ಈ ರಿಯಲ್‌ಮಿ ಮೊಬೈಲ್‌ಗೆ ಈಗ ಭರ್ಜರಿ ಡಿಸ್ಕೌಂಟ್!..ಉಳಿತಾಯ ಪಕ್ಕಾ!
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದಾದ ರಿಯಲ್‌ಮಿ ಸಂಸ್ಥೆಯು ಬಜೆಟ್ ಬೆಲೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಸಂಸ್ಥೆಯ ಜನಪ್ರಿಯ ಫೋನ್‌ಗಳ ಪೈಕಿ ರಿಯಲ್‌ಮಿ 11X 5G ಮೊಬೈಲ್ ಕೂಡಾ ಸೇರ್ಪಡೆ ಆಗಿದ್ದು, ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತಾಣದಲ್ಲಿ ರಿಯಲ್‌ಮಿ 11X 5G ಮೊಬೈಲ್ ಶೇ. 11% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಆಫರ್‌ನಲ್ಲಿ ಈ ಫೋನಿನ 6 GB RAM + 128 GB ಸ್ಟೋರೇಜ್ ವೇರಿಯಂಟ್ 14,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಕೆಲವು ಬ್ಯಾಂಕ್ ಕೊಡುಗೆಗಳು ಹಾಗೂ ಇತರೆ ರಿಯಾಯಿತಿಗಳು ಕೂಡಾ ಲಭ್ಯ ಆಗಲಿವೆ.

ಇನ್ನು ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಪ್ರೊಸೆಸರ್ ಸೌಲಭ್ಯ ಪಡೆದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ಎರಡು ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಬ್ಯ. ಹಾಗಾದರೇ ರಿಯಲ್‌ಮಿ 11X 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ 11X 5G ಮೊಬೈಲ್ - ಫೀಚರ್ಸ್
ರಿಯಲ್‌ಮಿ 11X 5G ಮೊಬೈಲ್ 6.72 ಇಂಚಿನ IPS LCD ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಹಾಗೆಯೇ ತನ್ನ ವರ್ಗದಲ್ಲೇ ಉತ್ತಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಈ ಮೊಬೈಲ್‌ನ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಸಪೋರ್ಟ್ ಮಾಡುತ್ತದೆ.

ರಿಯಲ್‌ಮಿ 11X 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಇದು 6 GB RAM ಮತ್ತು 128 GB ಹಾಗೂ 6 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗೆಯೇ 2TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಇದೆ.
ರಿಯಲ್‌ಮಿ ಕಂಪನಿಯ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಪೋರ್ಟ್ರೇಟ್ ಲೆನ್ಸ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಮುಂಭಾಗದಲ್ಲಿ 8 ಮೆಗಾ ಪಿಕ್ಸಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ರಿಯಲ್‌ಮಿ 11X 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಈ ಫೋನ್ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 33W ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಅನ್ನು ಕೂಡಾ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ 5G, 4G, ವೈ ಫೈ, ಬ್ಲೂಟೂತ್ ಸೇರಿದಂತೆ ಇತರೆ ಅಗತ್ಯ ಆಯ್ಕೆಗಳನ್ನು ಕೂಡಾ ಪಡೆದುಕೊಂಡಿದೆ.
ರಿಯಲ್‌ಮಿ 11X 5G ಮೊಬೈಲ್ 6 GB RAM ಮತ್ತು 128 GB ಹಾಗೂ 6 GB RAM ಮತ್ತು 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ರಿಯಲ್‌ಮಿ ಸಂಸ್ಥೆಯ ಈ ಫೋನ್ ಮೀಡ್‌ನೈಟ್ ಬ್ಲ್ಯಾಕ್ ಹಾಗೂ ಪರ್ಪಲ್ Dawn ಕಲರ್ ಆಯ್ಕೆಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದಾಗಿದೆ. ಫ್ಲಿಪ್‌ಕಾರ್ಟ್ ತಾಣದಲ್ಲಿ ಖರೀದಿಗೆ ಲಭ್ಯ.


Click it and Unblock the Notifications








