Home
ಸುದ್ದಿಜಾಲ

ಬರಲಿದೆ ಹೊಸ ರಿಯಲ್‌ಮಿ 12 ಸ್ಮಾರ್ಟ್‌ಫೋನ್‌: ಕ್ಯಾಮೆರಾದಲ್ಲಿರಲಿದೆ ಅಚ್ಚರಿಯ ಫೀಚರ್ಸ್!

ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ 12 ಸ್ಮಾರ್ಟ್‌ಪೋನ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳನ್ನು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ ಹೊಸ ಸಂಚಲನ ಕ್ರಿಯೆಟ್‌ ಆಗಿದ್ದು, ಸ್ಮಾರ್ಟ್‌ಫೋನ್‌ ಪ್ರಿಯರ ಗಮನಸೆಳೆದಿದೆ. ಇನ್ನು ಈ ಸ್ಮಾರ್ಟ್‌ಪೊನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7050 SoC ಪ್ರೊಸೆಸರ್‌ನಲ್ಲಿ ಬರಲಿದೆ.

ಹೌದು, realme 12 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ FHD+ ಅಮೋಲೆಡ್ ಡಿಸ್‌ಪ್ಲೇ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಇನ್ನು ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆಯಲ್ಲಿ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಇರಲಿದೆ ಎನ್ನಲಾಗಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಹಾಗಾದ್ರೆ ಹೊಸ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬರಲಿದೆ ಹೊಸ ರಿಯಲ್‌ಮಿ 12 ಸ್ಮಾರ್ಟ್‌ಫೋನ್‌: ಕ್ಯಾಮೆರಾದಲ್ಲಿ ಅಚ್ಚರಿಯ ಫೀಚರ್ಸ್!

ರಿಯಲ್‌ಮಿ 12 ಡಿಸ್‌ಪ್ಲೇ ರಚನೆ ಸಾಧ್ಯತೆ
ರಿಯಲ್‌ಮಿ 12 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇಯು 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿರಲಿದೆ. ಇದು 1500:1 ಸ್ಕ್ರೀನ್ ಕಾಂಟ್ರಾಸ್ಟ್, 400 ನಿಟ್ ಬ್ರೈಟ್‌ನೆಸ್ ಹಾಗೂ 120 Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ. ಜೊತೆಗೆ 360 Hz ಟಚ್ ಸ್ಯಾಂಪ್ಲಿಂಗ್ ರೇಟ್‌ನಲ್ಲಿರಲಿದೆ.

ರಿಯಲ್‌ಮಿ 12 ಪ್ರೊಸೆಸರ್‌ ನಿರೀಕ್ಷೆ?
ರಿಯಲ್‌ಮಿ 12 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7050 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 14ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 6GB RAM ಮತ್ತು 128GB, 8GB RAM ಮತ್ತು 256GB ಹಾಗೂ 12GB RAM ಮತ್ತು 512GB ಇಂಟರ್‌ ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ. ಈ ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶವನ್ನು ನೀಡಲಿದೆ.

ರಿಯಲ್‌ಮಿ 12 ಕ್ಯಾಮೆರಾ ವಿಶೇಷತೆ

ರಿಯಲ್‌ಮಿ 12 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಎಂಟ್ರಿ ನೀಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ನೊಂದಿಗೆ ಬರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಲಿದೆ ಎಂದು ವರದಿಯಾಗಿದೆ.

ಬರಲಿದೆ ಹೊಸ ರಿಯಲ್‌ಮಿ 12 ಸ್ಮಾರ್ಟ್‌ಫೋನ್‌: ಕ್ಯಾಮೆರಾದಲ್ಲಿ ಅಚ್ಚರಿಯ ಫೀಚರ್ಸ್!

ರಿಯಲ್‌ಮಿ 12 ಬ್ಯಾಟರಿ ಮತ್ತು ಇತರೆ ಸೌಲಭ್ಯ
ರಿಯಲ್‌ಮಿ 12 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, Wi-Fi 6 802.11 ax (2.4GHz + 5GHz), ಬ್ಲೂಟೂತ್ 5.3, ಡ್ಯುಯಲ್-ಫ್ರೀಕ್ವೆನ್ಸಿ GPS/ GLONASS/ Beidou ಹಾಗೂ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸಹ ಪಡೆದಿದೆ.

ರಿಯಲ್‌ಮಿ 12 ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ 12 ಸ್ಮಾರ್ಟ್‌ಪೊನ್‌ ಮುಂದಿನ ತಂಗಳು ಮೊದಲಿಗೆ ಚೀನಾದಲ್ಲಿ ಬಿಡುಗಡೆ ಆಗುವ ನಿರೀಕ್ಷೆಯಿದೆ. ನಂತರದ ದಿನಗಳಲ್ಲಿ ಭಾರತ ಸೇರಿದಂತೆ ಇತರ ಮಾರುಕಟ್ಟೆಗಳಲ್ಲಿ ಫೋನ್ ಬಿಡುಗಡೆಯಾಗಲಿದೆ ಎಂದು ನಾವು ನಿರೀಕ್ಷಿಸಬಹುದಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳನ್ನು ಗಮನಿಸಿದರೆ ಇದು ಮಧ್ಯಮ ಶ್ರೇಣಿಯ ಬೆಲೆ ವಿಭಾಗದಲ್ಲಿ ಬರಬಹುದು ಎಂದು ಅಂದಾಜಿಸಲಾಗಿದೆ. ಇದರ ಕಲರ್‌ ಆಯ್ಕೆಗಳ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
realme 12 Smartphone with 6.7″ FHD+ AMOLED display gets certified: Report
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+