Home
ಸುದ್ದಿಜಾಲ

ಬಹುನಿರೀಕ್ಷಿತ ರಿಯಲ್‌ಮಿ 11 ಪ್ರೊ 5G ಸರಣಿ ಲಾಂಚ್‌! ಕ್ಯಾಮೆರಾ ಅಂತೂ ಅದ್ಬುತ!

ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದ್ದ ರಿಯಲ್‌ಮಿ 11 ಪ್ರೊ 5G (Realme 11 Pro 5G) ಸರಣಿ ಲಾಂಚ್‌ ಮಾಡಿದೆ. ಈ ಸರಣಿಯು ರಿಯಲ್‌ಮಿ 11 ಪ್ರೊ 5G ಮತ್ತು ರಿಯಲ್‌ಮಿ 11 ಪ್ರೊ ಪ್ಲಸ್‌ 5G ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ಗಳು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ.

ಹೌದು, ಭಾರತದಲ್ಲಿ ರಿಯಲ್‌ಮಿ 11 ಪ್ರೊ 5G ಸರಣಿ ಬಿಡುಗಡೆಯಾಗಿದೆ. ಇದರಲ್ಲಿ ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಆದರೆ ರಿಯಲ್‌ಮಿ 11 ಪ್ರೊ ಪ್ಲಸ್‌ 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವೆಲ್ಲಾ ಫೀಚರ್ಸ್‌ಗಳನ್ನು ನೀಡಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಹುನಿರೀಕ್ಷಿತ ರಿಯಲ್‌ಮಿ 11 ಪ್ರೊ 5G ಸರಣಿ ಲಾಂಚ್‌! ಕ್ಯಾಮೆರಾ ಅಂತೂ ಅದ್ಬುತ!

ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್‌ ಫೀಚರ್ಸ್‌ ಹೇಗಿದೆ?

ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 360Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕಾರ್ಯನಿರ್ವಹಿಸಲಿದೆ.

ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100-ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ಬಹುನಿರೀಕ್ಷಿತ ರಿಯಲ್‌ಮಿ 11 ಪ್ರೊ 5G ಸರಣಿ ಲಾಂಚ್‌! ಕ್ಯಾಮೆರಾ ಅಂತೂ ಅದ್ಬುತ!

ರಿಯಲ್‌ಮಿ 11 ಪ್ರೊ ಪ್ಲಸ್‌ 5G ಫೀಚರ್ಸ್‌ ಹೇಗಿದೆ?

ರಿಯಲ್‌ಮಿ 11 ಪ್ರೊ ಪ್ಲಸ್‌ 5G ಸ್ಮಾರ್ಟ್‌ಫೋನ್‌ ಕೂಡ ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕಾರ್ಯನಿರ್ವಹಿಸಲಿದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ HP3 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 100W SuperVOOC ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಬಹುನಿರೀಕ್ಷಿತ ರಿಯಲ್‌ಮಿ 11 ಪ್ರೊ 5G ಸರಣಿ ಲಾಂಚ್‌! ಕ್ಯಾಮೆರಾ ಅಂತೂ ಅದ್ಬುತ!

ಭಾರತದಲ್ಲಿ ರಿಯಲ್‌ಮಿ 11 ಪ್ರೊ 5G ಸರಣಿ ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್‌ 8GB + 128GB ರೂಪಾಂತರದ ಆಯ್ಕೆಯು 23,999ರೂ.ಬೆಲೆ ಹೊಂದಿದೆ. ಇದರ 8GB + 256GB ಆಯ್ಕೆಯು 24,999 ರೂ. ಹಾಗೂ 12GB + 256GB ಆಯ್ಕೆಯು 27,999ರೂ. ಬೆಲೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಫೋನ್ ಜೂನ್ 16 ರಂದು ಅಮೆಜಾನ್‌, ರಿಯಲ್‌ಮಿ ವೆಬ್‌ಸೈಟ್‌ ಹಾಗೂ ಆಯ್ದ ರಿಟೇಲ್‌ ಸ್ಟೋರ್‌ಗಳ ಮೂಲಕ ಮಾರಾಟಕ್ಕೆ ಬರಲಿದೆ.

ಇನ್ನು ರಿಯಲ್‌ಮಿ 11ಪ್ರೊ + 5G ಸ್ಮಾರ್ಟ್‌ಫೋನ್‌ 8GB + 256GB ಆಯ್ಕೆಯು 27,999ರೂ. ಬೆಲೆಯನ್ನು ಹೊಂದಿದೆ. ಇದರ ಹೈ-ಎಂಡ್ ಮಾದರಿ 12GB + 256GB ಆಯ್ಕೆಯು 29,999ರೂ.ಬೆಲೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಇದೇ ಜೂನ್ 15 ರಂದು ಮಾರಾಟಕ್ಕೆ ಬರಲಿದೆ ಲಭ್ಯವಿರುತ್ತದೆ.

Best Mobiles in India

English summary
Realme 11 Pro 5G Series Launched in India: Price and Specifications details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+