ರಿಯಲ್‌ಮಿ 11 ಪ್ರೊ 5G ಸರಣಿ ಪ್ರಿ-ಆರ್ಡರ್‌ಗೆ ಲಭ್ಯ!..ಜಬರ್ದಸ್ತ್ ಕ್ಯಾಮೆರಾ!
ರಿಯಲ್‌ಮಿ ಸಂಸ್ಥೆಯು ಇತ್ತೀಗಷ್ಟೆ ಭಾರತದಲ್ಲಿ ಬಿಡುಗಡೆ ಮಾಡಿರುವ ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ ಸರಣಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ ಸರಣಿ ಪ್ರಿ-ಆರ್ಡರ್‌ಗೆ ಅವಕಾಶ ಇದ್ದು, ಗ್ರಾಹಕರು ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಮೂಲಕ ಪ್ರಿ-ಆರ್ಡರ್ ಮಾಡಬಹುದಾಗಿದೆ.
ಹೌದು, ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ ಸರಣಿಯು ರಿಯಲ್‌ಮಿ 11 ಪ್ರೊ 5G ಮತ್ತು ರಿಯಲ್‌ಮಿ 11 ಪ್ರೊ ಪ್ಲಸ್ 5G ಮಾಡೆಲ್ ಫೋನ್‌ಗಳನ್ನು ಒಳಗೊಂಡಿದೆ. ಇನ್ನು ಈ ಸರಣಿಯ ಆರಂಭಿಕ ಬೆಲೆಯು 23,999ರೂ. ಆಗಿದೆ. ಈ ಎರಡು ಫೋನ್‌ಗಳ ಕ್ಯಾಮೆರಾ ಆಯ್ಕೆ ಪ್ರಮುಖ ಪ್ಲಸ್ ಪಾಯಿಂಟ್ ಆಗಿ ಕಾಣಿಸಿಕೊಂಡಿದೆ. ಹಾಗಾದರೆ ಈ ಎರಡು ಫೋನ್‌ಗಳ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 11 ಪ್ರೊ 5G ಫೀಚರ್ಸ್:
ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕಾರ್ಯನಿರ್ವಹಿಸಲಿದೆ.
ಈ ಸ್ಮಾರ್ಟ್‌ಫೋನ್ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
ರಿಯಲ್‌ಮಿ 11 ಪ್ರೊ ಪ್ಲಸ್ 5G ಫೀಚರ್ಸ್:
ರಿಯಲ್‌ಮಿ 11 ಪ್ರೊ ಪ್ಲಸ್ 5G ಸ್ಮಾರ್ಟ್‌ಫೋನ್ ಕೂಡ ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕಾರ್ಯನಿರ್ವಹಿಸಲಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HP3 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 100W SuperVOOC ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಬೆಲೆ ಮತ್ತು ಲಭ್ಯತೆ:
ಭಾರತದಲ್ಲಿ ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ 8GB + 128GB ರೂಪಾಂತರದ ಆಯ್ಕೆಯು 23,999ರೂ. ಬೆಲೆ ಹೊಂದಿದೆ. ಇದರ 8GB + 256GB ಆಯ್ಕೆಯು 24,999 ರೂ. ಹಾಗೂ 12GB + 256GB ಆಯ್ಕೆಯು 27,999ರೂ. ಬೆಲೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ ಫೋನ್ ಜೂನ್ 16 ರಂದು ಅಮೆಜಾನ್, ರಿಯಲ್‌ಮಿ ವೆಬ್‌ಸೈಟ್ ಹಾಗೂ ಆಯ್ದ ರಿಟೇಲ್ ಸ್ಟೋರ್‌ಗಳ ಮೂಲಕ ಮಾರಾಟಕ್ಕೆ ಬರಲಿದೆ.
ಇನ್ನು ರಿಯಲ್‌ಮಿ 11ಪ್ರೊ + 5G ಸ್ಮಾರ್ಟ್‌ಫೋನ್ 8GB + 256GB ಆಯ್ಕೆಯು 27,999ರೂ. ಬೆಲೆಯನ್ನು ಹೊಂದಿದೆ. ಇದರ ಹೈ-ಎಂಡ್ ಮಾದರಿ 12GB + 256GB ಆಯ್ಕೆಯು 29,999ರೂ.ಬೆಲೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಇದೇ ಜೂನ್ 15 ರಂದು ಮಾರಾಟಕ್ಕೆ ಬರಲಿದೆ ಲಭ್ಯವಿರುತ್ತದೆ.


Click it and Unblock the Notifications








