Home
ಸುದ್ದಿಜಾಲ

ಇಂದು ರಿಯಲ್‌ಮಿ 11X 5G ಫಸ್ಟ್‌ ಸೇಲ್‌; ಆಫರ್‌ ತಿಳಿದ್ರೆ ವಾರೆವ್ಹಾ ಅಂತೀರಾ!

ರಿಯಲ್‌ಮಿ ಮೊಬೈಲ್ ಕಂಪನಿಯು ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿರುವ ರಿಯಲ್‌ಮಿ 11X 5G (Realme 11X 5G) ಸ್ಮಾರ್ಟ್‌ಫೋನ್‌ ಬಜೆಟ್‌ ಮಾದರಿಯಲ್ಲಿ ಗ್ರಾಹಕರನ್ನು ಸೆಳೆದಿದೆ. ಈ ಮೊಬೈಲ್‌ ಇಂದು (ಅ. 30 ರಂದು) ಇ ಕಾಮರ್ಸ್‌ ದೈತ್ಯ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಮೊದಲ ಸೇಲ್ ಪ್ರಾರಂಭಿಸಲಿದೆ.

ಹೌದು, ರಿಯಲ್‌ಮಿ 11X 5G ಫೋನ್‌ ಇಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಪ್ರೊಸೆಸರ್‌ ಪವರ್‌ ಪಡೆದಿದ್ದು, ಇದರ ಜೊತೆಗೆ 5,000mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವುದು ಪ್ಲಸ್‌ ಪಾಯಿಂಟ್‌ಗಳಲ್ಲಿ ಒಂದಾಗಿದೆ.

ಇಂದು ರಿಯಲ್‌ಮಿ 11X 5G ಫಸ್ಟ್‌ ಸೇಲ್‌; ಆಫರ್‌ ತಿಳಿದ್ರೆ ವಾರೆವ್ಹಾ ಅಂತೀರಾ!

ಹಾಗೆಯೇ ರಿಯಲ್‌ಮಿ 11X 5G ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಅಂದಹಾಗೆ 6GB + 128GB ವೇರಿಯಂಟ್‌ ಬೆಲೆಯು 14,999ರೂ, ಆಗಿದೆ ಹಾಗೂ 8GB + 128GB ವೇರಿಯಂಟ್‌ ಬೆಲೆಯು 15,999ರೂ. ಆಗಿದೆ. ಹಾಗಾದರೆ ರಿಯಲ್‌ಮಿ 11X 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 11X 5G ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ : ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್‌ ಸಹ 6.72 ಇಂಚಿನ IPS LCD ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಫೋನಿನ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಸಪೋರ್ಟ್‌ ಮಾಡುತ್ತದೆ.

ರಿಯಲ್‌ಮಿ 11X 5G ಪ್ರೊಸೆಸರ್‌ ಕಾರ್ಯ ವೈಖರಿ ಮಾಹಿತಿ : ರಿಯಲ್‌ಮಿ 11X 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ ಇಸು 6GB RAM ಮತ್ತು 128GB ಹಾಗೂ 6GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯ..

ರಿಯಲ್‌ಮಿ 11X 5G ಕ್ಯಾಮೆರಾ ಸೆನ್ಸಾರ್ ಮಾಹಿತಿ : ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸಲ್‌ ಸೆನ್ಸಾರ್‌, ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಪೋರ್ಟ್ರೇಟ್ ಲೆನ್ಸ್‌ ಪಡೆದುಕೊಂಡಿದೆ. ಇದರ ಜೊತೆಗೆ 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ರಿಯಲ್‌ಮಿ 11X 5G ಬ್ಯಾಟರಿ ಬ್ಯಾಕ್‌ಅಪ್‌ : ರಿಯಲ್‌ಮಿ 11X 5G ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 33W ಸೂಪರ್‌ವೂಕ್‌ ವೇಗದ ಚಾರ್ಜಿಂಗ್ ಅನ್ನು ಕೂಡಾ ಸಪೋರ್ಟ್‌ ಮಾಡುತ್ತದೆ.

ಆಫರ್‌ ಏನು :
ರಿಯಲ್‌ಮಿ 11X 5G ಫೋನ್‌ ಅನ್ನು ನೀವು ಹೆಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಎಸ್‌ಬಿಐ ಕಾರ್ಡ್ ಮೂಲಕ ಖರೀದಿಸಿದರೆ ಸಂಸ್ಥೆಯು ಫ್ಲಾಟ್ 1000ರೂ. ರಿಯಾಯಿತಿಯನ್ನು ನೀಡುತ್ತಿದೆ. ಇನ್ನು ಈ ಫೋನ್‌ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ ಸ್ಟೋರ್ ಮೂಲಕ ಖರೀದಿಗೆ ಲಭ್ಯ ಇರುತ್ತದೆ.

ರಿಯಲ್‌ಮಿ 11 5G ಫೀಚರ್ಸ್‌ :
ಇತ್ತೀಚಿನ ರಿಯಲ್‌ಮಿ 11 5G ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಇದೆ.

Best Mobiles in India

English summary
Realme 11X 5G Sale Today via Flipkart. check offers, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+