ರಿಯಲ್‌ಮಿಯ ಈ ಸ್ಟೈಲಿಶ್ ಫೋನಿಗೆ ಭರ್ಜರಿ ಡಿಸ್ಕೌಂಟ್!..ಗ್ರಾಹಕರಿಗೆ ಫುಲ್ ಖುಷಿ!
ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ನಲ್ಲಿ ಹಬ್ಬದ ಮಾರಾಟ ಪ್ರಾರಂಭವಾಗಿದೆ. ಈ ಮಾರಾಟದಲ್ಲಿ ಮೊಬೈಲ್, ಲ್ಯಾಪ್‌ಟಾಪ್, ಸ್ಮಾರ್ಟ್‌ವಾಚ್ ಸೇರಿದಂತೆ ಬಹುತೇಕ ವಸ್ತುಗಳು ಆಕರ್ಷಕ ಡಿಸ್ಕೌಂಟ್ ಪಡೆದಿವೆ. ಅವುಗಳಲ್ಲಿ ರಿಯಲ್‌ಮಿ ಕಂಪನಿಯ ರಿಯಲ್‌ಮಿ 11 5G ಮೊಬೈಲ್ ಸಹ ಗ್ರಾಹಕರು ಹಿಂತಿರುಗಿ ನೋಡುವಂತಹ ಬೆಲೆಯನ್ನು ಪಡೆದುಕೊಂಡಿದೆ.
ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ಹಬ್ಬದ ಮಾರಾಟದಲ್ಲಿ ರಿಯಲ್‌ಮಿ 11 5G ಫೋನ್ ಶೇ. 29% ರಷ್ಟು ಡಿಸ್ಕೌಂಟ್ ಪಡೆದಿದ್ದು, 17,748ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ 8 GB RAM + 128 GB ವೇರಿಯಂಟ್ ಫೋನ್ ಅನ್ನು ಗ್ರಾಹಕರು ಬ್ಯಾಂಕ್, ಎಕ್ಸ್‌ಚೇಂಜ್ ಹಾಗೂ ಇತರೆ ಆಫರ್ ಸೇರಿ ಮತ್ತಷ್ಟು ಡಿಸ್ಕೌಂಟ್ ದರದಲ್ಲಿ ಖರೀದಿ ಮಾಡಬಹುದಾಗಿದೆ.

ಅಂದಹಾಗೆ ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಪವರ್ ಪಡೆದಿದ್ದು, 8GB + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇದರ ಜೊತೆಗೆ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ ಸಹ ಪಡೆದಿದೆ. ಹಾಗಾದರೇ ರಿಯಲ್‌ಮಿ 11 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಮತ್ತು ಡಿಸೈನ್ ಮಾಹಿತಿ
ರಿಯಲ್‌ಮಿ 11 5G ಮೊಬೈಲ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.

ವೇಗದ ಪ್ರೊಸೆಸರ್ ಕಾರ್ಯ ವೈಖರಿ
ರಿಯಲ್‌ಮಿ ಕಂಪನಿಯ ಈ ಮೊಬೈಲ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13-ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸ್ಟೋರೇಜ್ ಸಾಮರ್ಥ್ಯವನ್ನು ವೃದ್ಧಿಸಬಹುದು. ಹಾಗೆಯೇ RAM ಅನ್ನು ವಿಸ್ತರಿಸಬಹುದಾಗಿದೆ.
ಟ್ರಿಪಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ
ರಿಯಲ್‌ಮಿ 11 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದರ ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ತೃತೀಯ ಕ್ಯಾಮೆರಾ ಸಹ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಎಷ್ಟಿದೆ
ರಿಯಲ್‌ಮಿ 11 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿದ್ದು, 67W ಸೂಪರ್‌ವೋಕ್ ಚಾರ್ಜಿಂಗ್ ಸಪೋರ್ಟ್ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್/ಡ್ಯುಯಲ್ ಸ್ಟ್ಯಾಂಡ್‌ಬೈ 5G ಕನೆಕ್ಟಿವಿಟಿ, 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ 5.2, NFC, GPS, A-GPS ಮತ್ತು USB ಟೈಪ್-ಸಿ ಪೋರ್ಟ್ ಆಯ್ಕೆಗಳನ್ನು ಇವೆ.
ಕಲರ್, ಮೆಮೊರಿ ಮತ್ತು ಲಭ್ಯತೆ
ರಿಯಲ್‌ಮಿ 11 5G ಮೊಬೈಲ್ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಇದು ಡಾನ್ ಗೋಲ್ಡ್ ಮತ್ತು ಮೂನ್ ನೈಟ್ ಡಾರ್ಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಗ್ರಾಹಕರು ಫ್ಲಿಪ್‌ಕಾರ್ಟ್ ತಾಣದ ಮೂಲಕ ಖರೀದಿಸಬಹುದು.


Click it and Unblock the Notifications