ಇಂದಿನಿಂದ ರಿಯಲ್‌ಮಿ 11 ಪ್ರೊ + 5G ಖರೀದಿಗೆ ಲಭ್ಯ!..200ಎಂಪಿ ಕ್ಯಾಮೆರಾ!
ರಿಯಲ್‌ಮಿ ಕಂಪೆನಿಯು ಭಾರತದಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ರಿಯಲ್‌ಮಿ 11 ಪ್ರೊ+ 5G ಸ್ಮಾರ್ಟ್‌ಫೋನ್ ಈಗಾಗಲೇ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಇಂದು ಇಂದು (ಜೂ. 15) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ.ಕಾಮ್ ತಾಣಗಳ ಮೂಲಕ ಮಾರಾಟ ಪ್ರಾರಂಭಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ.
ಹೌದು, ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ 11 ಪ್ರೊ+ 5G ಫೋನ್ ಇಂದು ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಹಾಗೂ ಪ್ರಮುಖ ರಿಟೇಲ್ ಸ್ಟೋರ್‌ಗಳಲ್ಲಿ ಮಾರಾಟ ಪ್ರಾರಂಭಿಸಿದ್ದು, ಆಸಕ್ತ ಗ್ರಾಹಕರು ಖರೀದಿಸಬಹುದಾಗಿದೆ. ಈ ಫೋನ್ 200 ಮೆಗಾ ಪಿಕ್ಸಲ್ ಕ್ಯಾಮೆರಾ ರಚನೆಯನ್ನು ಹೊಂದಿರುವುದು ಪ್ರಮುಖ ಹೈಲೈಟ್ಸ್‌ಗಳಲ್ಲಿ ಒಂದಾಗಿದೆ. ಜೊತೆಗೆ 100W SuperVOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.

ಈ ಫೋನ್ 8GB + 256 GB ಮತ್ತು 12GB + 256 GB ಸ್ಟೋರೇಜ್‌ನ ಆಯ್ಕೆಗಳನ್ನು ಪಡೆದಿದ್ದು, ಹಾಗೆಯೇ ಇದು 5000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಅಲ್ಲದೇ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಇದು ಪಡೆದಿದೆ. ಇನ್ನುಳಿದಂತೆ ರಿಯಲ್‌ಮಿ 11 ಪ್ರೊ+ 5G ಫೋನಿನ ಇತರೆ ಫೀಚರ್ಸ್ ಹಾಗೂ ಬೆಲೆಯ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ 11 ಪ್ರೊ+ 5G ಫೀಚರ್ಸ್ : ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕಾರ್ಯನಿರ್ವಹಿಸಲಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ HP3 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 100W SuperVOOC ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ ಫೀಚರ್ಸ್ : ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕಾರ್ಯನಿರ್ವಹಿಸಲಿದೆ.
ಈ ಸ್ಮಾರ್ಟ್‌ಫೋನ್ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
ಬೆಲೆ ಮತ್ತು ಲಭ್ಯತೆ : ರಿಯಲ್‌ಮಿ 11 ಪ್ರೊ + 5G ಸ್ಮಾರ್ಟ್‌ಫೋನ್ 8GB + 256GB ವೇರಿಯಂಟ್ ಆಯ್ಕೆಯು 27,999ರೂ. ಬೆಲೆಯನ್ನು ಹೊಂದಿದೆ. ಇದರ ಹೈ-ಎಂಡ್ ವೇರಿಯಂಟ್ ಮಾದರಿ 12GB + 256 GB ಆಯ್ಕೆಯು 29,999ರೂ.ಬೆಲೆಯನ್ನು ಪಡೆದುಕೊಂಡಿದೆ.


Click it and Unblock the Notifications








