Home
ಸುದ್ದಿಜಾಲ

ಸದ್ಯದಲ್ಲೇ ಎಂಟ್ರಿ ನೀಡಲಿದೆ 200MP ಸೆನ್ಸಾರ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌!

ರಿಯಲ್‌ಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಇದಕ್ಕೆ ಅನುಗುಣವಾಗಿ ರಿಯಲ್‌ಮಿ ಕಂಪೆನಿ ಕೂಡ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ಭಾರತದಲ್ಲಿ ರಿಯಲ್‌ಮಿ 11 ಪ್ರೊ 5G ಸರಣಿ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ.

ಹೌದು, ರಿಯಲ್‌ಮಿ 11 ಪ್ರೊ 5G ಸರಣಿಯು ಜೂನ್‌ನಲ್ಲಿ ಭಾರತಕ್ಕೆ ಎಂಟ್ರಿ ನೀಡೋದು ಪಕ್ಕಾ ಆಗಿದೆ. ಈ ಸರಣಿಯಲ್ಲಿ ರಿಯಲ್‌ಮಿ 11 ಪ್ರೊ ಮತ್ತು ರಿಯಲ್‌ಮಿ 11 ಪ್ರೊ+ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗಲಿವೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕೂಡ ಮೀಡಿಯಾಟೆಕ್‌ ಡೈಮೆನ್ಸಿಟಿ 7050 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವೆಲ್ಲಾ ಫೀಚರ್ಸ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸದ್ಯದಲ್ಲೇ ಎಂಟ್ರಿ ನೀಡಲಿದೆ 200MP ಸೆನ್ಸಾರ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌!

ರಿಯಲ್‌ಮಿ 11 ಪ್ರೊ 5G ಸರಣಿ ಫೀಚರ್ಸ್‌ ಹೇಗಿರಲಿದೆ: ರಿಯಲ್‌ಮಿ 11 ಪ್ರೊ 5G ಸರಣಿ ಸ್ಮಾರ್ಟ್‌ಫೋನ್‌ಗಳು 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಜೊತೆಗೆ ಡಿಸ್‌ಪ್ಲೇ 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸಲಿದೆ.

ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರಲ್ಲಿ ರಿಯಲ್‌ಮಿ 11 ಪ್ರೊ ಸ್ಮಾರ್ಟ್‌ಫೋನ್‌ 8GB RAM + 128GB, 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ಕಾನ್ಫಿಗರೇಶನ್‌ಗಳಲ್ಲಿ ಬರಲಿದೆ. ಆದರೆ ರಿಯಲ್‌ಮಿ 11 ಪ್ರೊ ಪ್ಲಸ್‌ 8GB RAM + 256GB ಸಂಗ್ರಹಣೆ ಮತ್ತು 12GB RAM + 256GB ಸ್ಟೋರೇಜ್ ಆಯ್ಕೆಗಳಲ್ಲಿ ಬರಲಿದೆ.

ಸದ್ಯದಲ್ಲೇ ಎಂಟ್ರಿ ನೀಡಲಿದೆ 200MP ಸೆನ್ಸಾರ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌!

ಇನ್ನು ರಿಯಲ್‌ಮಿ 11 ಪ್ರೊ ಸ್ಮಾರ್ಟ್‌ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ. ಆದರೆ ರಿಯಲ್‌ಮಿ 11 ಪ್ರೊ+ ಸ್ಮಾರ್ಟ್‌ಫೋನ್‌ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಮುಖ್ಯ ಕ್ಯಾಮೆರಾ ಒಳಗೊಂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ.

ಈ ಸರಣಿ ಸ್ಮಾರ್ಟ್‌ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿವೆ. ಆದರೆ ರಿಯಲ್‌ಮಿ 11 ಪ್ರೊ 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ರಿಯಲ್‌ಮಿ 11 ಪ್ರೊ+ ಸ್ಮಾರ್ಟ್‌ಫೋನ್‌ 100W ಚಾರ್ಜಿಂಗ್ ಬೆಂಬಲವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಆಸ್ಟ್ರಲ್ ಬ್ಲಾಕ್, ಸನ್‌ರೈಸ್ ಬೀಜ್ ಮತ್ತು ಓಯಸಿಸ್ ಗ್ರೀನ್ ಶೇಡ್‌ಗಳಲ್ಲಿ ಬರಬಹುದು. ಇವುಗಳ ಬೆಲೆ ಮತ್ತು ಲಭ್ಯತೆ ವಿವರ ಶೀಘ್ರದಲ್ಲೇ ಬಹಿರಂಗವಾಗುವಗ ಸಾಧ್ಯತೆಯಿದೆ.

ಸದ್ಯದಲ್ಲೇ ಎಂಟ್ರಿ ನೀಡಲಿದೆ 200MP ಸೆನ್ಸಾರ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌!

ಇನ್ನು ಇತ್ತೀಚಿಗೆ ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ 6.72 ಇಂಚಿನ IPS LCD ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಮಿನಿ ಕ್ಯಾಪ್ಸುಲ್‌ ಫೀಚರ್ಸ್‌ ಅನ್ನು ಹೊಂದಿದ್ದು, "ಡಿಸ್ಪ್ಲೇಯನ್ನು ಮನಬಂದಂತೆ ಸೆಟ್‌ ಮಾಡಲು ಅವಕಾಶ ನೀಡಲಿದೆ. ಜೊತೆಗೆ ಕ್ಯಾಮರಾ ಪಂಚ್-ಹೋಲ್ ಕಟೌಟ್ ಸುತ್ತಲೂ ಸುತ್ತುತ್ತದೆ. ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ Realme UI ಔಟ್-ಆಫ್-ದಿ-ಬಾಕ್ಸ್ ನಲ್ಲಿ ರನ್‌ ಆಗಲಿದೆ. ಹಾಗೆಯೇ 4GB + 64GB ಮತ್ತು 6GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Realme 11 Pro 5G Series With 200MP main camera launch in india soon!
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+