Home
ಸುದ್ದಿಜಾಲ

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ರಿಯಲ್‌ಮಿ 10 ಸ್ಮಾರ್ಟ್‌ಫೋನ್‌! ಫೀಚರ್ಸ್‌ ನಿರೀಕ್ಷೆ ಏನು?

ರಿಯಲ್‌ಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆಯಿದೆ. ಭಾರತದ ಮಾರುಕಟ್ಟೆಯಲ್ಲಿ ಏರುಗತಿಯ ಬೆಳವಣಿಗೆ ಸಾಧಿಸುತ್ತಿರುವ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಲ್ಲಿ ರಿಯಲ್‌ಮಿ ಕಂಪೆನಿ ಕೂಡ ಒಂದಾಗಿದೆ. ಸದ್ಯ ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ಬಜೆಟ್‌ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ತಯಾರಿ ನಡೆಸಿದೆ. ಇದನ್ನು ರಿಯಲ್‌ಮಿ 10 ಎಂದು ಹೆಸರಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G99 SoC ಪ್ರೊಸೆಸರ್‌ ವೇಗವನ್ನು ಪಡೆದಿರಲಿದೆ ಎನ್ನಲಾಗಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ 4G ಫೋನ್‌ ಆಗಿರಲಿದ್ದು, 5G ಮಾಡೆಲ್‌ ಬರುವ ಬಗ್ಗೆ ಕಂಪೆನಿ ಯಾವುದೆ ಮಾಹಿತಿ ನೀಡಿಲ್ಲ. ಆದರೆ ರಿಯಲ್‌ಮಿ 10 ಸರಣಿಯಲ್ಲಿ ರಿಯಲ್‌ಮಿ 10 4G, ರಿಯಲ್‌ಮಿ 10 5G ಮತ್ತು ರಿಯಲ್‌ಮಿ 10 ಪ್ರೊ+ ಸ್ಮಾರ್ಟ್‌ಫೋನ್‌ಗಳು ಬರುವ ನಿರೀಕ್ಷೆಯಿದೆ. ಇನ್ನುಳಿದಂತೆ ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ

ಡಿಸ್‌ಪ್ಲೇ ವಿಶೇಷತೆ

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ 6.4 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ. ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 411 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರಲಿದೆ. ಇನ್ನು ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್‌ ಬೆಜೆಲ್-ಲೆಸ್ ಡಿಸ್‌ಪ್ಲೇ ಆಗಿದೆ. ಇದು 90 Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G99 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ಡಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 4G ಮಾದರಿಯ ಪ್ರೊಸೆಸರ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 128GB ಸ್ಟೋರೆಜ್‌ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಇನ್ನು ರಿಯಲ್‌ಮಿ 10 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಬರುವ ಸಾಧ್ಯತೆಯಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?

ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಆಯ್ಕೆಯಲ್ಲಿ ಬರಲಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಹೊಂದಿರುವ ನಿರೀಕ್ಷೆಯಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ. ಆದರೆ ಇದರ ರಿಯಲ್‌ಮಿ 10 ಪ್ರೊ+ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರುವ ಸಾಧ್ಯತೆಯಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌?

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರುತ್ತದೆ ಎಂದು ಹೇಳಲಾಗುತ್ತದೆ. ಇದು 33W ಫಾಸ್ಟ್ ಚಾರ್ಜರ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿರಲಿದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೊಮೀಟರ್, ಕಂಪಾಸ್, ಜಿರೋಸ್ಕೋಪ್ ಅನ್ನೊ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ 10 ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಕಲರ್‌ ಆಯ್ಕೆಗಳಲ್ಲಿ ಬರಲಿದೆ ಅನ್ನೊದು ಪಕ್ಕಾ ಆಗಿಲ್ಲ. ಈ ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ಭಾರತದಲ್ಲಿ ಲಾಂಚ್‌ ಆಗಲಿದ್ದು, ಹೆಚ್ಚಿನ ವಿವರಗಳು ಶೀಘ್ರದಲ್ಲೇ ಬಹಿರಂಗವಾಗಲಿದೆ.

Best Mobiles in India

English summary
Realme 10 With Mediatek Helio G99 SoC To Launch Soon In India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+