Home
ಸುದ್ದಿಜಾಲ

ರಿಯಲ್‌ಮಿ 12+ 5G ಸ್ಮಾರ್ಟ್‌ಫೋನ್‌ ಅನಾವರಣ: ಫೀಚರ್ಸ್‌ ಹೇಗಿದೆ

ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ರಿಯಲ್‌ಮಿ 12+ 5G ಸ್ಮಾರ್ಟ್‌ಫೋನ್‌ ಅನಾವಣಗೊಂಡಿದೆ. ಭಾರತದಲ್ಲಿ ಬಿಡುಗಡೆ ಆಗುವುದಕ್ಕೂ ಮುನ್ನವೆ ಮಲೇಷ್ಯಾದಲ್ಲಿ ನಡೆದ ಈವೆಂಟ್‌ನಲ್ಲಿ ಪರಿಚಯಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7050 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಐಷಾರಾಮಿ ವಾಚ್ ವಿನ್ಯಾಸವನ್ನು ಹೊಂದಿದೆ.

ಹೌದು, ರಿಯಲ್‌ಮಿ 12+ 5G ಸ್ಮಾರ್ಟ್‌ಫೋನ್‌ ಅನಾವರಣಗೊಂಡಿದೆ. ಇದು ಪಯೋನೀರ್ ಗ್ರೀನ್ ಮತ್ತು ನ್ಯಾವಿಗೇಟರ್ ಬೀಜ್ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗುತ್ತಿದೆ. ಇನ್ನು ಸ್ಮಾರ್ಟ್‌ಫೋನ್‌ 12GB RAM ಮತ್ತು 256GB ಸ್ಟೋರೇಜ್‌ ಆಯ್ಕೆಯನ್ನು ಪಡೆದುಕೊಂಡಿದೆ. ಜೊತೆಗೆ ಸ್ಮಾರ್ಟ್‌ಫೋನ್‌ ರೈನ್‌ವಾಟರ್ ಸ್ಮಾರ್ಟ್ ಟಚ್ ಅನ್ನು ಹೊಂದಿದ್ದು, ಬಳಕೆದಾರರಿಗೆ ಬಳಕೆಯ ಸಮಯದಲ್ಲಿ ಹೆಚ್ಚಿನ ಸೌಕರ್ಯ ಮತ್ತು ನಿಖರತೆಯನ್ನು ಒದಗಿಸಲಿದೆ. ಹಾಗಾದ್ರೆ ರಿಯಲ್‌ಮಿ 12+ 5G ಸ್ಮಾರ್ಟ್‌ಫೋನಿನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ 12+ 5G ಸ್ಮಾರ್ಟ್‌ಫೋನ್‌ ಅನಾವರಣ: ಫೀಚರ್ಸ್‌ ಹೇಗಿದೆ

ರಿಯಲ್‌ಮಿ 12+ 5G ಸ್ಮಾರ್ಟ್‌ಫೋನ್‌ ಫೀಚರ್ಸ್‌ ಹೇಗಿದೆ?
ರಿಯಲ್‌ಮಿ 12+ 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 2400 × 1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದ್ದು, 2000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ಒಳಗೊಂಡಿದೆ.

ರಿಯಲ್‌ಮಿ 12+ 5G ಪ್ರೊಸೆಸರ್‌ ಯಾವುದು?
ರಿಯಲ್‌ಮಿ 12+ 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್ ಹೊಂದಿದೆ. ಜೊತೆಗೆ ಮಾಲಿ-G68 MC4 GPU ಸಪೋರ್ಟ್‌ ಪಡೆದಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ರಿಯಲ್‌ಮಿ 12+ 5G ಕ್ಯಾಮೆರಾ ಸೆಟಪ್‌ ಏನಿದೆ?
ರಿಯಲ್‌ಮಿ 12+ 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ Sony LYT-600 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರಿಯಲ್‌ಮಿ 12+ 5G ಸ್ಮಾರ್ಟ್‌ಫೋನ್‌ ಅನಾವರಣ: ಫೀಚರ್ಸ್‌ ಹೇಗಿದೆ

ರಿಯಲ್‌ಮಿ 12+ 5G ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ 12+ 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ನೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/NSA, ಡ್ಯುಯಲ್ 4G VoLTE, Wi-Fi 6 802.11 ax (2.4GHz + 5GHz), ಬ್ಲೂಟೂತ್ 5.3, ಡ್ಯುಯಲ್-ಫ್ರೀಕ್ವೆನ್ಸಿ GPS/ GLONASS/ Beidou, USB ಟೈಪ್-C, NFCಯೊಂದಿಗೆ ಬರಲಿದೆ.

ರಿಯಲ್‌ಮಿ 12+ 5G ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ 12+ 5G ಸ್ಮಾರ್ಟ್‌ಫೋನ್‌ 12GB + 256GB ಸ್ಟೋರೇಜ್‌ ಆಯ್ಕೆಗೆ RM1,499 (ಅಂದಾಜು 26,090ರೂ) ಬೆಲೆ ಹೊಂದಿದೆ. ಇದು ಪಯೋನೀರ್ ಗ್ರೀನ್ ಮತ್ತು ನ್ಯಾವಿಗೇಟರ್ ಬೀಜ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಪ್ರಸ್ತುತ ಮಲೇಷ್ಯಾದಲ್ಲಿ ಮಾರಾಟವಾಗುತ್ತಿದ್ದು, ಮುಂದಿನ ವಾರ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಇನ್ನು ಈ ಫೋನ್ ಐಷಾರಾಮಿ ವಾಚ್ ವಿನ್ಯಾಸವನ್ನು ಹೊಂದಿದ್ದು, ಗ್ರಾಹಕರನ್ನು ಸೆಳೆಯುತ್ತಿದೆ. ಇದು ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿದ ನಂತರ ಇದರ ಬೆಲೆ ವಿವರಗಳು ತಿಳಿಯಲಿದೆ.

Best Mobiles in India

English summary
Realme 12plus 5G Smartphone With Sony LYT-600 sensor announced: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+