Home
ಸುದ್ದಿಜಾಲ

ಇಯರ್‌ ಎಂಡ್‌ ಆಫರ್‌!..ರಿಯಲ್‌ಮಿ 12X 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ರಿಯಲ್‌ಮಿ ಮೊಬೈಲ್‌ ಕಂಪನಿಯ ಬಹುತೇಕ ಮೊಬೈಲ್‌ಗಳು ಗ್ರಾಹಕರ ಗಮನ ಸೆಳೆದಿವೆ. ಅವುಗಳ ಪೈಕಿ ರಿಯಲ್‌ಮಿ 12X 5G (Realme 12x 5G) ಮೊಬೈಲ್‌ ಸಹ ಸಖತ್‌ ಫೀಚರ್ಸ್‌ಗಳಿಂದ ಸದ್ದು ಮಾಡಿದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ಸೌಲಭ್ಯ ಒಳಗೊಂಡಿದ್ದು, ಸ್ಕ್ರೀನ್‌ 120Hz ರಿಫ್ರೆಶ್‌ ರೇಟ್‌ ಹೊಂದಿದೆ. ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ಬೆಲೆ ಇಳಿಕೆ ಪಡೆದಿದ್ದು, ಖರೀದಿದಾರರು ಅಚ್ಚರಿ ಎನ್ನುವಂತೆ ಆಗಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸದ್ಯ 'ಮೊಬೈಲ್ಸ್‌ ಇಯರ್‌ ಎಂಡ್‌ ಸೇಲ್‌' (Mobiles Year End Sale) ಲೈವ್‌ ಇದೆ. ಈ ಸೇಲ್‌ನಲ್ಲಿ ರಿಯಲ್‌ಮಿ 12X 5G (Realme 12x 5G) ಮೊಬೈಲ್‌ ಶೇ. 30% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್‌ನ 6 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 12,499ರೂ. ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಬಹುದಾಗಿದೆ.

ಇಯರ್‌ ಎಂಡ್‌ ಆಫರ್‌!..ರಿಯಲ್‌ಮಿ 12X 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಇನ್ನು ಈ ಸ್ಮಾರ್ಟ್‌ಫೋನ್‌ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಮೊದಲ ಕ್ಯಾಮೆರಾ ಪಡೆದಿದ್ದು, ಇದರ ಜೊತೆಗೆ 5000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಸೌಲಭ್ಯವನ್ನು ಪಡೆದಿದೆ. ಇನ್ನು ಇದು ಟ್ವಿಲೈಟ್‌ ಪರ್ಪಲ್‌ ಹಾಗೂ ವುಡ್‌ಲ್ಯಾಂಡ್‌ ಗ್ರೀನ್‌ ಕಲರ್‌ ಆಯ್ಕೆ ಪಡೆದಿದೆ. ಹಾಗಾದರೇ ರಿಯಲ್‌ಮಿ 12X 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್‌ಮಿ 12X 5G ಫೋನ್‌ ಫೀಚರ್ಸ್‌

ರಿಯಲ್‌ಮಿ 12X 5G ಮೊಬೈಲ್‌ 6.72 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ರಚನೆ ಪಡೆದಿದ್ದು, ಹಾಗೆಯೇ 1080 x 2400 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಅಲ್ಲದೇ ಇದು 120 Hz ರಿಫ್ರೆಶ್‌ ರೇಟ್‌ ಆಯ್ಕೆ ಒಳಗೊಂಡಿದ್ದು, 91.40% ಅನುಪಾತವನ್ನು ಕೂಡಾ ಪಡೆದಿದೆ. ಹಾಗೆಯೇ ಈ ಫೋನ್ 950 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ.

ರಿಯಲ್‌ಮಿ 12X 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಇದು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಪಡೆದಿದೆ. ಅಲ್ಲದೇ 4GB/6GB/8GB RAM ವೇರಿಯಂಟ್‌ ಆಯ್ಕೆಗಳಲ್ಲಿ ಇದು ಲಭ್ಯ. ಇದರೊಂದಿಗೆ 8GB ಡೈನಾಮಿಕ್ RAM ಸೌಲಭ್ಯ ಸಹ ಸಿಗಲಿದೆ.

ರಿಯಲ್‌ಮಿ 12X 5G ಮೊಬೈಲ್‌ ಈ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇನ್ನು ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೆಟ್‌ಅಪ್‌ ಪಡೆದಿದೆ. ಇನ್ನು ಮುಂಭಾಗದಲ್ಲಿ ಈ ಫೋನ್‌ 8 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ 1080P@30fps ಸಪೋರ್ಟ್‌ನಲ್ಲಿ ವಿಡಿಯೋ ರೆಕಾರ್ಡಿಂಗ್‌ ಮಾಡಬಹುದು.

ರಿಯಲ್‌ಮಿ 12X 5G ಮೊಬೈಲ್‌ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 45W SuperVOOC ಚಾರ್ಜಿಂಗ್‌ ಸಪೋರ್ಟ್‌ ಪಡೆದಿದೆ. ಅಲ್ಲದೇ ಏರ್‌ ಗೆಸ್ಚರ್‌ ಸೌಲಭ್ಯ, IP54 ರೇಟಿಂಗ್‌ ಆಯ್ಕೆ ಹಾಗೂ ಡ್ಯುಯಲ್‌ ಸ್ಟಿರಿಯೋ ಸ್ಪೀಕರ್‌ ಸೌಲಭ್ಯದ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈ-ಫೈ, ಯುಎಸ್‌ಬಿ ಸಿ ಟೈಪ್‌ ಆಯ್ಕೆಗಳು ಇದೆ.

Best Mobiles in India

English summary
Realme 12x 5G huge price drop on Flipkart Mobiles Year End Sale. Check offer and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+