Home
ಸುದ್ದಿಜಾಲ

ಇತ್ತೀಚಿಗೆ ಬಿಡುಗಡೆ ಆಗಿರುವ ಈ ರಿಯಲ್‌ಮಿ ಫೋನಿಗೆ ಈಗ ಭಾರೀ ಆಫರ್‌!

ಪ್ರಮುಖ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಒಂದಿಲ್ಲೊಂದು ರಿಯಾಯಿತಿ ಮಾರಾಟ ಮೇಳಗಳನ್ನು ಆಯೋಜಿಸುತ್ತದೆ. ಸದ್ಯ ಬಿಗ್ ಸೇವಿಂಗ್ ಡೇಸ್ ಮಾರಾಟ ಲೈವ್ ಇದ್ದು, (ಮೇ 9) ಇಂದೇ ಕೊನೆಯ ದಿನವಾಗಿದೆ. ಈ ಮಾರಾಟದಲ್ಲಿ ರಿಯಲ್‌ಮಿ 12 ಪ್ರೊ 5G ಫೋನ್ ಬೊಂಬಾಟ್ ಡಿಸ್ಕೌಂಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಬಿಗ್ ಸೇವಿಂಗ್ ಡೇಸ್ ಮಾರಾಟ ಚಾಲ್ತಿ ಇದೆ. ಈ ಸೇಲ್‌ನಲ್ಲಿ ರಿಯಲ್‌ಮಿ 12 ಪ್ರೊ 5G ಫೋನ್‌ ಶೇ. 20% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ 26,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ. ಇನ್ನು ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯ ಇರುವ ಇತರೆ ಬ್ಯಾಂಕ್‌ ಆಫರ್‌ಗಳನ್ನು ಪಡೆದರೆ, ಮತ್ತಷ್ಟು ರಿಯಾಯಿತಿ ಬೆಲೆಗೆ ಖರೀದಿಸಲು ಅವಕಾಶ ಇದೆ.

ಇತ್ತೀಚಿಗೆ ಬಿಡುಗಡೆ ಆಗಿರುವ ಈ ರಿಯಲ್‌ಮಿ ಫೋನಿಗೆ ಈಗ ಭಾರೀ ಆಫರ್‌!

ಅಂದಹಾಗೆ ರಿಯಲ್‌ಮಿ ಸಂಸ್ಥೆಯ ಸ್ನಾಪ್‌ಡ್ರಾಗನ್‌ 6 ಜೆನ್‌ 1 SoC ಪ್ರೊಸೆಸರ್‌ ಪವರ್‌ ಪಡೆದಿದ್ದು, ಇದರ ಜೊತೆಗೆ 4,410mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಇನ್ನು ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ರಿಯಲ್‌ಮಿ 12 ಪ್ರೊ 5G ಮೊಬೈಲ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 12 ಪ್ರೊ 5G ಫೀಚರ್ಸ್‌ ಹೀಗಿವೆ

ರಿಯಲ್‌ಮಿ 12 ಪ್ರೊ 5G ಫೋನ್ 2412 x 1080 ಪಿಕ್ಸೆಲ್ಸ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.7 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ OLED ಕರ್ವ್ಡ್‌ ಡಿಸ್‌ಪ್ಲೇ ಆಗಿದೆ. ಇದಲ್ಲದೆ ಡಿಸ್‌ಪ್ಲೇಯು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌, 2160Hz PWM ಡಿಮ್ಮಿಂಗ್‌ ಮತ್ತು 120Hz ರಿಫ್ರೆಶ್ ರೇಟ್‌ ವರೆಗೆ ಸಪೋರ್ಟ್‌ ಒದಗಿಸಲಿದೆ.

ರಿಯಲ್‌ಮಿ 12 ಪ್ರೊ 5G ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 6 ಜೆನ್‌ 1 SoC ಪ್ರೊಸೆಸರ್‌ನಲ್ಲಿ ಬಲದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM + 128GB ಹಾಗೂ 8GB RAM + 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆ ಪಡೆದುಕೊಂಡಿದೆ.

ರಿಯಲ್‌ಮಿ 12 ಪ್ರೊ 5G ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೋನಿ IMX 882 ಲೆನ್ಸ್‌ ಪಡೆದಿದೆ. ಎರಡನೇ ಕ್ಯಾಮೆರಾ 32ಎಂಪಿ ಸೋನಿ IMX 709 ಲೆನ್ಸ್‌ ಸಹ ಇದೆ. ಮೂರನೇ ಕ್ಯಾಮರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಾಗಿದೆ.

ರಿಯಲ್‌ಮಿ 12 ಪ್ರೊ 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 67W SUPERVOOC ಚಾರ್ಜರ್ ಅನ್ನು ಬೆಂಬಲಿಸಲಿದೆ. ಇದರಿಂದ ಕೇವಲ 28 ನಿಮಿಷಗಳಲ್ಲಿ ಸ್ಮಾರ್ಟ್‌ಫೋನ್‌ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡಬಹುದು.

ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಯುಎಸ್‌ಬಿ ಸಿ ಪೋರ್ಟ್‌ ನಂತಹ ಆಯ್ಕೆಗಳನ್ನು ಒಳಗೊಂಡಿದೆ. ಸಬ್‌ಮರೀನ್ ಬ್ಲೂ ಮತ್ತು ನ್ಯಾವಿಗೇಟರ್ ಬೀಜ್ ಕಲರ್‌ ಆಯ್ಕೆಗಳಲ್ಲಿ ಈ ಫೋನ್‌ ಲಭ್ಯ.

Best Mobiles in India

English summary
realme 12 Pro 5G Price Cut on Flipkart Big Saving Days Sale. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+