 28 ನಿಮಿಷಗಳಲ್ಲಿ 0 ರಿಂದ 50%ವರೆಗೆ ಚಾರ್ಜ್ ಮಾಡಬಹುದು ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌,ಯುಎಸ್‌ಬಿ ಸಿ ಪೋರ್ಟ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ 4GB RAM + 64GB ರೂಪಾಂತರದ ಆಯ್ಕೆಯ ಬೆಲೆ $229 (ಅಂದಾಜು 18,630ರೂ.) ಹೊಂದಿದೆ. ಇನ್ನು 4GB RAM + 128GB ಸ್ಟೋರೇಜ್‌ ಆಯ್ಕೆಯ ಬೆಲೆ $249 (ಅಂದಾಜು 20,257ರೂ.) ಹೊಂದಿದೆ. ಇದರ 6GB RAM + 128GB ಸ್ಟೋರೇಜ್‌ ಆಯ್ಕೆಯ ಬೆಲೆ $269 (ಅಂದಾಜು 21,884ರೂ) ಆಗಿದೆ. ಇನ್ನು 8GB RAM + 128GB ಸ್ಟೋರೇಜ್‌ ಆಯ್ಕೆಯ ಬೆಲೆ $279 (ಅಂದಾಜು 22,710ರೂ.) ಆಗಿದೆ. ಇದರ 8GB RAM + 256GB ಸ್ಟೋರೇಜ್‌ ಬೆಲೆ $299 (ಅಂದಾಜು 24,338ರೂ.) ಹೊಂದಿದೆ. ಈ ಫೋನ್‌ ಕ್ಲಾಷ್ ವೈಟ್ ಮತ್ತು ರಶ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Realme 10 With AMOLED Display Launched: Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+