ಇಂದು ರಿಯಲ್‌ಮಿ 12 ಪ್ರೊ 5G ಮೊದಲ ಮಾರಾಟ: ಬೆಲೆ ಎಷ್ಟು, ಆಫರ್ ಏನಿದೆ?
ಜನಪ್ರಿಯ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದಾದ ರಿಯಲ್‌ಮಿ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರಿಯಲ್‌ಮಿ 12 ಪ್ರೊ 5G ಸ್ಮಾರ್ಟ್‌ಫೋನ್ ಸರಣಿಯು ತನ್ನ ಫೀಚರ್ಸ್‌ಗಳಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಸರಣಿ ಫೋನ್‌ಗಳು ಇಂದು (ಫೆಬ್ರವರಿ 6 ರಂದು) ಅಧಿಕೃತ ಒನ್‌ಪ್ಲಸ್ ಆನ್‌ಲೈನ್ ಸ್ಟೋರ್ ಹಾಗೂ ಫ್ಲಿಪ್‌ಕಾರ್ಟ್ (Flipkart) ಇಂಡಿಯಾ ಪ್ಲಾಟ್‌ಫಾರ್ಮ್ ಮೂಲಕ ಮೊದಲ ಮಾರಾಟ ಶುರು ಮಾಡಲಿದೆ.
ಹೌದು, ರಿಯಲ್‌ಮಿ 12 ಪ್ರೊ 5G ಸ್ಮಾರ್ಟ್‌ಫೋನ್ ಇಂದು ಫಸ್ಟ್ ಸೇಲ್ ಪ್ರಾರಂಭ ಮಾಡಲಿದೆ. ಈ ಫೋನ್ 8GB RAM + 128GB ಹಾಗೂ 8GB RAM + 256GB ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಸ್ನಾಪ್‌ಡ್ರಾಗನ್ 6 ಜೆನ್ 1 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ರಿಯಲ್‌ಮಿ 12 ಪ್ರೊ+ 5G ಫೋನಿನ 8GB RAM + 256GB ವೇರಿಯಂಟ್ ಬೆಲೆಯು 31,999ರೂ. ಆಗಿದೆ.

ರಿಯಲ್‌ಮಿ 12 ಪ್ರೊ 5G ಫೋನಿನ 8GB RAM + 128GB ವೇರಿಯಂಟ್ ಬೆಲೆಯು 25,999ರೂ. ಆಗಿದ್ದು, 8GB RAM + 256GB ಸ್ಟೋರೇಜ್ ವೇರಿಯಂಟ್ ದರವು 26,999ರೂ. ಆಗಿದೆ. ಹಾಗೆಯೇ ಫ್ಲಿಪ್‌ಕಾರ್ಟ್ ತಾಣದಲ್ಲಿ ಕೆಲವು ರಿಯಾಯಿತಿ ಆಫರ್ ಕೂಡಾ ಖರೀದಿದಾರರಿಗೆ ಸಿಗಲಿವೆ. ಹಾಗಾದರೆ ರಿಯಲ್‌ಮಿ 12 ಪ್ರೊ 5G ಫೋನಿನ ಇತರೆ ಫೀಚರ್ಸ್ ಯಾವುವು ಹಾಗೂ ಆಫರ್ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 12 ಪ್ರೊ 5G - ಫೀಚರ್ಸ್
ರಿಯಲ್‌ಮಿ 12 ಪ್ರೊ 5G ಮೊಬೈಲ್ 2412 x 1080 ಪಿಕ್ಸೆಲ್ಸ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.7 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ OLED ಕರ್ವ್ಡ್ ಡಿಸ್‌ಪ್ಲೇ ಆಗಿದೆ. ಇದಲ್ಲದೆ ಡಿಸ್‌ಪ್ಲೇಯು 240Hz ಟಚ್ ಸ್ಯಾಂಪ್ಲಿಂಗ್ ರೇಟ್, 2160Hz PWM ಡಿಮ್ಮಿಂಗ್ ಮತ್ತು 120Hz ರಿಫ್ರೆಶ್ ರೇಟ್ ವರೆಗೆ ಸಪೋರ್ಟ್ ಒದಗಿಸಲಿದೆ.
ರಿಯಲ್‌ಮಿ 12 ಪ್ರೊ 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 1 SoC ಪ್ರೊಸೆಸರ್‌ನಲ್ಲಿ ಬಲದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM + 128GB ಹಾಗೂ 8GB RAM + 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆ ಪಡೆದುಕೊಂಡಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX 882 ಲೆನ್ಸ್ ಪಡೆದಿದೆ. ದ್ವಿತೀಯ ಕ್ಯಾಮೆರಾ 32MP ಸೋನಿ IMX 709 ಲೆನ್ಸ್ ಸಹ ಇದೆ. ತೃತೀಯ ಕ್ಯಾಮರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ರಿಯಲ್‌ಮಿ 12 ಪ್ರೊ 5G (Realme 12 Pro 5G) ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು 67W SUPERVOOC ಚಾರ್ಜರ್ ಅನ್ನು ಬೆಂಬಲಿಸಲಿದೆ. ಇದರಿಂದ ಕೇವಲ 28 ನಿಮಿಷಗಳಲ್ಲಿ ಸ್ಮಾರ್ಟ್‌ಫೋನ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡಬಹುದು. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಯುಎಸ್‌ಬಿ ಸಿ ಪೋರ್ಟ್ ನಂತಹ ಆಯ್ಕೆಗಳನ್ನು ಒಳಗೊಂಡಿದೆ.
ರಿಯಲ್‌ಮಿ 12 ಪ್ರೊ 5G ಮೊಬೈಲ್ ಭಾರತದಲ್ಲಿ 8GB RAM + 128GB ಸ್ಟೋರೇಜ್ ಹಾಗೂ 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಈ ಫೋನ್ ಅನ್ನು ಗ್ರಾಹಕರು ಸಬ್‌ಮರೀನ್ ಬ್ಲೂ ಮತ್ತು ನ್ಯಾವಿಗೇಟರ್ ಬೀಜ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








