ಭಾರತದಲ್ಲಿ ದಾಖಲೆ ಬರೆದ ರಿಯಲ್‌ಮಿ.. ಮೂರು ತಿಂಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಫೋನ್ ಸೇಲ್!
ರಿಯಲ್‌ಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್ ಇದೆ. ಇದಕ್ಕೆ ಸಾಕ್ಷಿಯೆಂಬತೆ ರಿಯಲ್‌ಮಿ ಕಂಪೆನಿ ಇತ್ತೀಚಿಗೆ ಪರಿಚಯಿಸಿದ್ದ ರಿಯಲ್‌ಮಿ 11 ಪ್ರೊ 5G ಭಾರತದಲ್ಲಿ ಹೊಸ ದಾಖಲೆ ಮಾಡಿದೆ. ಬಿಡುಗಡೆಯಾದ 3 ತಿಂಗಳಿನಲ್ಲಿಯೇ 10 ಲಕ್ಷಕ್ಕೂ ಹೆಚ್ಚು ಫೋನ್ ಸೇಲ್ ಆಗುವ ಮೂಲಕ ದಾಖಲೆ ಬರೆದಿದೆ.
ಹೌದು, ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ ಸರಣಿ ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ. ಭಾರಿ ಪ್ರಮಾಣದಲ್ಲಿ ಸೇಲ್ ಆಗುವ ಮೂಲಕ ಹೊಸ ಇತಿಹಾಸವನ್ನು ಬರೆದಿದೆ. ಇದರಲ್ಲಿ ಕೇವಲ 26 ನಿಮಿಷಗಳಲ್ಲಿ 100% ಚಾರ್ಚ್ ಸಾಮರ್ಥ್ಯದ ಸ್ಮಾರ್ಟ್‌ಫೋನ್ ಕೂಡ ಸೇರಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಸಹ ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಸರಣಿ ಹೆಚ್ಚಿನ ಪ್ರಮಾಣದಲ್ಲಿ ಡಿಮ್ಯಾಂಡ್ ಕ್ರಿಯೆಟ್ ಕಾರಣವಾಗಿರುವ ಅಂಶಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ 11 ಪ್ರೊ 5G ಸರಣಿ ಡಿಮ್ಯಾಂಡ್ ಕ್ರಿಯೆಟ್ ಮಾಡಲು ಕಾರಣವೇನು?
ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ ಸರಣಿಯು ಅತ್ಯಾಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಈ ಸರಣಿಯಲ್ಲಿ ವಿಶ್ವದ ಮೊದಲ 200 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಫೋನ್ ಕೂಡ ಇದೆ. ಜೊತೆಗೆ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS), ಸೂಪರ್‌ಜೂಮ್ Samsung ISOCELL HP3 ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಾಗಿ 32MP ಕ್ಯಾಮೆರಾವನ್ನು ನೀಡಲಾಗಿದೆ. ಇದರೊಂದಿಗೆ 2X ಪೋರ್ಟ್ ರೇಟ್ ಮೋಡ್ ಮತ್ತು ಆಟೋ-ಜೂಮ್ ಟೆಕ್ನಾಲಜಿಯನ್ನು ಹೊಂದಿದೆ. ಇದು ರಿಯಲ್‌ಮಿ 11 ಪ್ರೊ 5G ಸರಣಿ ಮೇಲೆ ಡಿಮ್ಯಾಂಡ್ ಸೃಷ್ಟಿಯಾಗುವುದಕ್ಕೆ ಕಾರಣ ಎನ್ನಲಾಗಿದೆ.
ರಿಯಲ್‌ಮಿ 11 ಪ್ರೊ 5G ಫೀಚರ್ಸ್ ಹೇಗಿದೆ?
ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.
ಇನ್ನು ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
ರಿಯಲ್‌ಮಿ 11 ಪ್ರೊ 5G ಪ್ಲಸ್ ಫೀಚರ್ಸ್ ಹೇಗಿದೆ?
ರಿಯಲ್‌ಮಿ 11 ಪ್ರೊ ಪ್ಲಸ್ 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HP3 ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಜೊತೆಗೆ 100W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ರಿಯಲ್‌ಮಿ 11 ಪ್ರೊ 5G ಸರಣಿ ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಯು 23,999ರೂ. ಬೆಲೆ ಹೊಂದಿದೆ. ಇದರ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯು 24,999ರೂ. ಬೆಲೆ ಹೊಂದಿದೆ. ಇದರ ಹೈ-ಎಂಡ್ ವೆರಿಯಂಟ್ 12GB RAM + 256GB ಸ್ಟೋರೇಜ್ ಮಾಡೆಲ್ ಬೆಲೆ 27,999ರೂ ಆಗಿದೆ.
ರಿಯಲ್‌ಮಿ 11ಪ್ರೊ + 5G ಸ್ಮಾರ್ಟ್‌ಫೋನ್ 8GB + 256GB ಸ್ಟೋರೇಜ್ ಆಯ್ಕೆಯು 27,999ರೂ. ಬೆಲೆಯನ್ನು ಹೊಂದಿದೆ. ಇದರ ಹೈ-ಎಂಡ್ ಮಾದರಿ 12GB + 256GB ಆಯ್ಕೆಯು 29,999ರೂ.ಬೆಲೆಯನ್ನು ಪಡೆದುಕೊಂಡಿದೆ.


Click it and Unblock the Notifications








