ರಿಯಲ್‌ಮಿಯ ಈ ಸ್ಟೈಲಿಶ್ 5G ಫೋನ್ ಬೆಲೆಯಲ್ಲಿ ಇಳಿಕೆ!..ನೇರ ಉಳಿತಾಯ!
ಪ್ರಮುಖ ಮೊಬೈಲ್ ಸಂಸ್ಥೆಗಳಲ್ಲಿ ಒಂದಾದ ರಿಯಲ್‌ಮಿ ಮೊಬೈಲ್ ಬಜೆಟ್ ದರದಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ರಿಯಲ್‌ಮಿ ಕಂಪನಿಯ ಜನಪ್ರಿಯ ಫೋನ್‌ಗಳ ಪೈಕಿ ರಿಯಲ್‌ಮಿ 11 5G ಫೋನ್ ಕೂಡಾ ಒಂದಿದ್ದು, ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತಾಣದಲ್ಲಿ ರಿಯಲ್‌ಮಿ 11X 5G ಮೊಬೈಲ್ ಶೇ. 23% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಆಫರ್‌ನಲ್ಲಿ ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ 15,999ರೂ. ಗಳ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಕೆಲವು ಬ್ಯಾಂಕ್ ಕೊಡುಗೆಗಳು ಹಾಗೂ ಇತರೆ ರಿಯಾಯಿತಿಗಳು ಸಹ ದೊರೆಯುತ್ತವೆ.

ಇನ್ನು ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಸೌಲಭ್ಯ ಪಡೆದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇದೆ. ಹಾಗಾದರೇ ರಿಯಲ್‌ಮಿ 11 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 11 5G ಮೊಬೈಲ್ - ಫೀಚರ್ಸ್
ರಿಯಲ್‌ಮಿ 11 ಮೊಬೈಲ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.
ರಿಯಲ್‌ಮಿ 11 ಮೊಬೈಲ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256 GB ಸ್ಟೋರೇಜ್ ಅನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಜೊತೆಗೆ ಬಳಕೆಯಾಗದ ಸಂಗ್ರಹಣೆಯನ್ನು ಬಳಸಿಕೊಂಡು ವರ್ಚುವಲ್ ಆಗಿ RAM ಅನ್ನು ವಿಸ್ತರಿಸಬಹುದಾಗಿದೆ.
ರಿಯಲ್‌ಮಿ 11 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ತೃತೀಯ ಕ್ಯಾಮೆರಾ ಸಹ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಹೊಂದಿದೆ.
ರಿಯಲ್‌ಮಿ 11 ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 67W ಸೂಪರ್‌ವೋಕ್ ಚಾರ್ಜಿಂಗ್ ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್/ಡ್ಯುಯಲ್ ಸ್ಟ್ಯಾಂಡ್‌ಬೈ 5G ಕನೆಕ್ಟಿವಿಟಿ, 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ 5.2, NFC, GPS, A-GPS ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ. ಇದಲ್ಲದೆ ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಗೈರೊಸ್ಕೋಪ್, ಅಕ್ಸೆಲೆರೊಮೀಟರ್ ಮತ್ತು ಇ-ದಿಕ್ಸೂಚಿಗಳನ್ನು ಪಡೆದಿದೆ.


Click it and Unblock the Notifications








